ನವದೆಹಲಿ : ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಶುಕ್ರವಾರದಂದು ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಇತ್ತೀಚಿನ ಪ್ರತಿಭಟನೆಗಳ ವೇಳೆ ಪೊಲೀಸ್ ಕ್ರಮಕ್ಕೆ ಒಳಗಾದವರೊಂದಿಗೆ ಒಗ್ಗಟ್ಟು ಪ್ರದರ್ಶಿಸಲು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಲು ದೇಶದಾದ್ಯಂತ ವಿದ್ಯಾರ್ಥಿಗಳು ಮತ್ತು ಯುವಜನರು ಮೆರವಣಿಗೆ ನಡೆಸುವಂತೆ ಅದು ಕರೆ ನೀಡಿದೆ.
ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ ಬೆನ್ನಲ್ಲೇ ಈ ರಾಷ್ಟ್ರವ್ಯಾಪಿ ಪ್ರತಿಭಟನೆಯ ಕರೆ ಹೊರಬಿದ್ದಿದೆ. ವಾಂಗ್ಚುಕ್ ಅವರು ತಮ್ಮ ಉಪವಾಸವನ್ನು ಹಿಂಪಡೆದಿದ್ದರೂ, ಶಿಕ್ಷಣ ವ್ಯವಸ್ಥೆಯಲ್ಲಿ ಹೊಣೆಗಾರಿಕೆಯನ್ನು ಆಗ್ರಹಿಸುವ ಬೃಹತ್ ಹೋರಾಟವು ಮುಂದುವರಿಯಲಿದೆ ಎಂದು CJP ಹೇಳಿದೆ.
ಪಾಕ್ ಮೂಲದ 480 ಸೋಶಿಯಲ್ ಮೀಡಿಯಾ ಖಾತೆ ಬ್ಲಾಕ್
ಸಿಜೆಪಿ ಪ್ರತಿಭಟನೆಯ ನಡುವೆಯೇ ದೆಹಲಿ ಪೊಲೀಸರು ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿದ್ದವು ಎಂದು ಶಂಕಿಸಲಾದ 480 ಸೋಶಿಯಲ್ ಮೀಡಿಯಾ ಖಾತೆಗಳನ್ನ ಬ್ಲಾಕ್ ಮಾಡಿರುವುದಾಗಿ ತಿಳಿದುಬಂದಿದೆ.
ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಸಿಜೆಪಿ