ಹಲ್ಲೆ ಮಾಡಿದ ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಲು CJPಯಿಂದ ‘ಸಾಕ್ಷಿ’ ವೇದಿಕೆಗೆ ಚಾಲನೆ

ನವದೆಹಲಿ: ಜುಲೈ 20ರಂದು ದೆಹಲಿಯಲ್ಲಿ ನಡೆದ ‘ಚಲೋ ಸಂಸದ್’ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ನಡೆದಿದ್ದ ಪೊಲೀಸ್ ದೌರ್ಜನ್ಯದ ವಿರುದ್ಧ ಕಾನೂನು ಹೋರಾಟವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕಾಕ್‌ರೋಚ್ ಜನತಾ ಪಾರ್ಟಿ (CJP) ‘ಸಾಕ್ಷಿ’ (Saakshi) ಎಂಬ ಆನ್‌ಲೈನ್ ಸಾಕ್ಷ್ಯ ಸಂರಕ್ಷಣಾ ವೇದಿಕೆಯನ್ನು ಆರಂಭಿಸಿದೆ.

ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸ್ ಹಲ್ಲೆ, ಲಾಠಿಚಾರ್ಜ್, ಅತಿಯಾದ ಬಲಪ್ರಯೋಗ ಅಥವಾ ಇತರ ಹಕ್ಕು ಉಲ್ಲಂಘನೆಗಳಿಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ಸಂಗ್ರಹಿಸಿ, ಸಂಬಂಧಪಟ್ಟ ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಈ ವೇದಿಕೆ ನೆರವಾಗಲಿದೆ ಎಂದು ಸಂಘಟನೆ ತಿಳಿಸಿದೆ.

ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ CJP ಮುಖಂಡರು, ಜುಲೈ 20ರ ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳು ಮತ್ತು ಪ್ರತಿಭಟನಾಕಾರರ ಮೇಲೆ ನಡೆದಿರುವ ಪೊಲೀಸ್ ದೌರ್ಜನ್ಯವನ್ನು ಯಾವುದೇ ಕಾರಣಕ್ಕೂ ಮರೆಮಾಚಲು ಬಿಡುವುದಿಲ್ಲ ಎಂದು ಹೇಳಿದರು. ಇದೇ ಉದ್ದೇಶದಿಂದ ಆರಂಭಿಸಿರುವ ‘ಸಾಕ್ಷಿ’ ವೇದಿಕೆಯಲ್ಲಿ ಪ್ರತಿಭಟನೆಯ ವೇಳೆ ಚಿತ್ರೀಕರಿಸಿದ ಮೂಲ (Original) ಫೋಟೋಗಳು, ವಿಡಿಯೊಗಳು ಹಾಗೂ ಇತರ ಡಿಜಿಟಲ್ ಸಾಕ್ಷ್ಯಗಳನ್ನು ಸುರಕ್ಷಿತವಾಗಿ ಅಪ್‌ಲೋಡ್ ಮಾಡಬಹುದಾಗಿದೆ ಎಂದು ವಿವರಿಸಿದರು.

CJP ನೀಡಿರುವ ಮಾಹಿತಿಯ ಪ್ರಕಾರ, ಪ್ರತಿಭಟನೆಯ ವೇಳೆ ದಾಖಲಿಸಿದ ಮೂಲ ಫೋಟೋ ಅಥವಾ ವಿಡಿಯೊವನ್ನು ಸುರಕ್ಷಿತ ಸ್ಥಳಕ್ಕೆ ತಲುಪಿದ ಬಳಿಕ ‘ಸಾಕ್ಷಿ’ ವೇದಿಕೆಗೆ ಅಪ್‌ಲೋಡ್ ಮಾಡಬೇಕು. ಪ್ರತಿಯೊಂದು ಕಡತಕ್ಕೂ ವಿಶೇಷ ಕ್ರಿಪ್ಟೋಗ್ರಾಫಿಕ್ ಡಿಜಿಟಲ್ ಗುರುತು (Hash/Fingerprint) ಸೃಷ್ಟಿಸಲಾಗುತ್ತದೆ. ಇದರಿಂದ ನಂತರ ಆ ಕಡತದಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂಬುದನ್ನು ತೋರಿಸಲು ನೆರವಾಗುತ್ತದೆ ಎಂದು ಸಂಘಟನೆ ಹೇಳಿದೆ. ಅಪ್‌ಲೋಡ್ ಮಾಡಿದ ಬಳಿಕ ಬಳಕೆದಾರರಿಗೆ ವಿಶೇಷ ಪ್ರವೇಶ ಕೋಡ್ ನೀಡಲಾಗುತ್ತದೆ. ಅಗತ್ಯವಿದ್ದಾಗ ಈ ದಾಖಲೆಗಳನ್ನು ಪರಿಶೀಲಿತ ಕಾನೂನು ನೆರವು ತಂಡಗಳು ಬಳಸಿಕೊಳ್ಳಲಿವೆ ಎಂದು ತಿಳಿಸಲಾಗಿದೆ.

