ಎರಡನೇ ಹಂತದ ಸಂಪುಟ ವಿಸ್ತರಣೆ : ವಾರಾಂತ್ಯ ಡಿಕೆಶಿ- ಸಿದ್ದರಾಮಯ್ಯ ದೆಹಲಿಗೆ?

ಬೆಂಗಳೂರು : ವಿಧಾನ ಪರಿಷತ್ ಮತ್ತು ರಾಜ್ಯಸಭೆ ಚುನಾವಣೆ ಮುಗಿದ ಬೆನ್ನಲ್ಲಿಯೇ ಸಚಿವ ಸಂಪುಟ ವಿಸ್ತರಣೆ ಚರ್ಚೆ ಚುರುಕು ಪಡೆದಿದ್ದು, ಬಹುತೇಕ ಈ ವಾರಾಂತ್ಯದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನವದೆಹಲಿಗೆ ತೆರಳುವ ಸಾಧ್ಯತೆ ಇದೆ.

ಸಿಎಂ ಡಿ.ಕೆ. ಶಿವಕುಮಾರ್ ಮತ್ತು 13 ಮಂತ್ರಿಗಳು ಪ್ರಮಾಣವಚನ ಸ್ವೀಕರಿಸಿದ್ದು, 20 ದಿನವಾಗುತ್ತಿದೆ. ಇದರ ಇನ್ನೂ ಸಂಪುಟದಲ್ಲಿ ಖಾಲಿ ಉಳಿದಿರುವ 20 ಸಚಿವ ಸ್ಥಾನಗಳಿಗೆ ತೀವ್ರ ಪೈಪೋಟಿ ಶುರುವಾಗಿದ್ದು, ಆಕಾಂಕ್ಷಿಗಳು ನಿತ್ಯವೂ ಡಿಕೆಶಿ, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಮನೆಗಳಿಗೆ ಸುತ್ತುಹಾಕುತ್ತಿದ್ದಾರೆ. ಈ ಮಧ್ಯೆ ಕೆಲವರು ದೆಹಲಿಯಲ್ಲಿಯೂ ತಮ್ಮ ಪ್ರಯತ್ನ ಮುಂದುವರಿಸಿದ್ದಾರೆ.

ಎರಡನೇ ಹಂತದಲ್ಲಿ ಯಾರು ಯಾರಿಗೆ ಸ್ಥಾನ ಕಲ್ಪಿಸಬೇಕು ಎಂಬುದು ತೀವ್ರ ಚರ್ಚೆ ನಡೆಯುತ್ತಿದೆ. ಪರಿಷತ್ ಚುನಾವನೆಯಲ್ಲಿ ಮೇಲುಗೈ ಸಾಧಿಸಿ ಬೀಗುತ್ತಿರುವ ಸಿಎಂ ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆಯಲ್ಲಿಯೂ ಸಹ ಮೇಲುಗೈ ಸಾಧಿಸಲು ಕಾತರರಾಗಿದ್ದಾರೆ.

ಈ ಮಧ್ಯೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ಗಾಂಧಿ ಅವರು ವಿದೇಶ ಪ್ರವಾಸದಲ್ಲಿದ್ದು, ಜೂ.27ರಂದು ಮರಳುತ್ತಾರೆ. ಅವರು ಬಂದ ಬಳಿಕ ಜೂ.27 ಅಥವಾ 28ರಂದು ಸಿಎಂ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಗೆ ತೆರಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿ ಡಿ.ಕೆ. ಶಿವಕುಮಾರ್ ಸರ್ಕಾರದಲ್ಲಿ ಅವಕಾಶ ತಪ್ಪಿರುವ ಎಚ್.ಕೆ. ಪಾಟೀಲ, ಎಚ್.ಸಿ. ಮಹದೇವಪ್ಪ, ಶಿವರಾಜ ತಂಗಡಗಿ, ದಿನೇಶ್ ಗುಂಡೂರಾವ್, ಜಮೀರ್ ಅಹಮ್, ಲಕ್ಷ್ಮೀ ಹೆಬ್ಬಾಳ್ಕರ್, ಚಲುವರಾಯಸ್ವಾಮಿ, ಕೆ. ವೆಂಕಟೇಶ್, ಎಸ್.ಎಸ್. ಮಲ್ಲಿಕಾರ್ಜುನ, ಪರಿಷತ್ತಿನಿಂದ  ಆಯ್ಕೆಯಾಗಿದ್ದ ಎನ್.ಎಸ್. ಭೋಸರಾಜು ಸೇರಿ ಹಲವರು ಮರಳಿ ಸಂಪುಟ ಸೇರಲು ಕಾತರರಾಗಿದ್ದು ತಮ್ಮ ತಮ್ಮ ಮಟ್ಟದಲ್ಲಿ ಹೈಕಮಾಂಡ್ ಮತ್ತು ರಾಜ್ಯ ನಾಯಕರುಗಳ ಮೇಲೆ ಒತ್ತಡ ಹೇರುತ್ತಿದ್ದಾರೆ.

