ಕೋಲಾರ : ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಅಕ್ರಮ ಗಾಂಜಾ ಮಾರಾಟ ಜಾಲವನ್ನು ಭೇದಿಸಿರುವ ಜಿಲ್ಲಾ ಪೊಲೀಸರು ಉತ್ತರ ಪ್ರದೇಶ ಮೂಲದ ಆರೋಪಿಯೊಬ್ಬನನ್ನು ನಗರದ ಎಪಿಎಂಸಿ ಮಾರುಕಟ್ಟೆ ಪ್ರದೇಶದ ಬಳಿ ಬಂಧಿಸಿರುವ ಪೊಲೀಸರು ಆತನ ಬಳಿ ಇದ್ದ ಸುಮಾರು 2,50,000 ರೂ ಬೆಲೆಯ 4 ಕೆಜಿ 310 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಬಂದಿತ ಆರೋಪಿಯನ್ನು ಉತ್ತರ ಪ್ರದೇಶ ಮೂಲದ ಬೋಲಾ ನಾಥ್ ಪಾಲ್ (43) ಎನ್ನಲಾಗಿದ್ದು ಈತ ಕಳೆದೊಂದು ವರ್ಷದಿಂದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಇರುವ ಹೋಟೆಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ನನ್ನಲಾಗಿದ್ದು ಈತನು ಅಕ್ರಮ ಗಾಂಜಾ ಮಾರಾಟ ಜಾಲದಲ್ಲಿ ತೊಡಗಿಸಿಕೊಂಡಿದ್ದ ನಿನ್ನಲಾಗಿದೆ.
ಸದರಿ ಆರೋಪಿ ಬೋಲನಾಥ್ ಪಾಲ್ ನೆನ್ನೆಯ ದಿನ ಹೊರವಲಯದಲ್ಲಿನ ಎಪಿಎಂಸಿ ಮಾರುಕಟ್ಟೆ ಪ್ರದೇಶಕ್ಕೆ ಗಾಂಜಾ ಮಾರಾಟ ಮಾಡಲು ಎತ್ತಿಸುತ್ತಿದ್ದಾಗ ಜಿಲ್ಲಾ ಪೊಲೀಸರು ಈತನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಜಿಲ್ಲಾ ಪೊಲೀಸರ ಈ ಕ್ರಮಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಕನ್ನಿಕಾ ಸುಕ್ರಿ ಪಾಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

