ಕೋಲಾರ : ಜಿಲ್ಲಾಡಳಿತ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಅನೇಕ ಅಧಿಕಾರಿಗಳು ಇಂದು ವಿಶ್ವ ಮಾದಕ ವಿರೋಧಿ ದಿನವನ್ನು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸುವ ಜಾತಾವನ್ನು ಆಚರಿಸುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ರಕ್ಷಣಾಧಿಕಾರಿ ಕನ್ನಿಕಾ ಸುಕ್ರಿಪಾಲ್, ಸಿ ಇ ಓ ಪ್ರವೀಣ್ ಬಾಗೇವಾಡಿ ಮತ್ತು ಎಡಿಸಿ ಮಂಗಳ ಸೇರಿದಂತೆ ಅನೇಕ ಜಿಲ್ಲಾಡಳಿತದ ಅಧಿಕಾರಿಗಳು ಪಾಲ್ಗೊಂಡಿದ್ದ ಈ ಜಾತ್ರಾದಲ್ಲಿ ಸಾರ್ವಜನಿಕರು ಅದರಲ್ಲೂ ಹೆಚ್ಚಾಗಿ ಯುವ ಸಮೂಹ ಮಾದಕ ದ್ರವ್ಯಗಳಿಂದ ದೂರ ಉಳಿಯುವಂತೆ ಕರೆ ನೀಡಿದರಲ್ಲದೆ ಮುಂದಿನ ದಿನಗಳಲ್ಲಿ ಮಾದಕ ದ್ರವ್ಯಗಳ ತಡೆಗೆ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆಯೂ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಕನ್ನಿಕಾ ಸುಕ್ರಿಪಾಲ್ ಮಾದಕ ಸೇವನೆಗಳಿಂದ ಉಂಟಾಗುವ ಅಪಾಯಗಳ ಬಗ್ಗೆ ಅರಿವು ಮೂಡಿಸಿದರಲ್ಲದೆ ಜಿಲ್ಲೆಯಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದಲ್ಲದೆ ಅಂತಹ ವ್ಯಕ್ತಿಗಳ ವಿರುದ್ಧ ಈಗಾಗಲೇ ಕಣ್ಗಾವಲು ಇರಿಸುವಂತೆ ಸೂಚಿಸಲಾಗಿದೆ ಎಂದರಲ್ಲದೆ ವಿಶ್ವ ಸಂಸ್ಥೆಯು ಸಾರ್ವಜನಿಕ ವಲಯದಲ್ಲಿ ಜಾಗೃತಿ ಮೂಡಿಸುವ ಸಲುವಾಗಿಯೇ ಈ ದಿನವನ್ನು ಜಾರಿಗೆ ತಂದಿದೆ ಎಂದು ತಿಳಿಸಿದರು.

