ಅಧಿಕಾರಿಗಳು ಸಭೆಯಲ್ಲಿ ಮೊಬೈಲ್ ಬಳಸಿದರೆ ಸಂಜೆಯೊಳಗೆ ಅಮಾನತು : ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

ಕೆಪಿಎಸ್‌ ಮಾದರಿಯಲ್ಲಿ ಸಿಎಸ್‌ಆರ್‌ ಶಾಲೆ ಆರಂಭ

ಬೆಂಗಳೂರು : ನಾವು ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಜನರ ಮುಂದೆ ಹೋಗಿ ಜನಾದೇಶ ಕೇಳುತ್ತೇವೆ. ಆದರೆ ಅಧಿಕಾರಿಗಳು ಪ್ರತಿದಿನ ಜನರ ವಿಶ್ವಾಸಕ್ಕೆ ಉತ್ತರದಾಯಕರಾಗಿರಬೇಕು. ಕರ್ತವ್ಯ ನಿರ್ವಹಿಸದಿರುವುದು ಕೇವಲ ಆಡಳಿತ ವೈಫಲ್ಯವಲ್ಲ, ಅದು ಜನತೆಗೆ ಮಾಡುವ ದ್ರೋಹ. ಆಡಳಿತದಲ್ಲಿ ಶಿಸ್ತಿಗೆ ಯಾವುದೇ ರಾಜಿ ಇಲ್ಲ ಎಂದು ಎಚ್ಚರಿಸಿದ ಮುಖ್ಯಮಂತ್ರಿ, ಸಭೆಯ ಮಧ್ಯೆ ಯಾವುದೇ ಅಧಿಕಾರಿ ಮೊಬೈಲ್‌ನಲ್ಲಿ ಮಾತನಾಡುತ್ತಿರುವುದು ಕಂಡುಬಂದರೆ, ಸಭೆ ಮುಗಿಯುವ ವೇಳೆಗೆ ಅವರ ಅಮಾನತು ಆದೇಶ ಸಿದ್ಧವಾಗಿರುತ್ತದೆ. ಶಿಸ್ತು ಎನ್ನುವುದು ಆಡಳಿತದ ಮೊದಲ ನಿಯಮ ಎಂದು ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಸಿದರು.

ಬೆಳಗಾವಿಯ ಸುವರ್ಣಸೌಧದಲ್ಲಿ ಗುರುವಾರ ನಡೆಸಿದ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದಲ್ಲೇ ನೆಲೆಸಬೇಕು ಎಂದು ಸೂಚಿಸಿದ ಅವರು, ಜನರ ಸಮಸ್ಯೆಗಳನ್ನು ಕೇಳಲು ಅಧಿಕಾರಿಗಳು ಜನರ ಬಳಿಯೇ ಇರಬೇಕು. ಸಣ್ಣ ಕೆಲಸಗಳಿಗೂ ಜನರನ್ನು ಒಂದು ಕಚೇರಿಯಿಂದ ಮತ್ತೊಂದು ಕಚೇರಿಗೆ ಅಲೆದಾಡಿಸುವ ಸಂಸ್ಕೃತಿ ಕೊನೆಗಾಣಬೇಕು. ಸಾಧ್ಯವಾದಷ್ಟು ಸಮಸ್ಯೆಗಳು ಸ್ಥಳೀಯ ಮಟ್ಟದಲ್ಲೇ ಇತ್ಯರ್ಥವಾಗಬೇಕು ಎಂದು ತಾಕೀತು ಮಾಡಿದರು.

ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್‌) ಮಾದರಿಯಲ್ಲಿಯೇ ಸಿಎಸ್‌ಆರ್‌ ಶಾಲೆಗಳನ್ನು ಪ್ರಾರಂಭಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು.

ಶಿಕ್ಷಣ ಇಲಾಖೆಯಲ್ಲೂ ಇದೇ ರೀತಿಯ ಮತ್ತೊಂದು ಕ್ರಾಂತಿಕಾರಿ ತೀರ್ಮಾನ ತೆಗೆದುಕೊಳ್ಳುತ್ತಿದ್ದೇವೆ. ಕೆಪಿಎಸ್ ಶಾಲೆಗಳ ಯಶಸ್ವಿ ಮಾದರಿಯಂತೆ ಸಿಎಸ್‌ಆರ್ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಗ್ರಾಮೀಣ ಮಕ್ಕಳಿಗೂ ನಗರಮಟ್ಟದ ಶಿಕ್ಷಣ ದೊರೆಯಬೇಕು. ಪ್ರತಿಯೊಂದು ಕ್ಷೇತ್ರದಲ್ಲೂ 10 ರಿಂದ 20 ಗುಣಮಟ್ಟದ ಶಾಲೆಗಳನ್ನು ನಿರ್ಮಿಸುವ ಗುರಿಯೊಂದಿಗೆ ಸರ್ಕಾರ ಮತ್ತು ಕೈಗಾರಿಕಾ ವಲಯ ಒಟ್ಟಾಗಿ ಕೆಲಸ ಮಾಡಲಿದೆ ಎಂದರು.

