ಬೆಂಗಳೂರು: ಕೆ. ಆರ್ ಸರ್ಕಲ್ನಲ್ಲಿ ಎರಡು ಬಿಎಂಟಿಸಿ ಬಸ್ಗಳ ನಡುವೆ ಸರಣಿ ಅಪಘಾತ ಉಂಟಾಗಿ, ಚಾಲಕ ಹಾಗೂ 13 ಮಂದಿ ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾರಿಗೆ ಸಚಿವ ಬೈರತಿ ಸುರೇಶ್ ಗಾಯಾಳುಗಳ ಆರೋಗ್ಯ ವಿಚಾರಿಸದ್ದಾರೆ.
ಸೆಂಟ್ ಮಾರ್ಥಾಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಬಳಿಕ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಬಸ್ ಚಾಲಕ ಅಭಿಷೇಕ್ಗೆ ಹಾಗೂ ಪ್ರಯಾಣಿಕರಾದ ಭಾಗ್ಯ ಎಂಬುವರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಳಿಕ ಮಾತನಾಡಿದ ಅವರು, ಕೆ.ಆರ್ ಸರ್ಕಲ್ನಲ್ಲಿ ಬೆಳಗ್ಗೆ ಎರಡು ಇವಿ ಬಿಎಂಟಿಸಿ ನಡುವೆ ಅಪಘಾತ ಸಂಭವಿಸಿದೆ. ಅವಘಡದಲ್ಲಿ 16 ಜನ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವರ ದಯೆಯಿಂದ ಕೆಲವರು ಡಿಸ್ಚಾರ್ಜ್ ಆಗ್ತಿದ್ದಾರೆ. ಮೂವರಿಗೆ ಎಂಆರ್ಐ, ಸಿಟಿ ಸ್ಕ್ಯಾನ್ ಮಾಡಿದಾರೆ. ಈ ವೇಳೆ ಮತ್ತೊಂದು ಬಸ್ ಹಿಂದಿನಿಂದ ಬಂದು ಗುದ್ದಿದೆ. ನಮ್ಮ ಸಿಬ್ಬಂದಿ ಗಾಯಾಳುಗಳನ್ನು ಕರೆತಂದು ಅಡ್ಮಿಟ್ ಮಾಡಿಸಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚ ಸರ್ಕಾರದಿಂದ ಭರಿಸುತ್ತೇವೆ ಎಂದು ಹೇಳಿದ್ದಾರೆ. .
ಭೀಕರ ಅಪಘಾತದಲ್ಲಿ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡ 13 ಪ್ರಯಾಣಿಕರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ರಭಸಕ್ಕೆ ಡ್ರೈವರ್ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಹಿಳೆಯ ಕಾಲು ಸಿಲುಕಿಕೊಂಡಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಹಾರೆ, ಕೋಲುಗಳ ಸಹಾಯದಿಂದ ಸತತ ಅರ್ಧಗಂಟೆಗೂ ಹೆಚ್ಚು ಕಾರ್ಯಾಚರಣೆ ನಡೆಸಿ ಮಹಿಳೆಯ ಕಾಲನ್ನು ಸುರಕ್ಷಿತವಾಗಿ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಮಹಿಳೆಯನ್ನು ಅಂಬುಲೆನ್ಸ್ ಮೂಲಕ ಮಾರ್ಥಾಸ್ ಆಸ್ಪತ್ರೆಗೆ ರವಾನಿಸಲಾಗಿತ್ತು.
ಇನ್ನು ಸರಣಿ ಅಪಘಾತದಲ್ಲಿ ಎರಡೂ ಬಸ್ಗಳು ನಜ್ಜುಗುಜ್ಜಾಗಿದ್ದು, ಕ್ರೇನ್ ಮೂಲಕ ಬಸ್ಗಳ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಅಪಘಾತದ ಪರಿಣಾಮ ಕೆಆರ್ ಸರ್ಕಲ್ನಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.

