ಲೈಂಗಿಕ ಕಿರುಕುಳ ಪ್ರಕರಣ : ಹೆಚ್.ಡಿ.ರೇವಣ್ಣಗೆ ಸುಪ್ರೀಂಕೋರ್ಟ್‌ ನೋಟಿಸ್‌ ಜಾರಿ

ನವದೆಹಲಿ : ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರಿಗೆ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌  ನೋಟಿಸ್‌ ಜಾರಿ ಮಾಡಿದೆ.
ಹೈಕೋರ್ಟ್  ಹೆಚ್.ಡಿ. ರೇವಣ್ಣ ಅವರಿಗೆ ನೀಡಿದ್ದ ದೋಷಮುಕ್ತ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪರ್ದಿವಾಲಾ, ಕೆ.ವಿನೋದ್ ಚಂದ್ರನ್ ಅವರ ದ್ವಿಸದಸ್ಯ ಪೀಠವು ಈ ನೋಟಿಸ್ ಹೊರಡಿಸಿದೆ. ಅಲ್ಲದೇ,  ಹೈಕೋರ್ಟ್‌ನ ನಡಾವಳಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ತಮ್ಮನ್ನು ಕೈಬಿಡುವಂತೆ ಕೋರಿ ಹೆಚ್.​​ಡಿ ರೇವಣ್ಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅವರ ವಿರುದ್ಧ ಐಪಿಸಿ ಸೆಕ್ಷನ್ 354 (ಮಹಿಳೆಯ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಬಲ ಪ್ರಯೋಗ) ಮತ್ತು 354ಎ (ಲೈಂಗಿಕ ಕಿರುಕುಳ) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಆದರೆ, ಹೈಕೋರ್ಟ್ ಐಪಿಸಿ ಸೆಕ್ಷನ್ 354 ಅನ್ನು ರೇವಣ್ಣ ವಿರುದ್ಧದ ಪ್ರಕರಣದಿಂದ ಕೈಬಿಟ್ಟು, ಸೆಕ್ಷನ್ 354ಎ ಅಡಿ ಪ್ರಾಸಿಕ್ಯೂಷನ್ ಅನ್ನು ಮುಂದುವರಿಸಲು ಕೆಳ ನ್ಯಾಯಾಲಯಕ್ಕೆ ಆದೇಶ ನೀಡಿತ್ತು.

ಮೇಲ್ಮನವಿ ಸಲ್ಲಿಸಿದ್ದ ರಾಜ್ಯ ಸರ್ಕಾರ : ಹೈಕೋರ್ಟ್‌ನ ಆದೇಶವನ್ನು ಕರ್ನಾಟಕ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿ, ಮೇಲ್ಮನವಿ ಸಲ್ಲಿಸಿತ್ತು. ಒಂದು ಪ್ರಕರಣದಲ್ಲಿ ಆರೋಪದಿಂದ ಮುಕ್ತಗೊಳಿಸಿದ್ದಕ್ಕೆ ಮತ್ತು ಒಂದು ಸೆಕ್ಷನ್ ಅನ್ನು ಕೈಬಿಟ್ಟಿದ್ದಕ್ಕೆ ರಾಜ್ಯ ಸರ್ಕಾರವು ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿತು. ‘ಹೈಕೋರ್ಟ್ ಆರೋಪವನ್ನು ಹೇಗೆ ಬದಲಾಯಿಸಲು ಸಾಧ್ಯ’ ಎಂದು ರಾಜ್ಯ ಸರ್ಕಾರ ತನ್ನ ಅರ್ಜಿಯಲ್ಲಿ ವಾದಿಸಿತ್ತು.

ಪ್ರಕರಣದ ಹಿನ್ನಲೆ :  ಹೊಳೆನರಸೀಪುರದಲ್ಲಿರುವ ತಮ್ಮ ಮನೆಯ ಕೆಲಸದಾಕೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಹಾಗೂ ಅವರ ತಂದೆ ಹೆಚ್​.ಡಿ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿತ್ತು. ಈಗಾಗಲೇ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದು, ಆತನ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಗೆ ಸಿದ್ಧತೆಗಳು ನಡೆಯುತ್ತಿವೆ. ಇದೇ ಪ್ರಕರಣದಲ್ಲಿ ಹೆಚ್​ಡಿ ರೇವಣ್ಣ ಅವರನ್ನೂ ಕೂಡ ಬಂಧಿಸಲಾಗಿತ್ತು. ಮನೆಗೆಲಸದಾಕೆಗೆ ತೀವ್ರ ಕಿರುಕುಳ ನೀಡಲಾಗಿತ್ತು ಮತ್ತು ಆಕೆಯ ಘನತೆಗೆ ಧಕ್ಕೆ ತರಲಾಗಿತ್ತು ಎಂಬ ಆರೋಪದ ಮೇಲೆ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು.

More articles

Latest article

Most read