ಮಾಜಿ ಸಚಿವ ಬಿ.ಸಿ.ನಾಗೇಶ್‌ ನಿಧನ, ನಾಳೆ ಅಂತ್ಯಕ್ರಿಯೆ

ಬೆಂಗಳೂರು : ಮಾಜಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ (67) ಅವರು ಮಂಗಳವಾರ ಬೆಂಗಳೂರಿನ ತಮ್ಮ ಮಗಳ ಮನೆಯಲ್ಲಿ ನಿಧನರಾಗಿದ್ದಾರೆ. ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಆಗಲಿದ್ದಾರೆ. 

ಇಂದು  ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಾರ್ವಜನಿಕರು ಹಾಗೂ ಪಕ್ಷದ ಮುಖಂಡರಿಗೆ ಅಂತಿಮ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದೆ. ಬಳಿಕ  ಹುಟ್ಟೂರು ತುಮಕೂರು ಜಿಲ್ಲೆಯ ತಿಪಟೂರು ನಗರಕ್ಕೆ ಕೊಂಡೊಯ್ಯಲಾಗುತ್ತದೆ.
ನಾಳೆ  ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿವೆ. ಕಳೆದೊಂದು ವರ್ಷದಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಇವರು, ಎರಡು ಬಾರಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎಂದು ತಿಳಿದು ಬಂದಿದೆ.

1959ರ ಜುಲೈ 1ರಂದು ಚಿಕ್ಕಮಗಳೂರಿನಲ್ಲಿ ಜನಿಸಿದ ಇವರ ಪೂರ್ಣ ಹೆಸರು ಬೆಳ್ಳೂರು ಚಂದ್ರಶೇಖರಯ್ಯ ನಾಗೇಶ್. ಪ್ರಸಿದ್ಧ ಬೆಳ್ಳೂರು ಮೈಲಾರಯ್ಯನವರ ವಂಶಸ್ಥರಾಗಿದ್ದು, ಮಾಜಿ ಶಾಸಕ ಹಾಗೂ ಶ್ರೀಸತ್ಯ ಗಣಪತಿ ಸೇವಾ ಸಂಘದ ಧರ್ಮದರ್ಶಿಗಳಾಗಿದ್ದ ದಿವಂಗತ ಬಿ.ಎಸ್.ಚಂದ್ರಶೇಖರಯ್ಯನವರ ಮೂರನೇ ಪುತ್ರ. ಬೆಂಗಳೂರಿನ ಪ್ರತಿಷ್ಠಿತ ಬಿ.ಎಂ.ಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದರು. 1984ರಲ್ಲಿ ಬಿಜೆಪಿ ಸೇರಿ ರಾಜಕೀಯದಲ್ಲಿ ಸಕ್ರಿಯರಾಗಿದ್ದರು.
2008ರಲ್ಲಿ ಮೊದಲ ಬಾರಿಗೆ ತಿಪಟೂರು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. ನಂತರ 2018ರಲ್ಲಿ ಪುನಃ ಗೆದ್ದು, 2021ರಿಂದ 2023ರ ವರೆಗೆ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ರಾಜ್ಯ ಸಚಿವ ಸಂಪುಟದಲ್ಲಿ ಪ್ರಾಥಮಿಕ ಶಿಕ್ಷಣ, ಸಾಕ್ಷರತೆ ಮತ್ತು ಸಕಾಲ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಈ ಅವಧಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ, ಶಾಲಾ ಸಮವಸ್ತ್ರ ನಿಯಮ, ಶಿಕ್ಷಣದಲ್ಲಿ ಮೌಲ್ಯವರ್ಧನೆ ಮುಂತಾದ ವಿಚಾರಗಳಲ್ಲಿ ಮಹತ್ವದ ಸುಧಾರಣೆ ತಂದಿದ್ದರು.

More articles

Latest article

Most read