ಬೆಂಗಳೂರು : ಸ್ಟಾರ್ ಹೋಟೆಲ್ಗಳ ಅಡುಗೆ ಮನೆ ಮೇಲಿನ ದಾಳಿಯನ್ನು ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಅಧಿಕಾರಿಗಳು ಮುಂದುವರೆಸಿದ್ದಾರೆ.
ಕಳೆದ ರಾತ್ರಿ ಯುಬಿ ಸಿಟಿಯ ಐದು ಹೋಟೆಲ್ಗಳ ಮೇಲೆ ದಾಳಿ ನಡೆಸಿ 45 ಕೆಜಿ ಕೊಳೆತ ಮಾಂಸ, 15 ಲೀಟರ್ ಕರಿದ ಎಣ್ಣೆ ಜಪ್ತಿ ಮಾಡಿದ್ದು, ಅಡುಗೆ ಕೋಣೆಯನ್ನು ಸೀಸ್ ಮಾಡಿದ್ದಾರೆ.
ಸುಮಾರು 15 ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಸ್ಕೈ ಹೋಟೆಲ್, ರಾಯಲ್ ಚೈನ್, ಮದ್ರಾಸ್ ಕಿಚನ್, ಟೆಸ್ಕಾನ್ ಹೋಟೆಲ್ ಹಾಗೂ ಸೆಂಚೆಜ್ ಹೋಟೆಲ್ಗಳ ಅಡುಗೆಮನೆಗಳನ್ನು ಪರಿಶೀಲನೆ ನಡೆಸಿದ್ದಾರೆ. 45 ಕೆ.ಜಿ. ಕೊಳೆತ ಕೋಳಿ ಮತ್ತು ದನದ ಮಾಂಸ, 15 ಲೀಟರ್ ಬಳಸಿದ ಅಡುಗೆ ಎಣ್ಣೆ ಹಾಗೂ 6 ಕೆ.ಜಿ. ವೆಜಿಟೇಬಲ್ ಕಟ್ಲೆಟ್ ಸೇರಿದಂತೆ ಒಟ್ಟು 51 ಕೆ.ಜಿ. ಆಹಾರ ಪದಾರ್ಥಗಳನ್ನು ಸ್ಕೈ ಹೋಟೆಲ್ನಲ್ಲಿ ವಶಕ್ಕೆ ಪಡೆದರೆ, ರಾಯಲ್ ಚೈನ್ ಹೋಟೆಲ್ನಲ್ಲೂ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, 50 ಕೆ.ಜಿ. ಬಾತುಕೋಳಿ ಮಾಂಸ ಹಾಗೂ 5 ಕೆ.ಜಿ. ಮೀನು ಸೇರಿದಂತೆ ಒಟ್ಟು 55 ಕೆ.ಜಿ. ಮಾಂಸವನ್ನು ವಶಕ್ಕೆ ಪಡೆದಿದ್ದಾರೆ.