ಈ ಮಧ್ಯೆ ಸಿಎಂ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಒಂದು ಹಂತದಲ್ಲಿ ಚರ್ಚೆ ನಡೆಸಿ ಸಂಭಾವ್ಯ ಪಟ್ಟಿ ಸಿದ್ದಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಜಾತಿವಾರು, ಪ್ರಾದೇಶಿಕವಾರು ಯಾರು ಯಾರಿಗೆ ಅವಕಾಶ ಸಿಗಲಿದೆ ಎಂಬದು ತೀವ್ರ ಕುತೂಹಲ ಮೂಡಿಸಿದ್ದು, ಇಬ್ಬರೂ ನಾಯಕರು ತಮ್ಮ ಬೆಂಬಲಿಗರಿಗೆ ಅವಕಾಶ ಒದಗಿಸಲು ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ, ಹೈಕಮಾಂಡ್ ಮುಂದೆ ಚರ್ಚಿಸಿ ಒಪ್ಪಿಗೆ ಪಡೆದ ಬಳಿಕವಷ್ಟೇ ಪಟ್ಟಿಗೆ ಅಂತಿಮ ಮುದ್ರೆ ಸಿಗಲಿದೆ.

ಖಾಲಿ ಇರುವ 20 ಸ್ಥಾನಗಳ ಪೈಕಿ 10 ಸ್ಥಾನ ಈಗಾಗಲೇ ಸಚಿವರಾಗಿದ್ದವರು ಮತ್ತು ಉಳಿದ 10 ಸ್ಥಾನಗಳನ್ನು ಹೊಸಬರಿಗೆ ಅವಕಾಶ ನೀಡುವ ಮೂಲಕ ಸಂಪುಟದಲ್ಲಿ ಹೊಸತನಕ್ಕೂ ಆದ್ಯತೆ ನೀಡಲು ಆಸಕ್ತಿ ತೋರಲಾಗಿದೆ ಎಂದು ಹೇಳಲಾಗುತ್ತಿದೆ.

ಈ ಮಧ್ಯೆ ಸಚಿವ ಸ್ಥಾನಕ್ಕಾಗಿ ಹಿಂದೆ ಸಚಿವರಾಗಿದ್ದವರು, ಹಿರಿಯ ಶಾಸಕರು ಮತ್ತು ಯುವ ಶಾಸಕರ ಬೆಂಬಲಿಗರೂ ಸಹ ರಾಜ್ಯಾದ್ಯಂತ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಕೆಲ ಶಾಸಕರು ನಿತ್ಯ ತಮ್ಮ ಬೆಂಬಲಿಗರನ್ನು ಬೆಂಗಳೂರಿಗೆ ಕರೆತಂದು ಪಕ್ಷದ ಕಚೇರಿಯ ಮುಂದೆ ಶಕ್ತಿ ಪ್ರದರ್ಶನ ಮಾಡಿಸುತ್ತಿದ್ದಾರೆ. ಆದರೆ, ಅಂತಿಮವಾಗಿ ಯಾರಿಗೆ ಅದೃಷ್ಟ ಎಂಬುದು ಬಹುತೇಕ ಈ ತಿಂಗಳ ಅಂತ್ಯದೊಳಗೆ ಸಷ್ಟವಾಗಲಿದೆ.

More articles

Latest article

Most read