ಇಂದು ನೀಟ್ ಮರುಪರೀಕ್ಷೆ: ಸಕಲ ಸಿದ್ಧತೆ

ಬೆಂಗಳೂರು :  ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ರದ್ದುಗೊಂಡಿದ್ದ ನೀಟ್ ಮರು ಪರೀಕ್ಷೆ ಭಾನುವಾರ ನಡೆಯಲಿದ್ದು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನೀಟ್ ಪರೀಕ್ಷೆ ಸಂಬಂಧ ಕರ್ನಾಟಕದಲ್ಲೂ ಬಿಗಿ ಭದ್ರತೆ ಕ್ರಮಗಳನ್ನು ಸೂಚಿಸಿ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನ ಬಿಡುಗಡೆ ಮಾಡಿದೆ.

ಈಗಾಗಲೇ 16 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ದೇಶಾದ್ಯಂತ ಪ್ರವೇಶ ಪತ್ರ ಪಡೆದುಕೊಂಡಿದ್ದು, ರಾಜ್ಯದ 31 ಜಿಲ್ಲೆಗಳಲ್ಲಿ ನಾಳೆ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.15ರವರೆಗೆ ಪರೀಕ್ಷೆ ನಡೆಯಲಿದೆ. ಈ ಬಾರಿ ಪರೀಕ್ಷೆಯ ಅವಧಿಯನ್ನು 15 ನಿಮಿಷಗಳ ಕಾಲ ವಿಸ್ತರಿಸಲಾಗಿದ್ದು, ಒಟ್ಟು 195 ನಿಮಿಷಗಳ ಕಾಲ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳು ಮಧ್ಯಾಹ್ನ 1:30ಕ್ಕೆ ಮುಚ್ಚಲ್ಪಡುತ್ತವೆ. ಹಾಗಾಗಿ ತಡವಾಗಿ ಬರುವ ಅಭ್ಯರ್ಥಿಗಳಿಗೆ ಯಾವುದೇ ಕಾರಣಕ್ಕೂ ಪ್ರವೇಶ ಇರುವುದಿಲ್ಲ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಸ್ಪಷ್ಟವಾಗಿ ತಿಳಿಸಿದೆ.

ಪರೀಕ್ಷಾ ಕೇಂದ್ರದೊಳಗೆ ನೀರಿನ ಬಾಟಲ್‌ ತರಲು ಅವಕಾಶವಿದೆ. ಪೇಟ, ಹಿಜಾಬ್ ಇತ್ಯಾದಿ ಧಾರ್ಮಿಕ ನಂಬಿಕೆಗೆ ಸಂಬಂಧಿಸಿದ ವಸ್ತುಗಳನ್ನು ಧರಿಸಲು ಅವಕಾಶವಿದೆ. ತಿಳಿ ಬಣ್ಣದ ಉಡುಪುಗಳಿದ್ದರೆ ಸೂಕ್ತ. ಅಗತ್ಯವಿದ್ದರೆ ಪೂರ್ಣ ತೋಳಿನ ಅಥವಾ ಉಣ್ಣೆಯ ಉಡುಪು ಧರಿಸಬಹುದು. ತಪಾಸಣೆಗೆ ಅನುಕೂಲವಾಗುವಂತೆ ಮುಂಚಿತವಾಗಿ ಕೇಂದ್ರಕ್ಕೆ ಬರಬೇಕು. ಹೆಚ್ಚು ಹೀಲಿನ ಪಾದರಕ್ಷೆ ಧರಿಸಿದರೆ ಹೆಚ್ಚುವರಿ ತಪಾಸಣೆ ನಡೆಸಬಹುದು ಎಂದು ಪರೀಕ್ಷಾ ಸಂಸ್ಥೆ ತಿಳಿಸಿದೆ.

ಮೊಬೈಲ್, ಸ್ಮಾರ್ಟ್ ವಾಚ್, ಬ್ಲೂಟೂತ್ ಉಪಕರಣಗಳು, ಇಯರ್‌ಫೋನ್, ದೊಡ್ಡ ಬೆಲ್ಟ್, ಭಾರಿ ಆಭರಣಗಳು ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಅಥವಾ ಸಂವಹನ ಸಾಧನಗಳು ನಿಷೇಧಿಸಲಾಗಿದೆ. ಅಭ್ಯರ್ಥಿಗಳಿಗೂ ಪ್ರವೇಶಕ್ಕೆ ಮೊದಲು ಕಡ್ಡಾಯ ತಪಾಸಣೆ ಇರುವುದರಿಂದ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವಂತೆ ಸಲಹೆ ನೀಡಲಾಗಿದೆ.

200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ:
ನಾಳೆ ಬೆಂಗಳೂರಿನ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ‘ನಿಷೇಧಿತ ಪ್ರದೇಶ’ ಎಂದು ಘೋಷಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಕಲಂ 163ರ ಅಡಿ ಈ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ.

ಇದರೊಂದಿಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿಗಳು, ಸೈಬರ್ ಕೆಫೆಗಳು ಹಾಗೂ ಕಂಪ್ಯೂಟರ್ ಸೆಂಟರ್‌ಗಳನ್ನು ಪರೀಕ್ಷೆಯ ಸಮಯದಲ್ಲಿ ಕಡ್ಡಾಯವಾಗಿ ಮುಚ್ಚುವಂತೆ ಆದೇಶಿಸಲಾಗಿದೆ.

More articles

Latest article

Most read