ರೇಣುಕಾಸ್ವಾಮಿ ಕೊಲೆ ಪ್ರಕರಣ : ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಆರೋಪಿ ಪ್ರದೋಷ್‌ ಅರ್ಜಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ‘ಮಾಫಿ ಸಾಕ್ಷಿ’ (Approver)ಯಾಗಿ ಪರಿಗಣಿಸುವಂತೆ ಕೋರಿ 14ನೇ ಆರೋಪಿಯಾಗಿರುವ ಪ್ರದೋಷ್ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ (CCH) ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾನೆ.

ತಾನು ಪ್ರಕರಣದ ಕುರಿತು ತನಗೆ ತಿಳಿದಿರುವ ಸತ್ಯಾಂಶಗಳನ್ನು ನ್ಯಾಯಾಲಯದ ಮುಂದೆ ಬಹಿರಂಗಪಡಿಸಲು ಸಿದ್ಧನಿದ್ದೇನೆ. ಹೀಗಾಗಿ, ತನ್ನನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸಿ ಕಾನೂನುಬದ್ಧ ಅವಕಾಶ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿರುವುದು ತಿಳಿದುಬಂದಿದೆ.
ದರ್ಶನ್‌ ಇರುವ ಜೈಲಿನ ಕೊಠಡಿಯಲ್ಲಿ ತಾವು ಇರಲು ಸಾಧ್ಯವಿಲ್ಲ. ಪ್ರತ್ಯೇಕ ಸೆಲ್‌ಗೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದ್ದಾರೆ.

ಈ ಹಿನ್ನಲೆಯಲ್ಲಿ ಇಂದು ಪ್ರದೋಷ್ ವಿಡಿಯೋ ಕಾನ್ಸರೆನ್ಸ್ ಮೂಲಕ ನ್ಯಾಯಾಧೀಶರ ಎದುರು ಹಾಜರಾಗುವ ಸಾಧ್ಯತೆ ಇದೆ. ಈ ವೇಳೆ ನ್ಯಾಯಾಲಯ ಅರ್ಜಿಯ ಕುರಿತು ವಿಚಾರಣೆ ನಡೆಯುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಒಂದು ವೇಳೆ ನ್ಯಾಯಾಲಯ ಪ್ರದೋಷ್‌ನ ಮನವಿಯನ್ನು ಅಂಗೀಕರಿಸಿದರೆ, ಪ್ರಕರಣದ ತನಿಖೆ ಹಾಗೂ ವಿಚಾರಣೆಯ ಮೇಲೆ ಮಹತ್ವದ ಪರಿಣಾಮ ಬೀರುವ ಸಾಧ್ಯತೆ ಇದೆ. ಆರೋಪಿ ಪರ ಮತ್ತು ಅಭಿಯೋಜಕರ ವಾದ-ಪ್ರತಿವಾದಗಳ ನಡುವೆಯೇ ಈ ಬೆಳವಣಿಗೆ ಪ್ರಕರಣಕ್ಕೆ ಹೊಸ ತಿರುವು ನೀಡುವ ಸಾಧ್ಯತೆಯಿದೆ.
ಪ್ರಸ್ತುತ, ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ಮುಂದುವರಿದಿದ್ದು, ಪ್ರದೋಷ್ ಸಲ್ಲಿಸಿರುವ ಅರ್ಜಿಯ ಕುರಿತು ನ್ಯಾಯಾಲಯ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

More articles

Latest article

Most read