ಜನ, ಜಾನುವಾರುಗಳಿಗೆ ಸಮಸ್ಯೆಯಾಗದಂತೆ ಪರಿಸ್ಥಿತಿ ನಿಭಾಯಿಸಲು ಡಾ.ಜಿ.ಪರಮೇಶ್ವರ ಸೂಚನೆ

ಕಲಬುರಗಿ : ಸೂಪರ್ ಎಲ್‌ ನಿನೋ ಪರಿಣಾಮದಿಂದ ಉಂಟಾಗಿರುವ ಪ್ರಕೃತಿ ವಿಕೋಪವನ್ನು ಸಮರ್ಥವಾಗಿ ನಿಭಾಯಿಸಬೇಕು. ಈ ನಿಟ್ಟಿನಲ್ಲಿ ಕಲ್ಯಾಣ‌ ಕರ್ನಾಟಕ ಭಾಗದ ಜನರ ಜೀವನೋಪಾಯಕ್ಕೆ ಮತ್ತು ಜಾನುವಾರುಗಳಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ್‌ ಹೇಳಿದರು.

ಇಂದು ಕಲಬುರಗಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಕಲಬುರಗಿ ಕಂದಾಯ ವಿಭಾಗದ ವಿವಿಧ ಇಲಾಖೆಗಳ ಹಾಗೂ ಪ್ರಕೃತಿ ವಿಕೋಪ ನಿರ್ವಹಣೆ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳು ಮತ್ತು ಅಗತ್ಯ ನಿರ್ದೇಶನಗಳನ್ನು ನೀಡಿದರು.

ಬರಗಾಲ ಎದುರಾಗುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜನರು ಉದ್ಯೋಗಕ್ಕಾಗಿ ಮಹಾನಗರಗಳಿಗೆ ಗುಳೆ ಹೋಗುವ ಪ್ರಮಾಣ ಹೆಚ್ಚಿದೆ. ನರೇಗಾ ಯೋಜನೆ ಕೂಡ ಬದಲಾಗಿದೆ. ಲಭ್ಯ ಅನುದಾನ ಮತ್ತು ಯೋಜನೆಗಳನ್ನು ಬಳಸಿಕೊಂಡು ಜನರಿಗೆ, ತಮ್ಮ ಊರಿನಲ್ಲೇ ಉದ್ಯೋಗ ನೀಡಲು ಕ್ರಮವಹಿಸಬೇಕು.‌ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ತಿಳಿಸಿದರು.

ಬರಗಾಲ ಹಿನ್ನೆಲೆಯಲ್ಲಿ ಜನರ ಮೂಲಭೂತ ಅವಶ್ಯಕತೆಗಳಾದ ಕುಡಿಯುವ ನೀರು, ಆಹಾರ, ಜೀವನೋಪಾಯಕ್ಕೆ ಅಗತ್ಯವಿರುವ ಉದ್ಯೋಗ, ಆರೋಗ್ಯ, ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕಳೆದ ನಾಲ್ಕೈದು ದಿನಗಳಿಂದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಇದರಿಂದ ನದಿಗಳಿಗೆ ಒಂದಿಷ್ಟು ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಆದರೆ, ಬಯಲು ಸೀಮೆಯ ಜಿಲ್ಲೆಗಳ ಪರಿಸ್ಥಿತಿ ಸುಧಾರಣೆಯಾಗಿಲ್ಲ. ಹಾಗಾಗಿ ಮಳೆಯ ಕೊರತೆಯಿಂದ ಉಂಟಾಗಿರುವ ಸನ್ನಿವೇಶಗಳನ್ನು ಸಮರ್ಥವಾಗಿ ಎದುರಿಸಬೇಕಿದೆ ಎಂದರು.

ಸೂಪರ್ ಎಲ್‌ ನಿನೋ ಪರಿಣಾಮದಿಂದ ಭಾರತ ಸೇರಿದಂತೆ ಜಗತ್ತಿನ ಅನೇಕ ಕಡೆಗಳಲ್ಲಿ ಬರ, ಅಕಾಲಿಕ ಮಳೆ, ಭೂ ಕುಸಿತದಂತಹ ಸಮಸ್ಯೆಗಳು ಉಂಟಾಗಬಹುದೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಅದೇ ರೀತಿಯ ವಾತಾವರಣ ಕಂಡು ಬರುತ್ತಿದೆ. ಈ ನಿಟ್ಟಿನಲ್ಲಿಯೂ ಮುನ್ನೆಚ್ಚರಿಕೆ ವಹಿಸಬೇಕಿದೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿಯೂ ಮಳೆಯಾಗದಿದ್ದರೆ ಪರಿಸ್ಥಿತಿ ಇನ್ನಷ್ಟು ವಿಕೋಪಕ್ಕೆ ಹೋಗಬಹುದು. ಅದರ ಪರಿಣಾಮ ನಮ್ಮಲ್ಲೂ ಕಾಣಿಸಿಕೊಳ್ಳುತ್ತಿದೆ. ಇದನ್ನು ಎದುರಿಸಲು ನಾವು ಸಿದ್ಧತೆ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು.

