ನವದೆಹಲಿ : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಲೆದಂಡಕ್ಕೆ ಪಟ್ಟು ಹಿಡಿದರುವ ಸಿಜೆಪಿ, ರಾಜೀನಾಮೆ ನೀಡಿದ ಬಳಿಕವೇ ತೀರ್ಮಾನ ಎಂದು ಸಿಜೆಪಿ ವಕ್ತಾರ ಸೌರವ್ ದಾಸ್ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಕೇಂದ್ರ ಸರ್ಕಾರ ನಾಳೆಯವರೆಗೂ ಕಾಲಾವಕಾಶ ಕೇಳಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಮುಂದೆ ಸಿಜೆಪಿ 3 ಬೇಡಿಕೆಗಳನ್ನು ಇಟ್ಟಿದೆ.
ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲೇಬೇಕು. ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 1 ಕೋಟಿ ರೂ. ನೀಡಬೇಕು. ವಿದ್ಯಾರ್ಥಿಗಳ ಮೇಲಿನ ಎಫ್ಐಆರ್ ವಾಪಸ್ಸು ಪಡೆಯಬೇಕು ಎಂದು ಆಗ್ರಹಿಸಿದೆ.
ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಮಾತನಾಡಿ, ಪ್ರಧಾನಿ ಸರ್ ಮೊದಲು ಧರ್ಮೇಂದ್ರ ಪಧಾನ್ ರಾಜೀನಾಮೆ ಪಡೆಯಿರಿ, ಇಲ್ಲದಿದ್ದರೆ ನಿಮ್ಮ ರಾಜೀನಾಮೆಯನ್ನು ದೇಶದ ಯುವಕರು ಕೇಳುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

