ರಾಜ್ಯಾದ್ಯಂತ ಬಂದ್‌ಗೆ ನೀರಸ ಪ್ರತಿಕ್ರಿಯೆ, ಎಂದಿನಂತೆ ಬಸ್‌ ಸಂಚಾರ

ಬೆಂಗಳೂರು : ತಮಿಳು ನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶ ಖಂಡಿಸಿ ವಾಟಾಳ್‌ ನಾಗರಾಜ್‌ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿವೆ.
ಕನ್ನಡ ಸಂಘಟನೆಗಳು ಹಾಗೂ ಸಾರಿಗೆ ಒಕ್ಕೂಟಗಳು ಬಂದ್‌ಗೆ ಬೆಂಬಲ ನೀಡದಿರುವುದರಿಂದ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಸ್‌ಗಳ ಸಂಚಾರ, ಆಟೋ, ಕ್ಯಾಬ್‌ ಸಂಚಾರ ಎಂದಿನಂತೆ ಸಾಗುತ್ತಿದೆ. ಶಾಲಾ- ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ.

ಬೆಂಗಳೂರಿನಲ್ಲಿ ಯಾವುದೇ ಬಂದ್ ವಾತಾವರಣ ಇಲ್ಲದ ಹಿನ್ನೆಲೆಯಲ್ಲಿ ತಮಿಳುನಾಡು ಬಸ್‌ಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಸ್ಯಾಟಲೈಟ್ ಬಸ್ ನಿಲ್ದಾಣದಿಂದ ತಮಿಳುನಾಡಿನ ವಿವಿಧ ಭಾಗಗಳತ್ತ ಬಸ್‌ಗಳು ಎಂದಿನಂತೆ ಹೊರಡುತ್ತಿವೆ.

ಗಡಿಯಲ್ಲಿ ಪ್ರತಿಭಟನೆ: ಆನೇಕಲ್‌ ತಾಲೂಕಿನ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ 47ರ ತಮಿಳುನಾಡು-ಕರ್ನಾಟಕ ಗಡಿ ಅತ್ತಿಬೆಲೆಯಲ್ಲಿ ಇಂದು ಬೆಳಗ್ಗೆ ಕನ್ನಡ ಜಾಗೃತಿ ವೇದಿಕೆ ಪ್ರತಿಭಟನೆ ನಡೆಸಿತು. ತಮಿಳುನಾಡಿಗೆ ನೀರು ಹರಿಸಿರುವುದನ್ನು ಖಂಡಿಸಿ ಪ್ರತಿಭಟನಾಕಾರರು ಹೆದ್ದಾರಿ ತಡೆಗೆ ಮುಂದಾಗಿದ್ದರು. ಆದರೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು, ಅತ್ತಿಬೆಲೆ ಪೊಲೀಸ್ ಠಾಣೆಗೆ ಕರೆದೊಯ್ದು ಬಳಿಕ ಬಿಡುಗಡೆ ಮಾಡಿದ್ದಾರೆ.

ಮಂಡ್ಯದಲ್ಲಿ ಪ್ರತಿಭಟನೆ : ರಾಜ್ಯದ ಕುಡಿಯುವ ನೀರು ಮತ್ತು ಕೃಷಿ ಅಗತ್ಯಗಳನ್ನು ಉಲ್ಲೇಖಿಸಿ, ಇನ್ನು ಹೆಚ್ಚಿನ ನೀರನ್ನು ಬಿಡುಗಡೆ ಮಾಡದಂತೆ ಪ್ರತಿಭಟನಾಕಾರರು ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕಾವೇರಿ ಹೋರಾಟದ ಕೇಂದ್ರಬಿಂದುವಾಗಿರುವ ಮಂಡ್ಯದಲ್ಲಿ, ರೈತರು ಮತ್ತು ಕನ್ನಡ ಪರ ಸಂಘಟನೆಗಳು ಸಂಜಯ ವೃತ್ತ ಹಾಗೂ ಇತರ ಸ್ಥಳಗಳಲ್ಲಿ ಪ್ರತಿಭಟನೆ ನಡೆಸಿದವು.

ಪ್ರತಿಭಟನಾಕಾರರು ಖಾಲಿ ಮಡಿಕೆಗಳು ಮತ್ತು ಹುರುಳಿಯನ್ನು ಹಿಡಿದುಕೊಂಡು “ನಮ್ಮ ನೀರು, ನಮ್ಮ ಹಕ್ಕು” ಎಂಬ ಘೋಷಣೆಗಳನ್ನು ಕೂಗಿದರು ಹಾಗೂ ಬೆಂಗಳೂರು-ಮೈಸೂರು ಹಳೆಯ ಹೆದ್ದಾರಿಯನ್ನು ತಡೆದರು.

More articles

Latest article

Most read