CJP ಪ್ರಕಾರ, ಪ್ರತಿಭಟನೆಯ ವೇಳೆ ನಡೆದಿದ್ದ ಪೊಲೀಸ್ ದೌರ್ಜನ್ಯ, ಹಲ್ಲೆ, ಅಕ್ರಮ ಬಂಧನ ಅಥವಾ ಮಾನವ ಹಕ್ಕು ಉಲ್ಲಂಘನೆಗಳ ಬಗ್ಗೆ ನ್ಯಾಯಾಲಯ ಅಥವಾ ತನಿಖಾ ಸಂಸ್ಥೆಗಳ ಮುಂದೆ ವಿಶ್ವಾಸಾರ್ಹ ದಾಖಲೆಗಳನ್ನು ಸಲ್ಲಿಸಲು ಈ ವೇದಿಕೆ ನೆರವಾಗಲಿದೆ. ಮೊಬೈಲ್ ವಶಪಡಿಸಿಕೊಳ್ಳುವುದು, ಸಂದೇಶಗಳು ಅಳಿದುಹೋಗುವುದು ಅಥವಾ ಕ್ಲೌಡ್ ಲಿಂಕ್‌ಗಳು ಅವಧಿ ಮುಗಿಯುವಂತಹ ಸಂದರ್ಭಗಳಲ್ಲಿ ಪ್ರಮುಖ ಸಾಕ್ಷ್ಯಗಳು ಕಳೆದುಹೋಗದಂತೆ ಸಂರಕ್ಷಿಸುವುದು ಇದರ ಪ್ರಮುಖ ಉದ್ದೇಶವಾಗಿದೆ.

ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದ ಹಿರಿಯ ವಕೀಲ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್, ಪ್ರತಿಭಟನಾಕಾರರಿಗೆ ಕಾನೂನು ನೆರವು ಒದಗಿಸಲು ₹1 ಕೋಟಿ ನೆರವು ಘೋಷಿಸಿದರು. ದೇಶದಾದ್ಯಂತ ವಕೀಲರು ಈ ಕಾನೂನು ಸಹಾಯ ಕಾರ್ಯದಲ್ಲಿ ಕೈಜೋಡಿಸುವಂತೆ ಅವರು ಕರೆ ನೀಡಿದರು. ವಿದ್ಯಾರ್ಥಿಗಳು ಮತ್ತು ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳ ಮಾಹಿತಿ, ಅವರಿಗೆ ಎದುರಾಗಿರುವ ಕಾನೂನು ಸಮಸ್ಯೆಗಳು ಹಾಗೂ ಅಗತ್ಯ ನೆರವನ್ನು ಸಮನ್ವಯಗೊಳಿಸುವ ವ್ಯವಸ್ಥೆಯನ್ನೂ ರೂಪಿಸಲಾಗುವುದು ಎಂದು ತಿಳಿಸಿದರು.

ಪ್ರತಿಭಟನಾಕಾರರ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ಗಳನ್ನು ಸರ್ಕಾರ ಹಿಂಪಡೆಯದಿದ್ದರೆ ಮತ್ತು ಪೊಲೀಸ್ ಕ್ರಮ ಮುಂದುವರಿದರೆ ಮತ್ತೆ ರಾಷ್ಟ್ರವ್ಯಾಪಿ ಪ್ರತಿಭಟನೆ ಆರಂಭಿಸಲಾಗುವುದು ಎಂದು CJP ಎಚ್ಚರಿಕೆ ನೀಡಿದೆ. ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿರುವ ಎಲ್ಲ ಪ್ರಕರಣಗಳನ್ನು ಹಿಂಪಡೆಯಬೇಕು ಹಾಗೂ ಪ್ರತಿಭಟನಾಕಾರರ ಮೇಲೆ ಯಾವುದೇ ಹೊಸ ಪ್ರಕರಣಗಳನ್ನು ದಾಖಲಿಸಬಾರದು ಎಂಬುದು ಸಂಘಟನೆಯ ಪ್ರಮುಖ ಬೇಡಿಕೆಯಾಗಿದೆ.

More articles

Latest article

Most read