ಕಲಬುರಗಿ ಕಂದಾಯ ವಿಭಾಗದ 26 ತಾಲ್ಲೂಕುಗಳಲ್ಲಿ ಮಳೆ ಕೊರತೆಯಾಗಿದ್ದು, 11 ತಾಲ್ಲೂಕುಗಳಲ್ಲಿ ಅತೀ ಕಡಿಮೆ ಮಳೆಯಾಗಿದೆ. ಒಟ್ಟಾರೆ 37 ತಾಲ್ಲೂಕುಗಳು ಮಳೆ ಕೊರತೆಯಿಂದ ತೊಂದರೆಗೀಡಾಗಿವೆ. ಈವರೆಗೆ ಶೇ.38ರಷ್ಟು ಪ್ರದೇಶದಲ್ಲಿ ಮಾತ್ರ ಬೀಜ ಬಿತ್ತನೆಯಾಗಿದೆ. ಕಳೆದ ವರ್ಷ ಇದೇ ಅವಧಿಗೆ 19.41 ಲಕ್ಷ ಹೆಕ್ಟೇರ್‌ಗಳಷ್ಟು ಬಿತ್ತನೆಯಾಗಿತ್ತು. ಈ ವರ್ಷ 11.76 ಲಕ್ಷ ಹೆಕ್ಟೇರ್‌ಗಳಷ್ಟು ಮಾತ್ರ ಬೀಜ ಬಿತ್ತನೆಯಾಗಿದೆ. ಈ ಕುರಿತು ಗಂಭೀರ ಚಿಂತನೆ ಹಾಗೂ ಯೋಜನೆ ರೂಪಿಸಬೇಕು ಎಂದು ನಿರ್ದೇಶನ ನೀಡಿದರು.

ಅಚಾನಕ್ಕಾಗಿ ಮಳೆ ಬಿದ್ದಾಗ ಏಕಾಏಕಿ ಬಿತ್ತನೆ ಬೀಜ, ಗೊಬ್ಬರಗಳಿಗೆ ಬೇಡಿಕೆ ಹೆಚ್ಚಬಹುದು. ಆ ಸಂದರ್ಭಕ್ಕೆ ಅಗತ್ಯ ಬೀಜ – ಗೊಬ್ಬರ‌ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಇದನ್ನು ನಿರ್ವಹಿಸಲು ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಈ ಕುರಿತು ಜಿಲ್ಲಾಧಿಕಾರಿಗಳು ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ತುರ್ತು ಗಮನ ಹರಿಸಬೇಕು ಎಂದು ಸೂಚನೆ ನೀಡಿದರು.

ಈ ಕಂದಾಯ ವಿಭಾಗದಲ್ಲಿ 47 ವಾರಗಳಿಗೆ ಸಾಕಾಗುವಷ್ಟು ಮೇವಿನ ಲಭ್ಯತೆ ಇದೆ ಎಂದು ಮಾಹಿತಿ ನೀಡಿದ್ದೀರಿ. ಈ ಕುರಿತು ಹಿರಿಯ ಅಧಿಕಾರಿಗಳು ಸ್ವತಃ ಪರಿಶೀಲಿಸಿ ಖಚಿತಪಡಿಸಿಕೊಳ್ಳಿ. ಭಾಲ್ಕಿ, ಹುಮ್ನಾಬಾದ್, ಚಿಟಗುಪ್ಪ, ಹುಲಸೂರು, ಯಾದಗಿರಿ, ಗುರುಮಿಟಕಲ್ ತಾಲ್ಲೂಕುಗಳಲ್ಲಿ 20 ರಿಂದ 24 ವಾರಗಳಿಗೆ ಆಗುವಷ್ಟು ಮಾತ್ರ ಮೇವಿದೆ. ಸಾಧ್ಯವಾದ ಕಡೆಗಳಲ್ಲಿ ತ್ವರಿತಗತಿಯಲ್ಲಿ ಮೇವು ಬ್ಯಾಂಕ್, ಗೋಶಾಲೆಗಳನ್ನು ತೆರೆಯಲು ಕ್ರಮ ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮಳೆ ಮಾಪನ ಕೇಂದ್ರಗಳು ಸಮರ್ಪಕವಾಗಿ ಕಾರ್ಯ ನಿರ್ವಹಣೆಯಲ್ಲಿರುವಂತೆ ನೋಡಿಕೊಳ್ಳಬೇಕು. ಮಳೆ ಕೊರತೆ ಇರುವುದರಿಂದ ರೈತರಿಗೆ ಕಡಿಮೆ ಮಳೆ ನೀರಿನಲ್ಲಿ ಮತ್ತು ಅತ್ಯಂತ ಕಡಿಮೆ ಖರ್ಚಿನಲ್ಲಿ ಬೆಳೆಯಬಹುದಾದ ಬೆಳೆಗಳ ಬಗ್ಗೆ ಪ್ರೋತ್ಸಾಹಿಸಬೇಕು. ಈ ಬಗ್ಗೆ ಕೃಷಿ ಇಲಾಖೆಯು ರೈತಾಪಿವರ್ಗಕ್ಕೆ ಅಗತ್ಯ ತಿಳುವಳಿಕೆ ಮೂಡಿಸಬೇಕು ಎಂದರು.

