ರಾಜ್ಯದ ಮತದಾರರಿಗೆ ಮಾತ್ರ ಪಂಚ ಗ್ಯಾರಂಟಿ : ಆರ್ಥಿಕ ಸಬಲರು ಗ್ಯಾರಂಟಿ ಸೌಲಭ್ಯ ಬಳಸದಿರಲು ಮನವಿ

ಬೆಂಗಳೂರು : ರಾಜ್ಯದ ಮತದಾರರಿಗೆ ಮಾತ್ರ ಗ್ಯಾರಂಟಿ ಯೋಜನೆಗಳು ಸಿಗಬೇಕು ಎಂದು ಕಟ್ಟು ನಿಟ್ಟಾಗಿ ಸೂಚನೆ ನೀಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆರ್ಥಿಕವಾಗಿ ಸದೃಢರಾಗಿರುವ ಸಾರ್ವಜನಿಕರು ಯಾರಾದರೂ ಸ್ವಯಂಪ್ರೇರಿತವಾಗಿ ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಟ್ಟರೆ ಅಂತವರಿಗೆ ಪ್ರೋತ್ಸಾಹ ನೀಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಕಂಡುಬರುತ್ತಿರುವ ಲೋಪದೋಷಗಳು ಹಾಗೂ ಆಡಿಟರ್ ಜನರಲ್ ವರದಿಯಲ್ಲಿನ ಆತಂಕಕಾರಿ ಅಂಶಗಳ ಕುರಿತು ಕೂಲಂಕಷವಾಗಿ ಚರ್ಚಿಸಿದರು.

ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದ ಕೆಲವರು ಏರ್‌ಟೆಲ್ ಬ್ಯಾಂಕ್‌ನಲ್ಲಿ ಯುಪಿಐ ಖಾತೆಗಳನ್ನು ತೆರೆದು ಯೋಜನೆ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳನ್ನು ಅಧಿಕಾರಿಗಳು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ನಮ್ಮ ರಾಜ್ಯದ ಯೋಜನೆಗಳು ನಮ್ಮ ರಾಜ್ಯದ ಜನರಿಗೆ ಮಾತ್ರ ಸಿಗಬೇಕು. ಹೊರರಾಜ್ಯಗಳಲ್ಲಿರುವ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗುತ್ತಿರುವುದಕ್ಕೆ ತಕ್ಷಣ ತಡೆ ಹಾಕಬೇಕು. ಬೇರೆ ರಾಜ್ಯದ ಮತದಾರರು ಇದರ ಲಾಭ ಪಡೆಯುವುದನ್ನು ತಡೆಯಬೇಕು ಎಂದು ಸ್ಪಷ್ಟಪಡಿಸಿದರು.

ಸ್ವಯಂಪ್ರೇರಿತವಾಗಿ ಬಿಟ್ಟುಕೊಡುವವರಿಗೆ ಪ್ರೋತ್ಸಾಹ:
ಆರ್ಥಿಕವಾಗಿ ಸದೃಢರಾಗಿರುವ ಸಾರ್ವಜನಿಕರು ಯಾರಾದರೂ ಸ್ವಯಂಪ್ರೇರಿತವಾಗಿ ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಟ್ಟು, ಇತರೆ ಬಡ ಅರ್ಹ ಫಲಾನುಭವಿಗಳಿಗೆ ನೆರವಾಗಲು ಮುಂದೆ ಬಂದರೆ ಅಂಥವರನ್ನು ಸರ್ಕಾರ ಪ್ರೋತ್ಸಾಹಿಸಲಿದೆ ಎಂದು ಸಭೆಯಲ್ಲಿ ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯಿಂದ ಅನರ್ಹ ಫಲಾನುಭವಿಗಳು ಮತ್ತು ಯೋಜನೆಯ ದುರುಪಯೋಗಕ್ಕೆ ಮಾತ್ರ ತಡೆ ಹಾಕಬೇಕು. ಆದರೆ, ಒಬ್ಬೇ ಒಬ್ಬ ಅರ್ಹ ಫಲಾನುಭವಿಗಳಿಗೆ ತೊಂದರೆ ಆಗಬಾರದು ಎಂದು ಸೂಚನೆ ನೀಡಿದ ಸಿಎಂ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಜ್ಯೋತಿ ಮತ್ತು ಗೃಹಲಕ್ಷ್ಮಿ ಯೋಜನೆಗೆ ಪರಿಷ್ಕರಣೆ ನಡೆಸಲಾಗುತ್ತಿದ್ದು, ಇದರಿಂದ ಅನರ್ಹರನ್ನು ಮಾತ್ರ ಹೊರಗಿಡಬೇಕು. ಆದರೆ, ಅರ್ಹರಿಗೆ ಇದರಿಂದ ಯಾವುದೇ ತೊಂದರೆಯಾಗಬಾರದು ಎಂದು ಸೂಚನೆ ನೀಡಿದರು.

