ನ್ಯಾಯಾಲಯದ ಆದೇಶ ಉಲ್ಲಂಘನೆ : ಸಚಿವ ಬಿ.ನಾಗೇಂದ್ರ ದೆಹಲಿಗೆ ಪ್ರಯಾಣ ಆರೋಪದಡಿ ಇಡಿ ಪರಿಶೀಲನೆ

ಬೆಂಗಳೂರು: ವಿಶೇಷ ನ್ಯಾಯಾಲಯದಿಂದ ಪೂರ್ವಾನುಮತಿ ಪಡೆಯದೆ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣ ಪ್ರಕರಣದಲ್ಲಿ ಜಾಮೀನು ಪಡೆದಿರುವ ಸಚಿವ ಬಿ. ನಾಗೇಂದ್ರ ದೆಹಲಿಗೆ ಪ್ರಯಾಣಿಸಿದ್ದಾರೆ ಎಂದು ತಿಳಿದುಬಂದಿದೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣ ಪ್ರಕರಣದಲ್ಲಿ ಜಾಮೀನು ಪಡೆಯುವಾಗ ವಿಧಿಸಲಾಗಿದ್ದ ಷರತ್ತುಗಳನ್ನು ಉಲ್ಲಂಘಿಸಿ, ಜನಪ್ರತಿನಿಧಿಗಳ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯದಿಂದ ಪೂರ್ವಾನುಮತಿ ಪಡೆಯದೆ ನವದೆಹಲಿಗೆ ಪ್ರಯಾಣಿಸಿದ್ದಾರೆ ಎಂಬ ಆರೋಪದ ಬಗ್ಗೆ ಜಾರಿ ನಿರ್ದೇಶನಾಲಯ ಪರಿಶೀಲನೆ ನಡೆಸುತ್ತಿದೆ.

ಜುಲೈ 15 ರಂದು ಸಂಜೆ ಸುಮಾರು 6.15 ಕ್ಕೆ ಹೊರಟ ಇಂಡಿಗೋ ವಿಮಾನದಲ್ಲಿ (6E 76034) ಹಾಗೂ ಜುಲೈ 26 ರಂದು ಮಧ್ಯಾಹ್ನ 1.55 ಕ್ಕೆ ಇಂಡಿಗೋ ವಿಮಾನದಲ್ಲಿ (ಸಂಖ್ಯೆ 67840) ಅವರು ನವದೆಹಲಿಗೆ ಪ್ರಯಾಣಿಸಿದ್ದರು ಎಂಬ ಮಾಹಿತಿಯೂ ಇಡಿಗೆ ಲಭ್ಯವಾಗಿದೆ.

ಈ ಬಗ್ಕಗೆ ಮಾಜಿ ಸಚಿವ ಸುನೀಲ್‌ ಕುಮಾರ್‌, ಸದನದಲ್ಲಿ ಹಣ ವರ್ಗಾವಣೆ ಬಗ್ಗೆ ಸಿಎಂ ಒಪ್ಪಿಕೊಂಡಿದ್ದಾರೆ. ಸಂಪುಟ ಸಚಿವರನ್ನು ಗಮನಿಸಿದರೆ ಸ್ಪಷ್ಟವಾಗಿ ಗೊತ್ತಾಗುತ್ತದೆ ಮ್ಯಾನೇಜ್‌ಮೆಂಟ್‌ನಡಿ ಸ್ಥಾನ ಪಡೆದವರೇ ಹೆಚ್ಚು. ನಾಗೇಂದ್ರ ಅವರು ರಾಜ್ಯ ಬಿಟ್ಟು ತೆರಳುವ ಹಾಗಿಲ್ಲ ಎಂದು ನ್ಯಾಯಾಲಯ ಆದೇಶಿಸಿದ್ದರು ದೆಹಲಿಗೆ ತೆರಳಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ನಾಗೇಂದ್ರ ಅವರು ಎರಡು ಬಾರಿ ದೆಹಲಿಗೆ ಭೇಟಿ ನೀಡಿದ್ದರು ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದು, ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಮತ್ತು ಮಾಜಿ ಸಚಿವ ಬಿ. ಶ್ರೀರಾಮುಲು ಕೂಡ ಇದೇ ರೀತಿಯ ಬೇಡಿಕೆಗಳನ್ನು ಮಂಡಿಸಿದ್ದಾರೆ.

More articles

Latest article

Most read