ಕೋಲ್ಕತ್ತಾ: ಇಲ್ಲಿನ ಮಿರ್ಜಾ ಗಾಲಿಬ್ ಬೀದಿಯಲ್ಲಿರುವ ಹೋಟೆಲ್ ಒಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮಗು ಮತ್ತು ಮಹಿಳೆಯೊಬ್ಬರು ಸೇರಿದಂತೆ ಕನಿಷ್ಠ ಒಂಬತ್ತು ಮಂದಿ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಬೆಳಗಿನ ಜಾವ 2 ಗಂಟೆ ಸುಮಾರಿಗೆ ಕಾಣಿಸಿಕೊಂಡ ಬೆಂಕಿಯನ್ನು ನಂದಿಸಲು ಐದು ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿತ್ತು. ರಕ್ಷಣಾ ಕಾರ್ಯಾಚರಣೆಗಾಗಿ ಪೊಲೀಸ್ ಮತ್ತು ವಿಪತ್ತು ನಿರ್ವಹಣಾ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
“ದಟ್ಟವಾದ ಹೊಗೆಯಿಂದಾಗಿ ಅಗ್ನಿಶಾಮಕ ಸಿಬ್ಬಂದಿಗೆ ಮೆಟ್ಟಿಲುಗಳ ಮೂಲಕ ಮೇಲಿನ ಮಹಡಿಗಳಿಗೆ ತೆರಳುವುದು ಕಷ್ಟಕರವಾಯಿತು. ಒಂಬತ್ತು ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ,” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
“ಸಿಲುಕಿರುವವರನ್ನು ರಕ್ಷಿಸುವುದು ಮತ್ತು ಬೆಂಕಿ ಕಾಣಿಸಿಕೊಳ್ಳಲು ಕಾರಣವನ್ನು ಪತ್ತೆಹಚ್ಚುವುದು ನಮ್ಮ ಆದ್ಯತೆಯಾಗಿದೆ. ಬೆಂಕಿಯನ್ನು ನಂದಿಸಲಾಗಿದೆ ಮತ್ತು ಸದ್ಯ ‘ಕೂಲಿಂಗ್’ (ಬಿಸಿಯನ್ನು ತಣಿಸುವ) ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದರು.
ಪಶ್ಚಿಮ ಬಂಗಾಳದಲ್ಲಿ ಕೋಲ್ಕತ್ತಾದಲ್ಲಿ ಹೋಟೆಲ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ ಕೇವಲ ಎರಡು ದಿನಗಳ ನಂತರ ಈ ಘಟನೆ ನಡೆದಿದೆ. ಸೋಮವಾರವಷ್ಟೇ ಬಿರ್ಭೂಮ್ ಜಿಲ್ಲೆಯ ತಾರಾಪೀಠದಲ್ಲಿರುವ ಹೋಟೆಲ್ ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ (ಶಾರ್ಟ್ ಸರ್ಕ್ಯೂಟ್ ಕಾರಣದಿಂದಾಗಿ ಎಂದು ಶಂಕಿಸಲಾಗಿದೆ) ಎಂಟು ಮಂದಿ ಮೃತಪಟ್ಟಿದ್ದರು ಮತ್ತು ಹಲವರು ಗಾಯಗೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾರಾಪೀಠದ ಹೋಟೆಲ್ ನಿರ್ವಾಹಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆಯ ಭಾಗವಾಗಿ ವಿಚಾರಣೆ ನಡೆಸುತ್ತಿದ್ದಾರೆ. ಪಶ್ಚಿಮ ಬಂಗಾಳ ಅಗ್ನಿಶಾಮಕ ಇಲಾಖೆಯ ಪ್ರಧಾನ ಕಚೇರಿಯು ಈ ಹೋಟೆಲ್ ಕಟ್ಟಡದ ಸಮೀಪದಲ್ಲೇ ಇದೆ.
ಕೋಲ್ಕತ್ತಾದಲ್ಲಿ ಹೋಟೆಲ್ ಗೆ ಬೆಂಕಿ, ಮಗು ಸೇರಿ 9 ಮಂದಿ ದುರ್ಮರಣ