ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ನಡೆಸಿ ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆಗೆ ಇಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಬೆಂಬಲ ನೀಡಲಿದ್ದಾರೆ.
ಪಾದಯಾತ್ರೆಯು ಇಂದು ಎರಡನೇ ದಿನಕ್ಕೆ ಕಾಲಿಟ್ಟಿದ್ದು, ನಿಖಿಲ್ ಕುಮಾರಸ್ವಾಮಿ ಜೊತೆಗೆ ಜೆಡಿಎಸ್ ಕಾರ್ಯಕರ್ತರು ಪಾದಯಾತ್ರೆಯು ಇಂದು ಬೆಳಿಗ್ಗೆ 11 ಗಂಟೆಗೆ ಬಿಡದಿಯಿಂದ ಮೈಸೂರು ರಸ್ತೆ ನೈಸ್ ಜಂಕ್ಷನ್ ವರೆಗೆ ಇಂದು 16 ಕಿಲೋಮೀಟರ್ ನಡೆಯಲಿದ್ದಾರೆ.
ನಿನ್ನೆ, ಪಾದಯಾತ್ರೆಯ ಮೊದಲ ದಿನ ಏಳು ಕಿಲೋಮೀಟರ್ ಕ್ರಮಿಸಲಾಗಿತ್ತು. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಆರ್. ಅಶೋಕ್ ನಿನ್ನೆ ಪಾದಯಾತ್ರೆಗೆ ಚಾಲನೆ ನೀಡಿದ್ದರು.

