ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಪ್ರಮುಖ ಸಾಕ್ಷಿ ಸಂದೀಪ್‌ಗೆ ಬೆದರಿಕೆಯೊಡ್ಡಿರುವ ಆರೋಪದ ಮೇಲೆ ದರ್ಶನ್ ಅಭಿಮಾನಿಗಳು ಎನ್ನಲಾಗುತ್ತಿರುವ ಸುಹಾಸ್, ವೇಣು ಮತ್ತು ಪುನೀತ್ ಎಂಬುವರನ್ನು ಬಂಧಿಸಲಾಗಿದೆ. ಮೂವರು ಮೂಲತಃ ತುಮಕೂರಿನವರು. ಪುನೀತ್ ʻಡಿ-ಕಮ್ಯುನಿಟಿʼ ಫೇಸ್‌ಬುಕ್ ಪೇಜ್‌ನ ಅಡ್ಮಿನ್ ಎನ್ನಲಾಗಿದೆ
ಬಂಧಿತ ಮೂವರನ್ನು ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಾಗಿದೆ. ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು.

