ಶಿವಮೊಗ್ಗದಲ್ಲಿ ಬಿಜೆಪಿ ಕಚೇರಿಗೆ ಯುವ ಕಾಂಗ್ರೆಸ್ ಮುತ್ತಿಗೆ

ಶಿವಮೊಗ್ಗ : ರಾಜ್ಯ ಬಿಜೆಪಿ ಮುಖಂಡರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿದ ಬೆನ್ನಲ್ಲೇ ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ನಗರದ ಮಹಾವೀರ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಮಹಾವೀರ ವೃತ್ತದಿಂದ ಏಕಾಏಕಿ ಪಾದಯಾತ್ರೆ ಮೂಲಕ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಶಿವಮೊಗ್ಗದ ಜಿಲ್ಲಾ ಬಿಜೆಪಿ ಕಚೇರಿ ಕಡೆ ತೆರಳಿದರು. ಪೊಲೀಸರ ತಡೆ ನಡುವೆಯೂ ಬ್ಯಾರಿಕೇಡ್ ತಳ್ಳಿ ನುಗ್ಗಿದೆ ಪ್ರತಿಭಟನಾಕಾರರು, ಬಿಜೆಪಿ ಕಚೇರಿ ಆವರಣ ಪ್ರವೇಶಿಸಿದರು. ಈ ವೇಳೆ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಯತ್ನಿಸಿದರು. ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಪೊಲೀಸ್ ವಾಹನದ ಮೇಲೆ ಹತ್ತಿ ಬಾವುಟ ಬೀಸಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ರೋ ವ್ಯಕ್ತಪಡಿಸಿದರು.

ಈ ವೇಳೆ ಪರಸ್ಪರ ತಳ್ಳಾಟ-ನೂಕಾಟ ಉಂಟಾಯಿತು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.
ಬಿಜೆಪಿ ಕಚೇರಿ ಬಳಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಜಮಾಯಿಸಿದ್ದರು. ಈ ವೇಳೆ ಕಚೇರಿಯ ಶಟರ್ ಎಳೆಯುವ ವಿಚಾರವಾಗಿ ಪೊಲೀಸರೊಂದಿಗೆ ಬಿಜೆಪಿ ಕಾರ್ಯಕರ್ತರು ವಾಗ್ವಾದ ನಡೆಸಿದರು.

ದೆಹಲಿಯ ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗ ಮೇಲೆ ಪೊಲೀಸರು ನಡೆಸಿದ್ದ ದೌರ್ಜನ್ಯ ಖಂಡಿಸಿ ವಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿಯವರ ನಿವಾಸಕ್ಕೆ ಮುತ್ತಿಗೆ ಹಾಕಿ ನ್ಯಾಯಕ್ಕೆ ಆಗ್ರಹಿಸಿದ್ದರು.

ಈ ಸಂದರ್ಭದಲ್ಲಿ ರಾಹುಲ್ ಗಾಂಧಿಯವರ ಮೇಲೂ ಪೊಲೀಸರು ಹಲ್ಲೆ ನಡೆಸಿದ್ದರು. ಈ ಘಟನೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಘಟಕ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಪ್ರಯತ್ನ ನಡೆಸಿತ್ತು. ಇದರಿಂದ ಆಕ್ರೋಶಗೊಂಡ ಶಿವಮೊಗ್ಗ ಯುವ ಕಾಂಗ್ರೆಸ್ ಕಾರ್ಯಕರ್ತರು ಯುವ ಕಾಂಗ್ರೆಸ್ ಮುಖಂಡರಾದ ಗಿರೀಶ್ ನೇತೃತ್ವದಲ್ಲಿ ಬಿಜೆಪಿ ಕಚೇರಿಗೆ ನುಗ್ಗಿದರು. ಈ ಸಮಯಕ್ಕೆ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥತಿ ನಿಯಂತ್ರಿಸಿದರು. ಪ್ರತಿಭಟನೆಯಲ್ಲಿ ಗಿರೀಶ್,‌ರಂಗನಾಥ್ ಮೊದಲಾದವರು ನೇತೃತ್ವ ವಹಿಸಿದ್ದರು.

More articles

Latest article

Most read