ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಅವರು ಭಾನುವಾರ ಬೆಳಿಗ್ಗೆ ಬಿರ್ಭೂಮ್ ಜಿಲ್ಲೆಯ ರಾಂಪುರ್‌ಹಟ್‌ನಲ್ಲಿರುವ ತೃಣಮೂಲ ಕಾಂಗ್ರೆಸ್ (TMC) ಕಚೇರಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಆಶಿಶ್ ಬ್ಯಾನರ್ಜಿ ಅವರ ನಿವಾಸದ ಸಮೀಪವೇ ಇರುವ ತೃಣಮೂಲ ಕಾಂಗ್ರೆಸ್ ಕಛೇರಿಯಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಸ್ಥಳದಲ್ಲಿ “ಡೆತ್ ನೋಟ್” ಸಹ ಪತ್ತೆಯಾಗಿದೆ.
ರಾಂಪುರಹಟ್‌ನಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಆಶಿಶ್ ಬ್ಯಾನರ್ಜಿ,
ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಉಪಸಭಾಪತಿಯಾಗಿ ಸೇವೆ ಸಲ್ಲಿಸಿದ್ದರು. .

