ರಾಜ್ಯದಲ್ಲಿ ಈ ವಾರ ಭಾರೀ ಮಳೆ : ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಈ ವಾರ ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ರಾಜ್ಯದ  ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೊಡಗು, ಹಾಸನ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ರಾಮನಗರ, ವಿಜಯನಗರ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.  ಅದೇ ರೀತಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ ಎಂದು ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡಗಳಲ್ಲಿ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯಲಿದೆ. ಬೆಂಗಳೂರು ನಗರ ಸೇರಿದಂತೆ ಉಳಿದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆಯಾದರೆ, ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಮಳೆ ಕೊರತೆಯಾಗಿದ್ದು ಹವಾಮಾನ ಇಲಾಖೆ  ಮಳೆ ಸುರಿಯುವ ಸೂಚನೆ ನೀಡಿರುವುದರಿಂದ ಭರ್ತಿಯಾಗದ ಜಲಾಶಯಗಳಲ್ಲಿ  ಮತ್ತಷ್ಟು ನೀರು ಸಂಗ್ರಹವಾಗಬಹುದು ಎಂಬ ಆಶಾಭಾವನೆ ಮೂಡಿದೆ.

ಕಾವೇರಿ ಜಲಾನಯನ ಪ್ರದೇಶದ ಕಬಿನಿ ಹಾಗೂ ಹಾರಂಗಿ ಜಲಾಶಯಗಳು ಭರ್ತಿಯಾಗಿವೆ. ಆದರೆ ಕೆಆರ್‌ಎಸ್‌ ಹಾಗೂ ಹೇಮಾವತಿ ಜಲಾಶಯ ಭರ್ತಿಯಾಗಿಲ್ಲ. ಕಾವೇರಿ ಜಲಾಶಯ ಭರ್ತಿಯಾದರೆ ಬೆಂಗಳೂರಿಗೆ ಕುಡಿಯುವ ನೀರಿನ ಪೂರೈಕೆಗೆ ಯಾವುದೇ ಸಮಸ್ಯೆಯಾಗುವುದಿಲ್ಲ. ಇಲ್ಲದಿದ್ದರೆ ಬರುವ ಬೇಸಿಗೆ ಭೀಕರವಾಗಲಿದೆ.

More articles

Latest article

Most read