ರಾಜ್ಯದ ಪ್ರತಿ ತಾಲ್ಲೂಕಿಗೂ ಒಬ್ಬೊಬ್ಬರಂತೆ ಹಿರಿಯ ಕೆಎಎಸ್ ಅಧಿಕಾರಿಗಳನ್ನು ತಾಲ್ಲೂಕು ಉಸ್ತುವಾರಿ ಅಧಿಕಾರಿಗಳೆಂದು ನೇಮಕ ಮಾಡಲಾಗಿದೆ. ಬರ ನಿರ್ವಹಣೆಗೆ ಅವರ ಸೇವೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಈ ಬಗ್ಗೆ ಮುಖ್ಯ ಕಾರ್ಯದರ್ಶಿಯವರು ಗಮನ ಹರಿಸಬೇಕು ಎಂದು ತಿಳಿಸಿದರು.

ಇ-ಪೌತಿ ಪ್ರಕರಣ ಕಾಲಮಿತಿಯೊಳಗೆ ಇತ್ಯರ್ಥಗೊಳಿಸಿ

ಕಲಬುರಗಿ ಕಂದಾಯ ವಿಭಾಗದಲ್ಲಿ ಬಾಕಿ ಉಳಿದಿರುವ 2,23,190 ಇ- ಪೌತಿ ಪ್ರಕರಣಗಳನ್ನು ಕಾಲಮಿತಿಯೊಳಗೆ ಇತ್ಯರ್ಥಗೊಳಿಸುವಂತೆ ಉಪ ಮುಖ್ಯಮಂತ್ರಿಗಳು ಮತ್ತು ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಸೂಚಿಸಿದರು.

ಒಟ್ಟು 3,57,024 ಪ್ರಕರಣಗಳನ್ನು ಇ-ಪೌತಿ ಖಾತೆ ಮಾಡಲು ಗುರುತಿಸಲಾಗಿತ್ತು. ಅದರಲ್ಲಿ 1,33,834 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ವಿವಿಧ ಕಾರಣಗಳಿಂದ ಬಾಕಿ ಉಳಿದಿರುವ 2,23,190 ಇ- ಪೌತಿ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಗೊಳಿಸಲು ಕ್ರಮ ವಹಿಸಬೇಕು ಎಂದು ತಿಳಿಸಿದರು.

ವಿಜಯನಗರ, ಕಲಬುರಗಿ, ಬೀದ‌ರ್ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಇ-ಪೌತಿ ಪ್ರಕರಣಗಳು ಬಾಕಿ ಉಳಿದಿದ್ದು, ಇವುಗಳನ್ನು ಆದ್ಯತೆಯ ಮೇರೆಗೆ 2 ತಿಂಗಳೊಳಗಾಗಿ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.

ಒಟ್ಟು 17,576 ದರ್ಖಾಸ್ತು ಪ್ರಕರಣಗಳಲ್ಲಿ 10,775 ಪ್ರಕರಣಗಳಿಗೆ ಅನುಬಂಧ 1ಅನ್ನು ಮಂಜೂರಾತಿ ಕ್ರಮಬದ್ಧವಾಗಿರುತ್ತದೆ ಎಂದು ತಹಶೀಲ್ದಾರರು ಅನುಮೋದಿಸಿದ್ದು, ಈ ಪ್ರಕರಣಗಳನ್ನು ಕೂಡಲೇ ಪೋಡಿ ದುರಸ್ತಿ ಮಾಡಿ ಆರ್‌ಟಿ‌ಸಿ ನೀಡಲು ಕ್ರಮವಹಿಸಿಬೇಕು. ಈ ಪೈಕಿ ವಿಜಯನಗರ, ಕೊಪ್ಪಳ, ಕಲಬುರಗಿ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಕರಣಗಳಿದ್ದು, ಸಂಬಂಧಿತ ಜಿಲ್ಲಾಧಿಕಾರಿಗಳು ಆದ್ಯತೆಯ ಮೇರೆಗೆ ಇತ್ಯರ್ಥ ಮಾಡಬೇಕು ಎಂದರು.

