ಹನೂರು ಗುಂಡಿನ ದಾಳಿ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು : ಹನೂರಿನ ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿ ಕುರಿತು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ.
ಕಲಾಪದಲ್ಲಿ ಪ್ರತಿಪಕ್ಷಗಳ ಒತ್ತಾಯದ ಮೇರೆಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿ, ಗುಂಡಿನ ದಾಳಿಯಲ್ಲಿ ಮೃತಪಟ್ಟವರು ಜಮೀನಿಗೆ ಹೋಗಿರಲಿಲ್ಲ ಬದಲಾಗಿ ಕಾಡಿನೊಳಗೆ ಇದ್ದರು. ಅಕ್ರಮವಾಗಿ 5 ರಿಂದ 8 ಕಿಲೋಮೀಟರ್ ಪ್ರವೇಶಿಸಿದ್ದರು. ಹಸು ಕರೆದುಕೊಂಡು ಬರಲು ಹೋದವರ ಬಳಿ ಅಡುಗೆ ಸಾಮಾನು ಏಕಿತ್ತು ಎಂದು ಪ್ರಶ್ನಿಸಿದ್ದಾರೆ.

ಅರಣ್ಯ ಸಿಬ್ಬಂದಿ ಉದ್ದೇಶಪೂರ್ವಕವಾಗಿ ಶೂಟೌಟ್ ಮಾಡಿಲ್ಲ, ಆತ್ಮರಕ್ಷಣೆಗಾಗಿ ಹಾಗೂ ಕತ್ತಲಿನಲ್ಲಿ ಈ ಘಟನೆ ನಡೆದಿದೆ.  ಸಿಬ್ಬಂದಿ ವಿರುದ್ಧ ತಪ್ಪು ಕಂಡುಬಂದರೆ ಖಂಡಿತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. 

ಘಟನೆಯ ವಿವರ : ಹನೂರು ವ್ಯಾಪ್ತಿಯ ಶಾಗ್ಯ ಬಳಿ ಕಳ್ಳಬೇಟೆಗಾರರು ಅಕ್ರಮವಾಗಿ ಅರಣ್ಯ ಪ್ರವೇಶಿಸಿರುವ ಕುರಿತು ಹಿಂದಿನ ದಿನ ರಾತ್ರಿ 8 ಗಂಟೆಗೆ ಅರಣ್ಯ ಇಲಾಖೆಗೆ ಮಾಹಿತಿ ಲಭಿಸಿತ್ತು. ಮಾಹಿತಿ ಆಧರಿಸಿ 10 ಸಿಬ್ಬಂದಿಯನ್ನೊಳಗೊಂಡ ಎರಡು ಪ್ರತ್ಯೇಕ ತಂಡಗಳನ್ನು ರಚಿಸಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಮುಂಜಾನೆ 5 ಗಂಟೆಯ ಸುಮಾರಿಗೆ ಅರಣ್ಯದ ಬಂಡೆಯೊಂದರ ಬಳಿ ಬ್ಯಾಟರಿ ಬೆಳಕು ಕಂಡುಬಂದಿದೆ. ಸಿಬ್ಬಂದಿ ಅವರನ್ನು ಶರಣಾಗುವಂತೆ ಮನವಿ ಮಾಡಿದ್ದಾರೆ.

ಈ ವೇಳೆ ಬೇಟೆಗಾರರ ಕಡೆಯಿಂದ ಸಿಬ್ಬಂದಿಯತ್ತ ಗುಂಡಿನ ದಾಳಿ ನಡೆದಿದ್ದು, ಆತ್ಮರಕ್ಷಣೆಗಾಗಿ ಅರಣ್ಯ ಸಿಬ್ಬಂದಿ ಮರುದಾಳಿ ನಡೆಸಿದ್ದಾರೆ. ಘಟನೆ ನಡೆದಾಗ ಎತ್ತರದ ಪ್ರದೇಶದಲ್ಲಿದ್ದ ಬೇಟೆಗಾರರು ಕತ್ತಲಿನಿಂದಾಗಿ ಅಸ್ಪಷ್ಟವಾಗಿ ಗೋಚರಿಸುತ್ತಿದ್ದರು. ಮರುದಾಳಿ ವೇಳೆ ಸಿಬ್ಬಂದಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಗುಂಡಿನ ದಾಳಿ ನಿಂತ ಬಳಿಕ ಸಿಬ್ಬಂದಿ ಸ್ಥಳಕ್ಕೆ ತೆರಳಿದಾಗ ಮೂವರಿಗೆ ಗುಂಡು ತಗುಲಿರುವುದು ಕಂಡುಬಂದಿದೆ. ಆಸ್ಪತ್ರೆಗೆ ಸ್ಥಳಾಂತರಿಸಿದಾಗ ಅವರು ಮೃತಪಟ್ಟಿರುವುದನ್ನು ವೈದ್ಯರು ಖಚಿತಪಡಿಸಿದ್ದು, ಮೃತದೇಹಗಳನ್ನು ಮೈಸೂರಿಗೆ ರವಾನಿಸಲಾಯಿತು.

ಘಟನಾ ಸ್ಥಳದಲ್ಲಿದ್ದ ಬೇಟೆಗಾರರಿಂದ 2 ನಾಡಬಂದೂಕುಗಳು, ಕಾಡತೂಸುಗಳು, ಪಟಾಕಿ, ಮದ್ದಿನ ಬಾಕ್ಸ್, ಮೊಬೈಲ್‌ಗಳು, ಚಾರ್ಜರ್ ಬ್ಯಾಟರಿ ಹಾಗೂ ದಿನಸಿ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಅವರ ಬ್ಯಾಗ್‌ನಲ್ಲಿ ಸುಮಾರು 20 ರಿಂದ 35 ಕೆಜಿಯಷ್ಟು ಜಿಂಕೆ ಮಾಂಸ ಪತ್ತೆಯಾಗಿದೆ. ಇವರು ಕಾಡಿನಲ್ಲಿ 5 ರಿಂದ 8 ಕಿಲೋಮೀಟರ್ ಅಕ್ರಮವಾಗಿ ಸಂಚರಿಸಿದ್ದರು ಎಂದು ಸಚಿವರು ತಿಳಿಸಿದ್ದಾರೆ.

More articles

Latest article

Most read