ಕರಾವವಳಿಯಲ್ಲಿ ಕ್ಯಾಬೆನೆಟ್‌ ಸಭೆ ಅಯೋಜನೆ: ಸಿಎಂ ಘೋಷಣೆ

ಬೆಂಗಳೂರು : ಕರಾವವಳಿ ಪ್ರದೇಶದ ಅಭಿವೃದ್ಧಿಗೆ ಆ ಭಾಗದಲ್ಲಿಯೂ ಸಹ ಒಮ್ಮೆ ಕ್ಯಾಬಿನೆಟ್ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಣೆ ಮಾಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತ ಸಮಾಲೋಚನೆ ಸಭೆಯಲ್ಲಿ ಅವರು ಮಾತನಾಡಿದರು.

ಕರಾವಳಿ ಭಾಗದ ಸಮಸ್ಯೆಗಳು, ಮೀನುಗಾರರ ಬೇಡಿಕೆಗಳು ಮತ್ತು ಕರಾವಳಿಯ ಪ್ರವಾಸೋದ್ಯಮ ಸೇರಿ ಹಲವು ವಿಷಯಗಳ ಬಗ್ಗೆ ಕೂಲಂಕಷವಾಗಿ ಚರ್ಚಿಸಲು ಮತ್ತು ಈ ಬಗ್ಗೆ ಸರ್ಕಾರ ಅಗತ್ಯ ಯೋಜನೆಗಳನ್ನು ಘೋಷಿಸಲು ಸಂಪುಟ ಸಭೆ ಕರೆಯಲಾಗುವುದು ಎಂದು ಹೇಳಿದರು.

ಸಿಆರ್‌ಝಡ್‌ ಮತ್ತು ಅರಣ್ಯ ಇಲಾಖೆಯಿಂದ ಆಗುತ್ತಿರುವ ತಾಂತ್ರಿಕ ತಕರಾರುಗಳ ಬಗ್ಗೆ 15-20 ದಿನಗಳಲ್ಲಿ ವರದಿ ಸಿದ್ದಪಡಿಸುವ ಮೂಲಕ ಸಮಸ್ಯೆಗಳು  ಮತ್ತು ಪರಿಹಾರಗಳನ್ನು ಪರಿಶೀಲಿಸಿ ವರದಿ ಸಲ್ಲಿಸಿ ಎಂದು ಅಧಿಕಾರಿಗಳಿಗೆ ಸಿಎಂ ತಾಕೀತು ಮಾಡಿದರು.

ಹೂಡಿಕೆದಾರರಿಗೆ ಸುಗಮವಾದ ಮತ್ತು ಸರಳವಾದ ಮಾರ್ಗಗಳನ್ನು ಸೃಜಿಸಬೇಕು ಉದ್ಯಮಿಗಳಿಗೆ ಆಗುತ್ತಿರುವ ಇಲಾಖಾ ಕಿರಿಕಿರಿಗಳಿಗೆ ಪರಿಹಾರ ಕಂಡು ಹಿಡಿಯಬೇಕು. ಕರಾವಳಿ ಸಂಸ್ಕೃತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಾರ ಮಾಡುವುದರ ಜತೆಗೆ  ಹೆಚ್ಚು ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆಗೆ ಆದ್ಯತೆ ನೀಡಿ ಎಂದು ಸೂಚಿಸಿದರು.

ಸದ್ಯ ಅನುಮೋದಿಸಿರುವ 45 ಯೋಜನೆಗಳಿಂದ 4500 ಉದ್ಯೋಗ ಸೃಷ್ಟಿಯಾಗುತ್ತದೆ. ಈ ಪ್ರಮಾಣ ಇನ್ನಷ್ಟು ಹೆಚ್ಚಾಗಬೇಕು. ಅತಿ ಉದ್ದದ ಸಮುದ್ರ ತೀರಗಳು ಇರುವ ಪ್ರದೇಶಗಳಲ್ಲಿ ರಾಜ್ಯದ ಕರಾವಳಿಯೂ ಸೇರಿದೆ. ನಮ್ಮ ಪರಿಸರಕ್ಕೆ ಧಕ್ಕೆ ಆಗದಂತೆ ಸಮುದ್ರ ತೀರಗಳನ್ನು ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ  ಪರಿಗಣಿಸಲು  ಸಲಹೆ ಮಾಡಿದರು.

ಕಲೆಗೆ ಪ್ರಾಶಸ್ತ್ಯ ಹೆಚ್ಚಿಸಬೇಕು:
ಸಭೆಯಲ್ಲಿ ಭಾಗವಹಿಸಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿ, ಕರಾವಳಿಯ ಜನಪದ ಕಲೆ, ಸಂಗೀತಕ್ಕೆ ಪ್ರೋತ್ಸಾಹ ನೀಡಬೇಕು. ಸಿನಿಮಾ ಚಿತ್ರೀಕರಣಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸುವುದರಿಂದ ಕೇರಳ-ಗೋವಾ-ಕರ್ನಾಟಕದ ಸಿನಿಮಾ ಜಗತ್ತಿಗೆ ಹೆಚ್ಚು ಅನುಕೂಲ ಎಂದು ಸಲಹೆ ನೀಡಿದರು.

ಇದೇ ವೇಳೆ ಕರಾವಳಿ ಪ್ರದೇಶದಲ್ಲಿ ದಟ್ಟ ಕಾಡುಗಳು ಇದ್ದು, ಹೆಲಿ ಟೂರಿಸಂ ಅಭಿವೃದ್ಧಿಗೆ ಒತ್ತು ನೀಡಲು ಉದ್ಯಮಿಗಳು ಮುಖ್ಯಮಂತ್ರಿಗೆ ಮನವಿ ಮಾಡಿದರು.

ಸಭೆಯಲ್ಲಿ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ ಜೆ ಜಾರ್ಜ್, ಖ್ಯಾತ ನಟ ರಿಷಬ್ ಶೆಟ್ಟಿ, ಶಾಸಕರಾದ ಜಿ ಟಿ ದೇವೇಗೌಡ, ಸತೀಶ್ ಸೈಲ್, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಶ್ರೀನಿವಾಸ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ತ್ರಿಲೋಕ್ ಚಂದ್ರ ಮತ್ತಿತರರು ಉಪಸ್ಥಿತರಿದ್ದರು.

More articles

Latest article

Most read