ಇದೇ ವೇಳೆ ಕೇಂದ್ರ ಸರ್ಕಾರದ ನೀತಿಗಳಿಂದಾಗಿ ಬಡ ಹಾಗೂ ಮಧ್ಯಮ ವರ್ಗದವರ ಮೇಲಾಗುತ್ತಿರುವ ಆರ್ಥಿಕ ಹೊರೆ ಮತ್ತು ಬೆಲೆ ಏರಿಕೆಯ ಕುರಿತೂ ಸಭೆಯಲ್ಲಿ ಕಳವಳ ವ್ಯಕ್ತಪಡಿಸಿ, ಹಲವು ಫಲಾನುಭವಿಗಳು ಬ್ಯಾಂಕ್‌ ಸಾಲ ಪಡೆದಿರುತ್ತಾರೆ. ಸಾಲದ ಖಾತೆಗೆ ಗೃಹಲಕ್ಷ್ಮಿ ಹಣ ಹೋದ ತಕ್ಷಣ ಆ ಹಣ ಸಾಲದ ಮೊತ್ತಕ್ಕೆ ಜಮೆ ಆಗಿಬಿಡುತ್ತದೆ. ಆದ್ದರಿಂದ ಅಂತಹ ಫಲಾನುಭವಿಗಳು ಖಾತೆ ಬದಲಾಯಿಸಿರುತ್ತಾರೆ. ಇಂಥಾ ಫಲಾನುಭವಿಗಳಿಗೆ ತೊಂದರೆ ಆಗಬಾರದು ಎಂದರು.

ಮೃತಪಟ್ಟವರ ಖಾತೆಗೂ ಗೃಹಲಕ್ಷ್ಮಿ ಹಣ ಜಮೆ ಪತ್ತೆಯಾಗಿದ್ದು, ಈ ರೀತಿ ದುರುಪಯೋಗ ಆಗಬಾರದು. ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ಜಮೆಯಾದ ತಕ್ಷಣ ಅವರ ಮೊಬೈಲಿಗೆ ಧ್ವನಿ ಸಂದೇಶದ ಮೂಲಕ ಖಚಿತಪಡಿಸಬೇಕು. ಬ್ಯಾಂಕ್‌ನಲ್ಲಿ ಯುಪಿಎ ಖಾತೆಗಳನ್ನು ತೆಗೆದು ದುರುಪಯೋಗ ಆಗಿರುವುದು  ಪತ್ತೆಯಾಗಿರುವ ಬಗ್ಗೆ ಅಧಿಕಾರಿಗಳು ಸಿಎಂ ಗಮನಕ್ಕೆ ತಂದಿದ್ದಾರೆ.