ಸಿಎಸ್‌ಆರ್‌ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ಸಂಬಂಧ ಎಲ್ಲಾ ಉದ್ಯಮಿಗಳನ್ನು ನಾನು ಕರೆಸಿ ಮಾತುಕತೆ ನಡೆಸುತ್ತಿದ್ದೇನೆ. ಪ್ರಾಥಮಿಕ ಹಂತದಿಂದಲೇ ನನ್ನ ಕ್ಷೇತ್ರದಲ್ಲಿ ನಾನು ಈ ಪ್ರಯೋಗ ಮಾಡಿ ಯಶಸ್ವಿ ಆಗಿದೆ. 20 ಶಾಲೆಗಳು ಅಚ್ಚುಕಟ್ಟಾಗಿ ನಡೆಯುತ್ತಿವೆ. ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಇದು ಪರಿಣಾಮಕಾರಿಯಾಗಿ ಸ್ಥಾಪನೆ ಆಗಬೇಕು ಎನ್ನುವುದು ನನ್ನ ಗುರಿಯಾಗಿದೆ. ನೀವುಗಳು ನನ್ನ ಗುರಿಗಳ ಜೊತೆಗೆ ಹೆಜ್ಜೆ ಹಾಕಿ ಎಂದು ಸಿಎಂ ಅಧಿಕಾರಿಗೆ ಹೇಳಿದರು.

ಯುವ ಉದ್ಯೋಗ ಸೇತು: ಯುವಕರಿಗೆ ಉದ್ಯೋಗವಾಕಾಶಗಳನ್ನು ಹೆಚ್ಚಿಸಲು ಖಾಸಗಿ ಉದ್ಯೋಗ ವಿನಿಮಯ ಕೇಂದ್ರವನ್ನೂ ತೆರೆಯಲು ನಾವು ತೀರ್ಮಾನಿಸಿದ್ದೇವೆ. ಇದಕ್ಕೆ ‘ಯುವ ಉದ್ಯೋಗ ಸೇತು’ ಕಾರ್ಯಕ್ರಮ ಜಾರಿ ಮಾಡುತ್ತಿದ್ದೇವೆ. ಖಾಸಗಿ ಕ್ಷೇತ್ರದ ಉದ್ಯೋಗಗಳ ಬಗ್ಗೆಯೂ ಮಾಹಿತಿ ವಿದ್ಯಾರ್ಥಿ ಯುವ ಜನರಿಗೆ ಸಿಗಲಿದೆ ಎಂದರು.

ಸಾಮಾಜಿಕ ಸಾಮರಸ್ಯ ಮತ್ತು ಸಂವಿಧಾನ ಮೌಲ್ಯಗಳ ಪ್ರಸಾರಕ್ಕಾಗಿ ರಾಜ್ಯಾದ್ಯಂತ 10,000 ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲಾಗುವುದು. ಪ್ರತಿಯೊಂದು ಸಂಘಕ್ಕೂ 10 ಲಕ್ಷ ರೂ. ಅನುದಾನ ನೀಡಲಾಗುವುದು. ಕುವೆಂಪು ಅವರ ವಿಶ್ವಮಾನವ ಸಂದೇಶ ಮತ್ತು ಸಂವಿಧಾನದ ಆದರ್ಶಗಳನ್ನು ಸಮಾಜದ ಮನೆಮನೆಗೆ ತಲುಪಿಸುವ ಸಾಂಸ್ಕೃತಿಕ ಚಳವಳಿಯಾಗಿ ಇದು ರೂಪುಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಕೊನೆಗೆ ಕಂದಾಯ ಭೂಮಿಯ ಸಮಗ್ರ ಆಡಿಟ್‌ಗೆ ಸೂಚನೆ ನೀಡಿದ ಸಿಎಂ, ರಾಜ್ಯದ ಪ್ರತಿಯೊಂದು ಇಂಚು ಸರ್ಕಾರಿ ಭೂಮಿಯ ನಿಖರ ಮಾಹಿತಿ ಸರ್ಕಾರದ ಬಳಿ ಇರಬೇಕು. ನಿವೇಶನ ರಹಿತ ಬಡ ಕುಟುಂಬಗಳಿಗೆ ನಿವೇಶನ ಒದಗಿಸುವ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಶೀಘ್ರದಲ್ಲೇ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

More articles

Latest article

Most read