ಜಿಬಿಎ ಚುನಾವಣೆಗೆ ಡಿಸೆಂಬರ್‌ವರೆಗೂ ಗಡುವು ವಿಸ್ತರಿಸಿದ ಸುಪ್ರೀಂಕೋರ್ಟ್‌

ನವದೆಹಲಿ : ರಾಜಧಾನಿಯ ಐದು ಪಾಲಿಕೆಗಳ 369 ವಾರ್ಡ್‌ಗಳಿಗೆ ಚುನಾವಣೆ ನಡೆಸುವ ಗಡುವನ್ನು ಡಿಸೆಂಬರ್ ವರೆಗೆ ವಿಸ್ತರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ  ಮತ್ತು ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಪ್ರತ್ಯೇಕ ಮನವಿಗಳನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ ಪೀಠವು ಜಿಬಿಎ ಚುನಾವಣೆ ಗಡುವನ್ನು ವಿಸ್ತರಿಸಿದೆ.   ಜಿಬಿಎ ಚುನಾವಣೆ ನಡೆಸುವ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ರಿಲೀಫ್‌ ಸಿಕ್ಕಿದೆ. ಚುನಾವಣೆ ನಡೆಸಲು ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌  ಮತ್ತೆ ಸಮಯಾವಕಾಶ ನೀಡಿದೆ.

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ  ನಡೆಯುತ್ತಿದೆ. ಎಸ್‌ಐಆರ್ ನವೆಂಬರ್‌ನಲ್ಲಿ ಅಂತ್ಯಗೊಳ್ಳಲಿದೆ. ಸಿಬ್ಬಂದಿ ಎಲ್ಲ ಎಸ್‌ಐಆರ್ ಕೆಲಸದಲ್ಲಿದ್ದಾರೆ ಎಂದು ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. 

ನವದೆಹಲಿಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್‌, ಡಿಸೆಂಬರ್‌ ಒಳಗೆ ಜಿಬಿಎ ಸೇರಿದಂತೆ ಎಲ್ಲಾ ಸ್ಥಳೀಯ ಚುನಾವಣೆಗಳನ್ನು ನಡೆಸುವುದಾಗಿ ತಿಳಿಸಿದ್ದಾರೆ.

More articles

Latest article

Most read