ಕರ್ನಾಟಕ ಬಂದ್‌ ಹಿನ್ನಲೆ : ವಾಟಾಳ್‌ ನಾಗರಾಜ್‌ರನ್ನು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು :  ಕರ್ನಾಟಕ ಬಂದ್‌ಗೆ ಕರೆ ನೀಡಿ, ಬಾಯಿಗೆ ಪ್ಲಾಸ್ಟರ್‌ ಅಂಟಿಸಿಕೊಂಡಿದ್ದ  ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಡಾಲರ್ಸ್‌ ಕಾಲೋನಿಯ ಅವರ ನಿವಾಸದಲ್ಲಿ ಪೊಲೀಸರು ವಶಕ್ಕೆ ಪಡೆದರು.

. “ನಾನು ಮನೆಯಿಂದ ಆಚೆಯೇ ಬರುವುದಿಲ್ಲ, ವಶಕ್ಕೆ ಪಡೆಯುವ ಕಾರಣಕ್ಕಾಗಿ ಹೊರಬರಲ್ಲ” ಎಂದು  ವಾಟಾಳ್ ನಾಗರಾಜ್ ಅವರು ತಮ್ಮ ನಿವಾಸದ  ಒಳಗಡೆಯೇ ಕುಳಿತು ಪಟ್ಟು ಹಿಡಿದರು. ಆದರೂ, ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಅವರನ್ನು ಕರೆದುಕೊಂಡು ಹೋದರು.

ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ವಾಟಾಳ್ ನಾಗರಾಜ್ ಅವರ ಡಾಲರ್ಸ್‌ ಕಾಲೋನಿ ನಿವಾಸದ ಮುಂಭಾಗದಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸ್ ಸಿಬ್ಬಂದಿಯನ್ನು ಇಂದು ಬೆಳಗ್ಗೆಯಿಂದಲೇ ನಿಯೋಜಿಸಲಾಗಿತ್ತು. ಟೌನ್ ಹಾಲ್‌ಗೆ ತೆರಳಿ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಲು ಅವರು ಹೊರಡುತ್ತಿದ್ದಂತೆಯೇ ವಶಕ್ಕೆ ಪಡೆಯಲು ಪೊಲೀಸರು ನಿರ್ಧರಿಸಿದ್ದರು. 

More articles

Latest article

Most read