ಜೂನ್‌ 21ರಂದು ನೀಟ್‌ ಪರೀಕ್ಷೆ : ಪ್ರವೇಶ ಪತ್ರ ಬಿಡುಗಡೆ

ಬೆಂಗಳೂರು : ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ಜೂನ್ 21  ರಂದು ನಡೆಯಲಿರುವ ‘ನೀಟ್-ಯುಜಿ 2026  ಮರು ಪರೀಕ್ಷೆಯ ಪ್ರವೇಶ ಪತ್ರಗಳನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ  ಅಧಿಕೃತವಾಗಿ ಬಿಡುಗಡೆ ಮಾಡಿದೆ.

ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಎನ್‌ಟಿಎಯ ಅಧಿಕೃತ ವೆಬ್‌ಸೈಟ್‌ ಮೂಲಕ ತಮ್ಮ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ neet.nta.nic.in ಗೆ ಭೇಟಿ ನೀಡಿ, ತಮ್ಮ ಅರ್ಜಿ ಸಂಖ್ಯೆ ಮತ್ತು ಪಾಸ್‌ವರ್ಡ್ ಅಥವಾ ಜನ್ಮ ದಿನಾಂಕವನ್ನು ಬಳಸಿ ಲಾಗಿನ್ ಆಗುವ ಮೂಲಕ ಪ್ರವೇಶ ಪತ್ರವನ್ನು ಪಡೆಯಬಹುದು.

ಹಿಂದೆ ರದ್ದಾದ ಪರೀಕ್ಷೆಗೆ ನೀಡಲಾಗಿದ್ದ ಹಳೆಯ ಪ್ರವೇಶ ಪತ್ರವು ಈ ಮರು ಪರೀಕ್ಷೆಗೆ ಮಾನ್ಯವಾಗಿರುವುದಿಲ್ಲ. ಹೀಗಾಗಿ ಪರೀಕ್ಷಾರ್ಥಿಗಳು ಕಡ್ಡಾಯವಾಗಿ ಹೊಸ ಪ್ರವೇಶ ಪತ್ರವನ್ನೇ ಡೌನ್‌ಲೋಡ್ ಮಾಡಿಕೊಂಡು ಪರೀಕ್ಷಾ ಕೇಂದ್ರಕ್ಕೆ ತರಬೇಕು ಎಂದು ಎನ್‌ಟಿಎ ಸ್ಪಷ್ಟಪಡಿಸಿದೆ.

ದೇಶದಾದ್ಯಂತ ಸುಮಾರು 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗುವ ನಿರೀಕ್ಷೆಯಿದೆ. ಜೂನ್ 21ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5:15ರವರೆಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಗೊಂದಲವಾಗದಂತೆ ಹಾಗೂ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಎಲ್ಲಾ ರೀತಿಯ ಭದ್ರತೆ ಮತ್ತು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿದ ಬಳಿಕ, ಅದರಲ್ಲಿ ನಮೂದಿಸಿರುವ ಅಭ್ಯರ್ಥಿಯ ಹೆಸರು, ರೋಲ್ ನಂಬರ್, ಪರೀಕ್ಷಾ ಕೇಂದ್ರದ ವಿಳಾಸ, ವರದಿ ಮಾಡುವ ಸಮಯ ಮತ್ತು ಪರೀಕ್ಷಾ ನಿಯಮಗಳನ್ನು ಎರಡು ಬಾರಿ ಕೂಲಂಕಷವಾಗಿ ಪರಿಶೀಲಿಸಿಕೊಳ್ಳುವಂತೆ ಅಭ್ಯರ್ಥಿಗಳಿಗೆ ಸೂಚಿಸಲಾಗಿದೆ.

ಮಾಹಿತಿಯಲ್ಲಿ ಯಾವುದೇ ಲೋಪಗಳಿದ್ದಲ್ಲಿ ತಕ್ಷಣವೇ ಎನ್‌ಟಿಎ ಸಹಾಯವಾಣಿಯನ್ನು ಸಂಪರ್ಕಿಸಬಹುದು. ಪರೀಕ್ಷಾ ಕೇಂದ್ರಕ್ಕೆ ತೆರಳುವಾಗ ಪ್ರವೇಶ ಪತ್ರದ ಪ್ರಿಂಟ್‌ಔಟ್ ಜೊತೆಗೆ ಕಡ್ಡಾಯವಾಗಿ ಅಧಿಕೃತ ಭಾವಚಿತ್ರವಿರುವ ಗುರುತಿನ ಚೀಟಿಯನ್ನು ಕೊಂಡೊಯ್ಯುವುದು ಕಡ್ಡಾಯವಾಗಿದೆ. 

More articles

Latest article

Most read