ಬೆಂಗಳೂರು : ದೇಶದಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಕನ್ನಡದ ಮೇರುನಟ ಡಾ.ರಾಜ್ಕುಮಾರ್ ಮನೆಯ ಕುಡಿ, ನಟ ಯುವ ರಾಜ್ಕುಮಾರ್ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿದ್ದಾರೆ.
ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ನವದೆಹಲಿಯಲ್ಲಿ ಸಿಜೆಪಿ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ರಣಾಂಗಣವಾಗಿ ಮಾರ್ಪಟ್ಟಿತ್ತು. ಪೊಲೀಸರ ಲಾಠಿ ಚಾರ್ಜ್ನಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಈ ಬಗ್ಗೆ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಧ್ವನಿ ಎತ್ತಿರುವ ಯುವರಾಜ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.



https://www.facebook.com/photo?fbid=1580367186978880&set=pcb.1580367243645541
ಪೋಸ್ಟ್ ಹೀಗಿದೆ..
“ರಾಜಕೀಯಕ್ಕಿಂತ ಮಾನವೀಯತೆ ದೊಡ್ಡದು.
ಪ್ರಚಾರಕ್ಕಿಂತ ಸತ್ಯ ದೊಡ್ಡದು.
ಭಯಕ್ಕಿಂತ ಧ್ವನಿ ದೊಡ್ಡದು.”
ಈ ಪೋಸ್ಟ್ ಯಾವುದೇ ರಾಜಕೀಯ ಪಕ್ಷದ ಪರವೂ ಅಲ್ಲ, ವಿರೋಧವೂ ಅಲ್ಲ. ಇದು ಮಾನವೀಯತೆಯ ಬಗ್ಗೆ. ದೆಹಲಿನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ನಾವು ಸುಮ್ಮನೆ ನೋಡುತ್ತಾ ಹೋಗಬಾರದು. ದೇಶದ ಮೂಲೆ ಮೂಲೆಗಳಿಂದ ವಿದ್ಯಾರ್ಥಿಗಳು ಒಂದೇ ವಿಚಾರಕ್ಕಾಗಿ ಧ್ವನಿ ಎತ್ತುತ್ತಿದ್ದಾರೆ. ಅವರ ಧ್ವನಿಯನ್ನು ಕೇಳುವುದು, ಏನಾಗುತ್ತಿದೆ ಎಂದು ತಿಳಿದುಕೊಳ್ಳುವುದು ನಮ್ಮ ಜವಾಬ್ದಾರಿ. ಯಾರು ಹೊಣೆ? ಈ ಪರಿಸ್ಥಿತಿ ತಪ್ಪಿಸಬಹುದಿತ್ತೇ? ವಿದ್ಯಾರ್ಥಿಗಳಿಗೆ ಗಾಯಗಳಾಗಲು ಕಾರಣವೇನು? ಇಂತಹ ಘಟನೆಗಳು ಮತ್ತೆ ನಡೆಯದಂತೆ ನಾವು ಏನು ಮಾಡಬೇಕು?
ಪ್ರತಿಯೊಬ್ಬ ನಾಗರಿಕನಿಗೂ ಮಾಹಿತಿ ತಿಳಿದುಕೊಳ್ಳುವ ಜವಾಬ್ದಾರಿ ಇದೆ. ನೆಲಮಟ್ಟದಲ್ಲಿರುವವರ ಧ್ವನಿಯನ್ನು ಆಲಿಸಿ. ಸತ್ಯಾಂಶಗಳನ್ನು ತಿಳಿದುಕೊಳ್ಳಿ.
ಕಷ್ಟದ ಪ್ರಶ್ನೆಗಳನ್ನೂ ಕೇಳಿ. ನಿಮ್ಮದೇ ಆದ ಅಭಿಪ್ರಾಯ ರೂಪಿಸಿಕೊಳ್ಳಿ. ಒಂದು ರಾಷ್ಟ್ರ ತನ್ನ ಜನರು ಕಣ್ಮುಚ್ಚಿ ನೋಡುವುದನ್ನು ಬಿಟ್ಟು, ಮಾನವೀಯತೆಯ ಪರ ನಿಂತು, ಹೊಣೆಗಾರಿಕೆಯನ್ನು ಕೇಳಿದಾಗ ಇನ್ನಷ್ಟು ಬಲವಾಗುತ್ತದೆ. ಇದು ನಮ್ಮೆಲ್ಲರ ಸಮಸ್ಯೆ.
ಏಕೆಂದರೆ ಒಂದು ರಾಷ್ಟ್ರದ ಭವಿಷ್ಯವನ್ನು ಅದರ ಜನರ ಜಾಗೃತಿ, ಮಾನವೀಯತೆ ಮತ್ತು ಹೊಣೆಗಾರಿಕೆ ರೂಪಿಸುತ್ತವೆ.
ಈ ರೀತಿ ವಿದ್ಯಾರ್ಥಿಗಳ ಬೆಂಬಲಕ್ಕೆ ನಟ ಯುವರಾಜ್ಕುಮಾರ್ ನಿಂತಿದ್ದಾರೆ.

