ವಯನಾಡಿನಲ್ಲಿ ಭಾರೀ ಮಳೆ : ಸುರಂಗ ಕಾಮಗಾರಿ ಸ್ಥಳದಲ್ಲಿ ಭೂಕುಸಿತ

ವಯನಾಡು :  ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಸಮೀಪದ ಕಲ್ಲಾಡಿಯಲ್ಲಿ ಮಂಗಳವಾರ ಭಾರಿ ಭೂಕುಸಿತ ಸಂಭವಿಸಿದೆ. ಇಬ್ಬರು ಕಾರ್ಮಿಕರು ಜೀವಂತ ಸಮಾಧಿಯಾಗಿದ್ದಾರೆ. ಸುಮಾರು 20 ಮಂದಿ ಅವಶೇಷಗಳ ಅಡಿಯಲ್ಲೇ ಸಿಲುಕಿಕೊಂಡಿದ್ದು, 30 ಮಂದಿ ನಾಪತ್ತೆಯಾಗಿದ್ದಾರೆ. ಇದರಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ರಸ್ತೆ ಯೋಜನೆಯ ಕಾಮಗಾರಿ ನಡೆಯುತ್ತಿದ್ದ ಕಲ್ಲಾಡಿಯ ಮೀನಾಕ್ಷಿ ಸೇತುವೆಯ ಸಮೀಪ ಈ ಭೂಕುಸಿತ ಸಂಭವಿಸಿದೆ.

ಘಟನೆಯಲ್ಲಿ ಗಾಯಗೊಂಡಿದ್ದ 6 ಮಂದಿಯನ್ನ ಸ್ಥಳೀಯರು ರಕ್ಷಣೆ ಮಾಡಿದ್ದು, ಮೆಪ್ಪಾಡಿಯ ಡಾ. ಮೂಪೆನ್ಸ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಗಾಯಗೊಂಡವರನ್ನ ಹೀರಾ ಸುರೇಶ್, ದಿಲೀಪ್, ಸೂರಜ್, ಸಂಜಯ್ ಥಾಪುರ್, ರಜನೀಶ್ ಮತ್ತು ತನ್ಮಯ್ ಘೋಷ್ ಎಂದು ಗುರುತಿಸಲಾಗಿದೆ. ಒಬ್ಬರ ಸ್ಥಿತಿ ಗಂಭೀರವಾಗಿದೆ.

ಅವಶೇಷಗಳಡಿ ಕೆಲವರು ಸಿಕ್ಕಿಹಾಕಿಕೊಂಡಿರಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದು, ಅಗ್ನಿಶಾಮಕ ಮತ್ತು ರಕ್ಷಣಾ ದಳದ ಅಧಿಕಾರಿಗಳು ಸ್ಥಳಕ್ಕೆ ತೆರಳಲಿದ್ದಾರೆ. ಕಲ್ಪೆಟ್ಟಾದಿಂದ ಅಗ್ನಿಶಾಮಕ ಮತ್ತು ರಕ್ಷಣಾ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಶೀಘ್ರದಲ್ಲೇ ಶೋಧ ಕಾರ್ಯ ಆರಂಭವಾಗಲಿದೆ.

More articles

Latest article

Most read