ವೀರ ಸಂಗೊಳ್ಳಿರಾಯಣ್ಣ ಅವರ ಜನ್ಮದಿನದ ಅಂಗವಾಗಿ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಸ್ವಾತಂತ್ರ್ಯ ಹೋರಾಟದ ಅಪ್ರತಿಮ ವೀರ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜನ್ಮದಿನದ ಅಂಗವಾಗಿ ಮೈಸೂರಿನ ಕುರುಬಾರಹಳ್ಳಿ ವೃತ್ತದಲ್ಲಿರುವ ಅವರ ಪುತ್ಥಳಿಗೆ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಪುಷ್ಪಾರ್ಚನೆ ನೆರವೇರಿಸಿ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಸಂಗೊಳ್ಳಿ ರಾಯಣ್ಣ ಅವರ ಶೌರ್ಯ, ತ್ಯಾಗ ಮತ್ತು ದೇಶಭಕ್ತಿ ಕನ್ನಡ ನಾಡಿನ ಹೆಮ್ಮೆಯ ಪ್ರತೀಕವಾಗಿದೆ. ಬ್ರಿಟಿಷರ ದಮನಕಾರಿ ಆಡಳಿತದ ವಿರುದ್ಧ ಧೈರ್ಯದಿಂದ ಸೆಣಸಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಅಪ್ರತಿಮ ಹೋರಾಟ ನಡೆಸಿದರು. ಅವರ ಸಾಹಸ, ಹೋರಾಟದ ಛಲ ಹಾಗೂ ದೇಶಪ್ರೇಮ ಪ್ರತಿಯೊಬ್ಬ ಭಾರತೀಯನಲ್ಲೂ ರಾಷ್ಟ್ರಭಕ್ತಿಯ ಕಿಚ್ಚನ್ನು ಹೊತ್ತಿಸುವಂತಹದ್ದು ಎಂದರು.

ಸ್ವಾತಂತ್ರ್ಯಕ್ಕಾಗಿ ರಾಯಣ್ಣ ಅವರು ಮಾಡಿದ ತ್ಯಾಗ ಮತ್ತು ಬಲಿದಾನ ಇತಿಹಾಸದಲ್ಲಿ ಅಜರಾಮರವಾಗಿದ್ದು, ಅವರ ಅಪ್ರತಿಮ ಹೋರಾಟ ಮತ್ತು ದೇಶಪ್ರೇಮ ಮುಂದಿನ ಪೀಳಿಗೆಗಳಿಗೂ ಸ್ಫೂರ್ತಿಯ ಸೆಲೆಯಾಗಿದೆ. ನಾಡಿನ ಏಕತೆ, ಸ್ವಾಭಿಮಾನ ಮತ್ತು ದೇಶದ ಸಮಗ್ರತೆಗಾಗಿ ಅವರು ತೋರಿದ ಬದ್ಧತೆ ನಮಗೆ ಸದಾ ಮಾರ್ಗದರ್ಶನ ನೀಡುತ್ತದೆ. ಅವರ ಆದರ್ಶಗಳನ್ನು ಸ್ಮರಿಸುವುದರ ಜೊತೆಗೆ, ದೇಶದ ಪ್ರಗತಿ, ಶಾಂತಿ, ಏಕತೆ ಮತ್ತು ಸಮಗ್ರ ಅಭಿವೃದ್ಧಿಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಕೆ. ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಡಾ. ತಿಮ್ಮಯ್ಯ, ಮಾಜಿ ಶಾಸಕರಾದ ಶ್ರೀ ಎಂ.ಕೆ. ಸೋಮಶೇಖರ್, ಕೆಪಿಸಿಸಿ ವಕ್ತಾರರಾದ ಶ್ರೀ ಎಂ. ಲಕ್ಷ್ಮಣ್, ನಗರ ಪಾಲಿಕೆ ಮಾಜಿ ಸದಸ್ಯರಾದ ಶ್ರೀ ಎಂ. ಶಿವಣ್ಣ, ಕಾಂಗ್ರೆಸ್ ಮುಖಂಡರಾದ ಶ್ರೀ ಹೆಚ್.ವಿ. ರಾಜೀವ್, ಕುರುಬಾರಹಳ್ಳಿಯ ಹಿರಿಯ ಮುಖಂಡರಾದ ಕ್ಯಾಂಟೀನ್ ನಾಗಣ್ಣ ಸೇರಿದಂತೆ ಹಲವು ಮುಖಂಡರು, ಯುವ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

More articles

Latest article

Most read