ಸಿಎಜಿಯಲ್ಲಿ ಆತಂಕಕಾರಿ ಸಂಗತಿಗಳು!
ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಲೆಕ್ಕಪರಿಶೋಧಕರ ವರದಿಯಲ್ಲಿ ಉಲ್ಲೇಖವಾಗಿರುವ ಗಂಭೀರ ತಾಂತ್ರಿಕ ಲೋಪಗಳ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿದ ಸಿಎಂ ಡಿ.ಕೆ. ಶಿವಕುಮಾರ್, ಒಂದೇ ಬ್ಯಾಂಕ್ ಖಾತೆಗೆ ಹಲವು ಫಲಾನುಭವಿಗಳ ಗೃಹಲಕ್ಷ್ಮಿ ಹಣ ಜಮೆಯಾಗುತ್ತಿರುವುದು ಪತ್ತೆಯಾಗಿದೆ. ಈ ರೀತಿ ಸುಮಾರು 3 ಲಕ್ಷ ಕಂತುಗಳಲ್ಲಿ ಒಟ್ಟು 60 ಕೋಟಿ ರೂಪಾಯಿ ಹಣ ವರ್ಗಾವಣೆಯಾಗಿರುವ ಬಗ್ಗೆ ಎಜಿ ವರದಿ ನೀಡಿದೆ. ಒಬ್ಬನೇ ವ್ಯಕ್ತಿ ಹಲವು ಖಾತೆಗಳನ್ನು ನೋಂದಾಯಿಸಿಕೊಂಡಿರುವುದು ಪತ್ತೆಯಾಗಿದೆ.
ಹಿಂದೆ ಸ್ವೀಕರಿಸಲಾದ ಅರ್ಜಿಗಳಲ್ಲಿನ ಮಾಹಿತಿಯ ನೈಜತೆಯನ್ನು ಸರಿಯಾಗಿ ಪರಿಶೀಲಿಸದೆ ಇರುವುದೇ ಇದಕ್ಕೆ ಮುಖ್ಯ ಕಾರಣ ಎಂದು ಸಭೆಯಲ್ಲಿ ಪ್ರಸ್ತಾಪಿಸಿದರು.

ಗೃಹಜ್ಯೋತಿ ಯೋಜನೆ ಜಾರಿಯಾಗುವಾಗ ಹೆಚ್ಚಿನ ದುರುಪಯೋಗವಾಗದಂತೆ ಎಚ್ಚರಿಕೆ ವಹಿಸಲಾಗಿತ್ತು. ಇದೇ ಎಚ್ಚರಿಕೆಯನ್ನು ಇತರೆ ಯೋಜನೆಗಳಲ್ಲೂ ಅನುಸರಿಸಿದ್ದರೆ ದುರುಪಯೋಗ ತಡೆಯಬಹುದಿತ್ತು, ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು. ಸದ್ಯ ಮರಣ ಹೊಂದಿದ ಫಲಾನುಭವಿಗಳ ವಿವರಗಳು ಸಕಾಲದಲ್ಲಿ ಸಿಗದಿರುವುದರಿಂದ, ಮೃತರ ಖಾತೆಗಳಿಗೂ ಗೃಹಲಕ್ಷ್ಮಿ ಹಣ ಹೋಗುತ್ತಿರುವುದು ಪತ್ತೆಯಾಗಿದ್ದು, ಇ-ಕೆವೈಸಿ ಹಾಗೂ ಎನ್.ಪಿ.ಸಿ.ಐ ನಿಷ್ಕ್ರಿಯವಾಗಿರುವ ಖಾತೆಗಳ ಪರಿಶೀಲನೆ ನಡೆಸಲು ತೀರ್ಮಾನಿಸಲಾಯಿತು.

ಸಭೆಯಲ್ಲಿ ಸಚಿವರಾದ ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರ ಸುನಿಲ್ ಕನಗೋಳು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ದಿನೇಶ್ ಗೂಳಿಗೌಡ, ಎಸ್.ಆರ್. ಪಾಟೀಲ್, ಪುಷ್ಪ ಅಮರನಾಥ್, ಮೆಹರುಸ್ ಖಾನ್ ಹಾಗೂ ಬೆಂಗಳೂರು ಜಿಲ್ಲಾ ಅಧ್ಯಕ್ಷ ಕೃಷ್ಣಪ್ಪ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

More articles

Latest article

Most read