ಹಿಮಾಚಲ ಪ್ರದೇಶ : ಇಂದು ಬೆಳ್ಳಂಬೆಳಗ್ಗೆ ಖಾಸಗಿ ಬಸ್ಸೊಂದು ಉರುಳಿಬಿದ್ದು ಎಂಟು ಮಂದಿ ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿರುವ ಘಟನೆ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ನಡೆದಿದೆ.
ಶನಿವಾರ ಬೆಳಿಗ್ಗೆ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಕೆಳಗಿನ ರಸ್ತೆಗೆ ಬಿದ್ದ ಪರಿಣಾಮ, ಚಾಲಕ ಮತ್ತು ನಿರ್ವಾಹಕ ಸೇರಿದಂತೆ ಹಲವು ಪ್ರಯಾಣಿಕರು ಮೃತಪಟ್ಟಿದ್ದಾರೆ. ʼಬೈರಾಗಢ್-ತಿಸ್ಸಾ ರಸ್ತೆಯ ದೇವಿಕೋಠಿ ಪ್ರದೇಶದ ಚಲುಂಜ್ ಮೋರ ಹತ್ತಿರ ಈ ಅಪಘಾತ ಸಂಭವಿಸಿದೆ. ಶರ್ಮಾ ಬಸ್ ಸರ್ವಿಸ್ ಗೆ ಸೇರಿದ ಈ ಬಸ್, ಬೈರಾಗಢ್ನಿಂದ ಚಂಬಾಗೆ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
ಬೆಳಿಗ್ಗೆ ಸುಮಾರು 6:30ಕ್ಕೆ ಬೈರಾಗಢ್ನಿಂದ ಹೊರಟ ಬಸ್ ಸುಮಾರು ಮೂರು ಕಿಲೋಮೀಟರ್ ಕ್ರಮಿಸಿದ ನಂತರ ಅಪಘಾತಕ್ಕೀಡಾಗಿದೆ. ಅಪಘಾತದ ಸಮಯದಲ್ಲಿ ಬಸ್ನಲ್ಲಿ 18 ಮಂದಿ ಪ್ರಯಾಣಿಸುತ್ತಿದ್ದರು. ಅಧಿಕಾರಿಗಳ ಪ್ರಕಾರ, ವಾಹನವು ಪಲ್ಟಿಯಾಗಿ ಕೆಳಗಿನ ರಸ್ತೆಗೆ ಬಿದ್ದಿದ್ದು, ಇದರಿಂದಾಗಿ ಹಲವು ಪ್ರಯಾಣಿಕರು ಬಸ್ಸಿನ ಅವಶೇಷಗಳಡಿ ಸಿಲುಕಿಕೊಂಡಿದ್ದರು.