ಕಲಬುರಗಿ ವಿಭಾಗದಲ್ಲಿ ಒಟ್ಟು 1,483 ಹೊಸ ಕಂದಾಯ ಗ್ರಾಮ ರಚನೆ ಮಾಡಬೇಕಾಗಿದ್ದು, ಜನಗಣತಿ 2027ರ ಕಾರಣ ಅಂತಿಮ ಅಧಿಸೂಚನೆ ಹೊರಡಿಸಲು ಬಾಕಿಯಿರುವ ಪ್ರಕರಣಗಳಲ್ಲಿ ಜನಗಣತಿ ಕಾರ್ಯಪೂರ್ಣಗೊಂಡ ನಂತರ ಯಾವುದೇ ವಿಳಂಬಕ್ಕೆ ಆಸ್ಪದ ನೀಡದೆ ಕ್ರಮವಹಿಸಬೇಕು ಎಂದು ತಿಳಿಸಿದರು.

ಗುರುತಿಸಿರುವ 1,483 ಗ್ರಾಮಗಳ ಪೈಕಿ 1,048 ಗ್ರಾಮಗಳಿಗೆ ಪ್ರಾಥಮಿಕ ಅಧಿಸೂಚನೆ ಹೊರಡಿಸಿದ್ದು, ಉಳಿದ 435 ಗ್ರಾಮಗಳ ಕುರಿತು ಅಧಿಸೂಚನೆ ಹೊರಡಿಸಬೇಕು. ಈ ಪೈಕಿ ಬೀದ‌ರ್ ಜಿಲ್ಲೆಯಲ್ಲೇ 150 ಪ್ರಕರಣಗಳು ಬಾಕಿ ಇರುತ್ತವೆ. ವಿಜಯನಗರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲೂ ಹೆಚ್ಚು ಪ್ರಕರಣಗಳು ಬಾಕಿ ಇರುತ್ತವೆ. ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕಿದೆ ಎಂದರು.

ಕಲಬುರಗಿ ಕಂದಾಯ ವಿಭಾಗದಲ್ಲಿ ಒಟ್ಟು 32 ಪ್ರವರ್ಗ ʼಎʼ ಅಧಿಸೂಚಿತ ದೇವಾಲಯಗಳಿದ್ದು, ಈ ದೇವಸ್ಥಾನಗಳ ಸಮಗ್ರ ಅಭಿವೃದ್ಧಿ ಮತ್ತು ಭಕ್ತರಿಗೆ ಮೂಲಸೌಕರ್ಯ ಅಭಿವೃದ್ಧಿ ಒದಗಿಸಲು ಕಾರ್ಯ ಯೋಜನೆ ರೂಪಿಸಬೇಕು ಎಂದು ತಿಳಿಸಿದರು‌.

ರಾಯಚೂರು ಜಿಲ್ಲೆಯ 2 ದೇವಾಲಯಗಳ 23.23 ಎಕರೆ ಜಮೀನು ಮತ್ತು ಯಾದಗಿರಿ ಜಿಲ್ಲೆಯ 2 ದೇವಾಲಯಗಳ 9.03 ಎಕರೆ ಜಮೀನು ಒತ್ತುವರಿ ತೆರವು ಬಾಕಿ ಇದೆ. ಒತ್ತುವರಿಯನ್ನು ತೆರವುಗೊಳಿಸಿ ಇಲಾಖೆಯ ಸುಪರ್ದಿಗೆ ತೆಗೆದುಕೊಳ್ಳಲು ಕ್ರಮವಹಿಸಬೇಕು. ಮುಂದಿನ ದಿನಗಳಲ್ಲಿ ಯಾವುದೇ ದೇವಾಲಯಗಳ ಆಸ್ತಿಗಳು ಒತ್ತುವರಿ ಆಗದಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದರು.

ಕಲಬುರಗಿ ವಿಭಾಗದಲ್ಲಿ ಒಟ್ಟು 7,606 ದೇವಾಲಯಗಳು ಮತ್ತು ದೇವಾಲಯಗಳ ಆಸ್ತಿಗಳ ಪೈಕಿ 2,635 ದೇವಾಲಯಗಳ ಖಾತೆಯಾಗಿದ್ದು, ಬಾಕಿ ಉಳಿದ 4,971 ದೇವಾಲಯಗಳ ಖಾತೆಯ ಕುರಿತು ಸಂಬಂಧಪಟ್ಟ ತಹಶೀಲ್ದಾರರು ಕೂಡಲೇ ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಿದರು.

More articles

Latest article

Most read