ತಂದೆ, ತಾಯಿ, ತಂಗಿಯನ್ನು ಭೀಕರವಾಗಿ ಹ* ಮಾಡಿದ ಮಗಳು

ಬೆಂಗಳೂರು: ಲಿವ್‌ ಇನ್‌ ರಿಲೇಷನ್‌ಶಿಪ್‌ ವಿರೋಧಿಸಿದ್ದಕ್ಕೆ ಮಗಳೇ ತಂದೆ, ತಾಯಿ ಹಾಗೂ ತಂಗಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಕೆ.ಆರ್.‌ ಪುರದ ಸೀಗೇಹಳ್ಳಿಯಲ್ಲಿ ನಡೆದಿದೆ.
ಸೋಮಸುಂದರ್ (55), ಮುತ್ತುಲಕ್ಷ್ಮಿ (48) ಹಾಗೂ ಇವರ ಕಿರಿಯ ಮಗಳು ಸುಪ್ರಿಯಾ (20) ಕೊಲೆಯಾದ ದುರ್ದೈವಿಗಳು. ಸೋಮಸುಂದರ್ ಅವರ ಹಿರಿಯ ಮಗಳು ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಶ್ವೇತಾ, ಕೆನತ್ ಎಂಬಾತನ ಜೊತೆ ಮದುವೆಯಾಗದೆ ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿದ್ದಳು. ಮಗಳ ಈ ನಡವಳಿಕೆಗೆ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಮಗಳಿಗೆ ಬುದ್ಧಿವಾದ ಹೇಳಿ ಮನೆಗೆ ವಾಪಸ್ ಕರೆದುಕೊಂಡು ಹೋಗಲು ಸೋಮಸುಂದರ್ ಅವರು ಪತ್ನಿ ಮತ್ತು ಕಿರಿಯ ಮಗಳೊಂದಿಗೆ ಸಿಗೇಹಳ್ಳಿಯ ಡಾಮ್ನಿಕದ ಲೇಔಟ್‌ನಲ್ಲಿರುವ ‘ಸಾಯಿ ಗ್ರೀನ್ ಅಪಾರ್ಟ್‌ಮೆಂಟ್’ಗೆ ಬಂದಿದ್ದರು. ಈ ವೇಳೆ ಪೋಷಕರು ಹಾಗೂ ಶ್ವೇತಾ-ಕೆನತ್ ಜೋಡಿ ನಡುವೆ ತೀವ್ರ ಗಲಾಟೆ ನಡೆದಿದೆ.

ತಾರಕಕ್ಕೇರಿದ ಸಂದರ್ಭದಲ್ಲಿ ಪ್ರೇಮಿಗಳಿಬ್ಬರು ಸೇರಿ ತಂದೆ, ತಾಯಿ ಹಾಗೂ ತಂಗಿಯ ಮೇಲೆ ಚಾಕುವಿನಿಂದ  ಇರಿದಿದ್ದಾರೆ. ತೀವ್ರವಾಗಿ ಇರಿತಕ್ಕೊಳಗಾದ ಮುತ್ತುಲಕ್ಷ್ಮಿ ಹಾಗೂ ಸುಪ್ರಿಯಾ ಮನೆಯ ಒಳಗಡೆಯೇ ರಕ್ತದ ಮಡುವಿನಲ್ಲಿ ಕುಸಿದುಬಿದ್ದು ಪ್ರಾಣ ಬಿಟ್ಟಿದ್ದಾರೆ. ತಂದೆ ಬೇಸ್‌ಮೆಂಟ್‌ಗೆ ಬಂದಾಗ ಆಸ್ಪತ್ರೆಗೆ ದಾಖಲು ಮಾಡಿದರೂ ಬದುಕುಳಿಯಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. 

ಬೇಸ್‌ಮೆಂಟ್‌ಗೆ ಬಂದ ವೇಳೆ, ಪೊಲೀಸರಿಗೆ ಸೋಮಸುಂದರ್‌ ಹೇಳಿಕೆಯನ್ನು ನೀಡಿದ್ದಾರೆ.  ನನ್ನ ದೊಡ್ಡ ಮಗಳು ಶ್ವೇತಾ ತನ್ನ ಬಾಯ್ ಫ್ರೆಂಡ್ ಜೊತೆ ಲಿವಿಂಗ್‌ನಲ್ಲಿದ್ದಳು. ಇದು ಸರಿಯಲ್ಲ ಎಂದು ಬುದ್ಧಿ ಹೇಳಲು ಬಂದಿದ್ದೆವು. ಆದರೆ ಮಗಳು ಮತ್ತು ಆಕೆಯ ಬಾಯ್ ಫ್ರೆಂಡ್ ನಮ್ಮ ಮೇಲೆ ಚಾಕುವಿನಿಂದ ಇರಿದರು. ನನ್ನ ಹೆಂಡತಿ ಮತ್ತು ಚಿಕ್ಕ ಮಗಳು ಮನೆ ಒಳಗಡೆಯೇ ಇದ್ದಾರೆ ಎಂದು  ಕಣ್ಣೀರು ಹಾಕುತ್ತಾ ಹೇಳಿದ್ದಾರೆ. .

ಘಟನಾ ಸ್ಥಳಕ್ಕೆ ಕೆ.ಆರ್. ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಈಸ್ಟ್ ಪಾಯಿಂಟ್ ಆಸ್ಪತ್ರೆಗೆ ರವಾನಿಸಲಾಗಿದೆ. ಕೊಲೆ ಮಾಡಿ ಪರಾರಿಯಾಗಿರುವ ಶ್ವೇತಾ ಮತ್ತು ಕೆನತ್ ಪತ್ತೆಗಾಗಿ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದು, ತನಿಖೆ ತೀವ್ರಗೊಳಿಸಿದ್ದಾರೆ.

More articles

Latest article

Most read