ನೈರುತ್ಯ ರೈಲ್ವೆಯ ಪದೋನ್ನತಿ ಪರೀಕ್ಷೆ : ಕನ್ನಡವಿಲ್ಲದೇ ಪರೀಕ್ಷೆ ನಡೆಸದರೆ ಆಗುವ ಪರಿಣಾಮಕ್ಕೆ ರೈಲ್ವೆ ಇಲಾಖೆಯೇ ಹೊಣೆ : ಕರವೇ ಎಚ್ಚರಿಕೆ

ಕನ್ನಡ ಭಾಷೆಯನ್ನು ಸೇರಿಸುವ ಮೂಲಕ ಮುಂದೂಡಬೇಕು

ಬೆಂಗಳೂರು :  ನೈರುತ್ಯ ರೈಲ್ವೆ ಮತ್ತೆ ಕನ್ನಡವಿಲ್ಲದೆ ಪದೋನ್ನತಿ ಪರೀಕ್ಷೆ ನಡೆಸಲು ಮುಂದಾಗಿದೆ. ಇದು ಕನ್ನಡಿಗರ ಮೇಲೆ ಹೂಡಲಾಗಿರುವ ಮೋಸದ ಯುದ್ಧ ಎಂದೇ ನಾವು ಪರಿಗಣಿಸುತ್ತೇವೆ ಮತ್ತು ಇದಕ್ಕೆ ತಕ್ಕ ಉತ್ತರವನ್ನು ನೀಡುತ್ತೇವೆ. ಒಂದು ವೇಳೆ ಕನ್ನಡವಿಲ್ಲದ ಪರೀಕ್ಷೆ ನಡೆಸಲು ಮುಂದಾದರೆ ರೈಲ್ವೆ ಇಲಾಖೆ ಹಿಂದೆಂದೂ ಎದುರಿಸದ ಉಗ್ರ ಸ್ವರೂಪದ ಹೋರಾಟವನ್ನು ಎದುರಿಸಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಧ್ಯಕ್ಷ ಟಿ.ಎ.ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ. 

 ಕನ್ನಡಿಗರ ಹಕ್ಕುಗಳನ್ನು ಹೊಸಕಿ ಹಾಕುವ ಇಂಥ ದ್ರೋಹದ ವಿರುದ್ಧ ನಾವೂ ಸಹ ತೊಡೆತಟ್ಟಿ ನಿಲ್ಲುತ್ತೇವೆ.  ಒಂದೇ ರೈಲ್ವೆ ಇಲಾಖೆ ತಪ್ಪು ತಿದ್ದಿಕೊಳ್ಳಬೇಕು, ಇಲ್ಲವಾದಲ್ಲಿ ಆಗುವ ಎಲ್ಲ ಅನಾಹುತಗಳಿಗೆ ತಾನೇ ಜವಾಬ್ದಾರಿ ಹೊರಬೇಕಾಗುತ್ತದೆ ಎಂದು ಸ್ಪಷ್ಟ ಎಚ್ಚರಿಕೆ ಸಾರಿದ್ದಾರೆ. 

ನೈರುತ್ಯ ರೈಲ್ವೆ, ಮೈಸೂರು ವಿಭಾಗವು  ಜೂ. 04.  ರಂದು ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಗುಡ್ಸ್ ಟ್ರೇನ್ ಮ್ಯಾನೇಜರ್  ಹುದ್ದೆಯನ್ನು ಲೆವೆಲ್-5ರಲ್ಲಿ 15% LDCE ಕೋಟಾ ಅಡಿಯಲ್ಲಿ ಭರ್ತಿ ಮಾಡುವ ಸಂಬಂಧದಲ್ಲಿ ಜೂನ್ 25, 2026 (ಶುಕ್ರವಾರ) ಕಂಪ್ಯೂಟರ್ ಬೇಸ್ಡ್ ಟೆಸ್ಟ್ (CBT) ಪದೋನ್ನತಿ ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿದೆ. ಇದೇ ರೀತಿ ಹುಬ್ಬಳ್ಳಿ ಮತ್ತು ಬೆಂಗಳೂರು ವಿಭಾಗಗಳಲ್ಲೂ ಪರೀಕ್ಷೆಗಳು ನಡೆಯುತ್ತಿವೆ. ಆದರೆ ಈ ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಮಾತ್ರ ಸಿದ್ಧಪಡಿಸಲಾಗುತ್ತಿದೆ. ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶವನ್ನು ನೀಡದಿರುವುದು ಕರ್ನಾಟಕದ ಕನ್ನಡಿಗರ ಮೇಲೆ ನಡೆಸುತ್ತಿರುವ  ಘೋರ ಅನ್ಯಾಯ ಮತ್ತು ಭಾಷಾ ಹಕ್ಕುಗಳನ್ನು ಕಿತ್ತುಕೊಳ್ಳುವ ದೊಡ್ಡ ಸಂಚಾಗಿದೆ ಎಂದು ಕಿಡಿಕಾರಿದ್ದಾರೆ. 

