ಫುಟ್‌ಪಾತ್‌ ಒತ್ತುವರಿ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ : 10 ಮಂದಿ ವಶಕ್ಕೆ

ಬೆಂಗಳೂರು :  ಶಿವಾಜಿನಗರದಲ್ಲಿ ಇಂದು ಬೆಳಗ್ಗೆ ಫುಟ್‌ಪಾತ್‌ ಒತ್ತುವರಿ ತೆರವಿಗೆ ಅಧಿಕಾರಿಗಳು ತೆರಳಿದ ಸಂದರ್ಭದಲ್ಲಿ ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ಹಲ್ಲೆ ನಡೆಸಿರುವ ಹಿನ್ನಲೆ 10 ಮಂದಿ ವಶಕ್ಕೆ ಪಡೆದಿದ್ದಾರೆ. 6 ಮಂದಿ ವ್ಯಾಪಾರಸ್ಥರು, 4 ಮಂದಿ ಸಂಘಟನೆಯ ಕಾರ್ಯಕರ್ತರು ಎನ್ನಲಾಗಿದೆ.

ಕಿರಣ್ (34), ಬಸವರಾಜ್ (28), ರಂಜಿತ್ (19), ರಂಗಸ್ವಾಮಿ (49), ಮುಜಾಹಿದಾ ಅಹಮದ್ (39) ಕೊಟ್ರೇಶ್ (26), ಪರಶುರಾಮ್ (27), ರಘು (28) ಪಾರ್ಥೀಬನ್ (23) ಹಾಗೂ ಭರತ್ (24) ಎಂಬ ಬಂಧಿತರು.

ಮಹಿಳಾ ಸಿಬ್ಬಂದಿ ರುಚಿತಾ ಎಂಬುವರ ಮೇಲೆ ಪೆಪ್ಪರ್‌ ಸ್ಪ್ರೇ ಮಾಡಲಾಗಿದೆ. ಜಿಬಿಎ ಸಿಬ್ಬಂದಿ ಮೇಲೆ ಹೆಲ್ಮೆಟ್‌, ಬಕೆಟ್‌ ಸೇರಿದಂತೆ ಕೈಗೆ ಸಿಕ್ಕ ವಸ್ತುಗಳಿಂದ ಹಲ್ಲೆ ಮಾಡಿದ್ದಾರೆ. ಬಳಿಕ ಅಧಿಕಾರಿಗಳು ಕಮರ್ಷಿಯಲ್‌ ಸ್ಟ್ರೀಟ್‌ ಪೊಲೀಸ್‌ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.

10 ಜನ ವಶಕ್ಕೆ : ಫುಟ್​ಪಾತ್​ ತೆರವು ವೇಳೆ ಅಧಿಕಾರಿಗಳ ಮೇಲೆ ದಾಳಿ ಸಂಬಂಧ 10 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ವಿಕ್ರಮ್ ಆಮ್ಟೆ ತಿಳಿಸಿದ್ದಾರೆ. ಕಮರ್ಷಿಯಲ್ ಸ್ಟ್ರೀಟ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆ ಹಲ್ಲೆ ನಡೆದಿರುವ ಬಗ್ಗೆ ಎಇಇ ಮಾಧವ ರಾವ್ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಿಸಲಾಗಿದೆ. ವಿಶೇಷ ತಂಡ ರಚಿಸಿ ತನಿಖೆ ಮಾಡುತ್ತೇವೆ. ರಕ್ಷಣೆ ಕೋರಿ ಅಧಿಕಾರಿಗಳು ಮನವಿ ಸಲ್ಲಿಸಿದ್ದ ಬಗ್ಗೆ ಪರಿಶೀಲಿಸುತ್ತೇವೆ. ಕಾನೂನು ಕೈಗೆ ತೆಗೆದುಕೊಳ್ಳೋಕೆ ಯಾರಿಗೂ ಹಕ್ಕಿಲ್ಲ. ಯಾರೇ ತಪ್ಪು ಮಾಡಿದರೂ ಅವರನ್ನು ಯಾವುದೇ ಕಾರಣಕ್ಕೂ ಬಿಡಲ್ಲ ಎಂದವರು ತಿಳಿಸಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಪ್ರತಿಕ್ರಿಯಿಸಿ, ಹಲ್ಲೆ ಮಾಡಿದವರು ಇವರು ಜೀವನೋಪಾಯಕ್ಕಾಗಿ ಕಷ್ಟಪಟ್ಟು ದುಡಿಯುವ ಬಡಜನರಲ್ಲ. ಇವರು ಸಮಾಜಘಾತುಕ ಶಕ್ತಿಗಳು ಎಂದಿದ್ದಾರೆ. ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿದ ಪ್ರತಿಯೊಬ್ಬರನ್ನೂ ಬಂಧಿಸಲಾಗುವುದು ಈ ಬಗ್ಗೆ ಪೊಲೀಸ್ ಆಯುಕ್ತರು ಮತ್ತು ಜಿಬಿಎ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದವರು ತಿಳಿಸಿದ್ದಾರೆ.

ನಮ್ಮ ಅಧಿಕಾರಿಗಳು ಕಾನೂನು ಪ್ರಕಾರ ಕೆಲಸ ಮಾಡುವಾಗ ಅವರ ಕೆಲಸಕ್ಕೆ ಅಡ್ಡಿಪಡಿಸುವುದು ಅಥವಾ ಅವರ ಮೇಲೆ ಹಲ್ಲೆ ಮಾಡುವಂತಹ ಪ್ರಕರಣಗಳನ್ನು ಕಂಡು ನಾವಂತೂ ಖಂಡಿತ ಸುಮ್ಮನಿರಲು ಸಾಧ್ಯವಿಲ್ಲ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈವರೆಗೂ 10 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಬಸವರಾಜ್ ಪಡುಕೋಟೆ ಎಂಬ ವ್ಯಕ್ತಿ ಮೇಲ್ನೋಟಕ್ಕೆ ಇಂತಹ ದಂಧೆಯಲ್ಲಿ ತೊಡಗಿರುವಂತೆ ಕಂಡುಬಂದಿದ್ದು, ಆತನ ವಿರುದ್ಧ ಗೂಂಡಾ ಕೇಸ್ ದಾಖಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಜಿಬಿಎ ನೌಕರರ ಸಂಘದ ಅಧ್ಯಕ್ಷ ಅಮೃತ್ ರಾಜ್ ಅವರು ಮಾತನಾಡಿ, ಬಸವರಾಜ್ ಪಡುಕೋಟೆ ಕನ್ನಡಪರ ಸಂಘಟನೆಯ ಹೆಸರು ಹೇಳಿಕೊಂಡು ಸ್ಥಳೀಯ ವ್ಯಾಪಾರಿಗಳಿಂದ ನಿಯಮಿತವಾಗಿ ಮಾಮೂಲಿ ವಸೂಲಿ ಮಾಡುತ್ತಿದ್ದ. ಒತ್ತುವರಿ ತೆರವುಗೊಂಡರೆ ಆತನ ಹಫ್ತಾ ಬಂದ್ ಆಗುತ್ತದೆ ಎಂಬ ಕಾರಣಕ್ಕೆ ಈ ಮಾರಣಾಂತಿಕ ದಾಳಿ ನಡೆಸಿದ್ದಾನೆ” ಎಂದು ನೇರ ಆರೋಪ ಮಾಡಿದ್ದಾರೆ.

More articles

Latest article

Most read