ರಾಜ್ಯ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ 6 ವರ್ಷ ಉಚ್ಚಾಟನೆ

ಬೆಂಗಳೂರು : ರಾಷ್ಟ್ರೀಯ ನಾಯಕರ ವಿರುದ್ಧ ಅವಹೇಳನಕಾರಿ ಆರೋಪ. ಅಡ್ಡಮತದಾನದ ನಂತರ ನಾಯಕರ ವಿರುದ್ಧ ಕೀಳು ಟೀಕೆ. ರಾಧಾಮೋಹನ್ ಅಗರ್ ವಾಲ್ ವಿರುದ್ಧ ಅವಾಚ್ಯ ಶಬ್ದಗಳ ಬಳಕೆ. ನೋಟಿಸ್ ಗೆ ಉತ್ತರ ಬಾರದ ಹಿನ್ನೆಲೆ ರಾಜ್ಯ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ. 6 ವರ್ಷ ಉಚ್ಚಾಟನೆ ಮಾಡಿ ಶಿಸ್ತು ಸಮಿತಿ ಆದೇಶಿಸಿದೆ.

ಜೂನ್ 19 ರಂದು ಸಂಜೆ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಎಂ.ಜಿ. ಮಹೇಶ್ ಅವರು ಹಿರಿಯ ನಾಯಕರ ವಿರುದ್ಧ ಕೀಳುಮಟ್ಟದ ಆರೋಪಗಳನ್ನು ಮಾಡುವ ಮೂಲಕ ಪಕ್ಷದ ಶಿಸ್ತು ಉಲ್ಲಂಘಿಸಿದ್ದರು.

ಅವಹೇಳನಕಾರಿ ಆರೋಪ ಹಿನ್ನೆಲೆಯಲ್ಲಿ ಎಂಜಿ ಮಹೇಶ್ ಅವರಿಗೆ ರಾಜ್ಯ ಶಿಸ್ತು ಸಮಿತಿಯು ನೋಟಿಸ್ ಜಾರಿ ಮಾಡಿ ಸ್ಪಷ್ಟೀಕರಣ ಕೇಳಿತ್ತು. ಇದೀಗ ಮಹೇಶ್ ನೀಡಿದ ಸ್ಪಷ್ಟೀಕರಣ ಸಮಂಜಸವಾಗಿಲ್ಲ ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ, 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ ಎಂದು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜು ಪಾಟೀಲ್ ತಿಳಿಸಿದ್ದಾರೆ.

ಈ ವರ್ತನೆಗೆ ಸಂಬಂಧಿಸಿದಂತೆ ರಾಜ್ಯ ಶಿಸ್ತು ಸಮಿತಿಯು ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿ ಉತ್ತರ ಕೇಳಿತ್ತು. ನೋಟಿಸ್‌ಗೆ ಎಂ.ಜಿ. ಮಹೇಶ್ ಅವರು ನೀಡಿದ ಸ್ಪಷ್ಟೀಕರಣವು ತೃಪ್ತಿಕರವಾಗಿಲ್ಲದ ಕಾರಣ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ.

More articles

Latest article

Most read