ಕರ್ನಾಟಕ ರಕ್ಷಣಾ ವೇದಿಕೆಯು ರೈಲ್ವೆ ಇಲಾಖೆಯಲ್ಲಿ ಕನ್ನಡ ಭಾಷೆಯನ್ನು ಸೇರಿಸುವ ಬೇಡಿಕೆಯನ್ನು ಹಿಂದಿನಿಂದಲೂ ನಿರಂತರವಾಗಿ ಪ್ರತಿಭಟನೆಗಳ ಮೂಲಕ ಒತ್ತಾಯಪಡಿಸುತ್ತಾ ಬಂದಿದೆ. ಅನೇಕ ಬಾರಿ ರೈಲ್ವೆ ಬೋರ್ಡ್, ನೈರುತ್ಯ ರೈಲ್ವೆ ಆಡಳಿತ ಮತ್ತು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ, ಅವರು ಕನ್ನಡಿಗರ ಭಾಷಾ ಹಕ್ಕುಗಳನ್ನು ನಿರ್ಲಕ್ಷಿಸುತ್ತಲೇ ಇದ್ದಾರೆ. ಈ ಬಾರಿಯೂ ಅದೇ ನಿರ್ಲಜ್ಜ ಮತ್ತು ಹೇಯ ನೀತಿ ಮುಂದುವರೆದಿದೆ. ರೈಲ್ವೆಯಲ್ಲಿ ಗುಡ್ಸ್ ಟ್ರೇನ್ ಮ್ಯಾನೇಜರ್ ಹುದ್ದೆಗೆ ಅರ್ಹರಾಗಿರುವ ನೂರಾರು ಕನ್ನಡಿಗ ಉದ್ಯೋಗಿಗಳು ಈ ಪರೀಕ್ಷೆಯಲ್ಲಿ ಭಾಗವಹಿಸಲು ಸಿದ್ಧರಿದ್ದರೂ, ಅವರಿಗೆ ತಾಯಿನುಡಿಯಲ್ಲಿ ಪರೀಕ್ಷೆ ಬರೆಯುವ ಅವಕಾಶವನ್ನು ನಿರಾಕರಿಸಲಾಗಿದೆ. ಇದು ಕನ್ನಡಿಗರ ಅಸ್ತಿತ್ವ, ಸ್ವಾಭಿಮಾನ ಮತ್ತು ಸಮಾನ ಅವಕಾಶಗಳ ಮೇಲಿನ ನೇರ ದಾಳಿಯಾಗಿದೆ ಎಂದು ಖಂಡಿಸಿದ್ದಾರೆ. .

ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿದ್ದು, ಸಂವಿಧಾನದ ಪ್ರಕಾರ ಪ್ರಾದೇಶಿಕ ಭಾಷೆಗಳಿಗೆ ಗೌರವ ನೀಡಬೇಕು ಎಂಬುದು ಸ್ಪಷ್ಟವಾಗಿದೆ. ಆದರೆ ರೈಲ್ವೆ ಇಲಾಖೆಯು ಇತರ ರಾಜ್ಯಗಳಲ್ಲಿ ಪ್ರಾದೇಶಿಕ ಭಾಷೆಗಳನ್ನು ಗೌರವಿಸುತ್ತಿದ್ದರೂ, ಕರ್ನಾಟಕದಲ್ಲಿ ಮಾತ್ರ ಕನ್ನಡವನ್ನು ನಿರಾಕರಿಸುವುದು ಉದ್ದೇಶಪೂರ್ವಕವಾದ ತಾರತಮ್ಯವಾಗಿದೆ. ನೈರುತ್ಯ ರೈಲ್ವೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗ ಉದ್ಯೋಗಿಗಳಿದ್ದರೂ, ಅವರ ಭಾಷಾ ಹಕ್ಕುಗಳನ್ನು ಕಸಿದುಕೊಳ್ಳುವುದು ಸಹಿಸಲಾಗದು. ಈ ಪರೀಕ್ಷೆಯು 110 ಪ್ರಶ್ನೆಗಳನ್ನು ಒಳಗೊಂಡಿದ್ದು, ಋಣಾತ್ಮಕ ಮಾರ್ಕಿಂಗ್ ಇರುವಂತಹ ಕಠಿಣ ಪರೀಕ್ಷೆಯಾಗಿದೆ. ಇಂತಹ ಪರೀಕ್ಷೆಯಲ್ಲಿ ತಾಯಿನುಡಿಯಲ್ಲಿ ಬರೆಯುವ ಅವಕಾಶವನ್ನು ನಿರಾಕರಿಸುವುದು ಕನ್ನಡಿಗರನ್ನು ಉದ್ದೇಶಪೂರ್ವಕವಾಗಿ ತುಳಿಯುವ ಕೃತ್ಯವಾಗಿದೆ.

ರೈಲ್ವೆ ಬೋರ್ಡ್ ಮತ್ತು ನೈರುತ್ಯ ರೈಲ್ವೆ ಆಡಳಿತವು ತಕ್ಷಣವೇ ಈ ಪರೀಕ್ಷೆಯನ್ನು ರದ್ದುಗೊಳಿಸಬೇಕು ಅಥವಾ ಕನ್ನಡ ಭಾಷೆಯನ್ನು ಸೇರಿಸುವ ಮೂಲಕ ಮುಂದೂಡಬೇಕು. ರೈಲ್ವೆ ನೇಮಕಾತಿ ಮತ್ತು ಪದೋನ್ನತಿ ಪರೀಕ್ಷೆಗಳು ಕನ್ನಡದಲ್ಲೇ ನಡೆಯಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. 

ಜೂನ್ 25 ರಂದು ಈ ಪರೀಕ್ಷೆಯನ್ನು ಯಾವುದೇ ಕಾರಣಕ್ಕೂ ನಡೆಸಲು ಬಿಡುವುದಿಲ್ಲ. ಮೈಸೂರು, ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ದೊಡ್ಡ ಪ್ರಮಾಣದ ಅನಾಹುತಗಳು ಮತ್ತು ಗಲಭೆಗಳು ನಡೆಯುವ ಸಾಧ್ಯತೆ ಇದೆ. ಇದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಯಾವುದೇ ರೀತಿಯಲ್ಲಿ ಜವಾಬ್ದಾರಿಯಲ್ಲ ಎಂದು ಗಂಭೀರ ಎಚ್ಚರಿಕೆ ನೀಡುತ್ತೇನೆ. ಕರವೇ ಸದಸ್ಯರು, ಕನ್ನಡಿಗ ಉದ್ಯೋಗಿಗಳು ಮತ್ತು ಸಾರ್ವಜನಿಕರು ಈ ಅನ್ಯಾಯದ ವಿರುದ್ಧ ತೀವ್ರ ಪ್ರತಿಭಟನೆ ಮತ್ತು ಹೋರಾಟಕ್ಕೆ ಸಂಪೂರ್ಣ ಸಿದ್ಧರಿದ್ದಾರೆ. ರೈಲ್ವೆ ಆಡಳಿತವು ಈ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸದಿದ್ದರೆ, ಪರಿಣಾಮಗಳು ತೀವ್ರವಾಗಿರುತ್ತವೆ ಎಂದು ಎಚ್ಚರಿಸಿದ್ದಾರೆ. 

ಕನ್ನಡಿಗರ ಭಾಷಾ ಹಕ್ಕುಗಳನ್ನು ಉಳಿಸಲು ನಾವು ಕಟಿಬದ್ಧರಾಗಿದ್ದೇವೆ. ರೈಲ್ವೆಯಲ್ಲಿ ಕನ್ನಡದ ಸ್ಥಾನಕ್ಕೆ ಕುತ್ತು ತರುವ ಶಕ್ತಿಗಳನ್ನು ನಾವು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದಿದ್ದಾರೆ. 

More articles

Latest article

Most read