ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಎರಡನೇ ಚರಣ ಹಾಡಲು ಸಿಡಬ್ಲ್ಯೂಸಿ ನಿರ್ಧಾರ

ನವದೆಹಲಿ, ಆ.19: ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಆರಂಭಿಸಿರುವ ವಿದ್ಯಾರ್ಥಿಗಳ ದನಿ (ಛಾತ್ರೋನ್ ಕಿ ಗೂಂಜ್) ಅಭಿಯಾನವನ್ನು ದೇಶಾದ್ಯಂತ 800 ನಗರಗಳಿಗೆ ವಿಸ್ತರಿಸಲು ಮತ್ತು ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ಒಂದೇ ಮಾತರಂ ಗೀತೆಯ ಎರಡು ಚರಣಗಳನ್ನು ಮಾತ್ರ ಹಾಡಲು ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ (ಸಿಡಬ್ಲ್ಯೂಸಿ) ನಿರ್ಧರಿಸಿದೆ.

ನವದೆಹಲಿಯ ಎಐಸಿಸಿ ಮುಖ್ಯ ಕಚೇರಿಯಲ್ಲಿ ಬುಧವಾರ ನಡೆದ ಸಿಡಬ್ಲ್ಯೂಸಿ ಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳ ದನಿ ಅಭಿಯಾನಕ್ಕೆ ಯುವಜನತೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಇದನ್ನು ದೇಶದಾದ್ಯಂತ ವಿಸ್ತರಿಸಬೇಕು. ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಆಯ್ದ ಕಾರ್ಯಕ್ರಮಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆಯಾ ರಾಜ್ಯಗಳ ನಾಯಕರು ತಮ್ಮ ರಾಜ್ಯಗಳು ಮತ್ತು ಕ್ಷೇತ್ರಗಳಲ್ಲಿ ಅಭಿಯಾನದ ಉಸ್ತುವಾರಿ ವಹಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಇದೇ ವೇಳೆ ಕಾಂಗ್ರೆಸ್ ಅಧಿಕಾರದಲ್ಲಿರುವ ಕರ್ನಾಟಕ, ಕೇರಳ, ತೆಲಂಗಾಣ ಮತ್ತು ಹಿಮಾಚಲ ಪ್ರದೇಶದಲ್ಲಿ ತಮ್ಮ ರಾಜ್ಯಗಳಿಗೆ ಸೂಕ್ತವಾದ ಶಿಕ್ಷಣ ಸುಧಾರಣಾ ಯೋಜನೆಯೊಂದನ್ನು ರೂಪಿಸಬೇಕು. ಇದಕ್ಕಾಗಿ ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳು ಮತ್ತು ಇತರ ಸಂಬಂಧಿತ ಪಾಲುದಾರರೊಂದಿಗೆ ಒಂದು ತಿಂಗಳ ಕಾಲ ಸಮಾಲೋಚನೆ ನಡೆಸುವಂತೆಯೂ ನಿರ್ದೇಶನ ನೀಡಲಾಗಿದೆ.

ಇನ್ನು ಮುಂದೆ ದೇಶದಾದ್ಯಂತ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸಲಾಗುವ ಎಲ್ಲಾ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಪಕ್ಷವು ನಿರ್ಣಯಿಸಿದೆ.

ಪ್ರಧಾನಿ ಕ್ಷಮೆಯಾಚನೆಗೆ ಆಗ್ರಹ
ಉತ್ತರಾಖಂಡದ ಹಲ್ದ್ವಾನಿಯಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಬಳಿಕ ಬಲಪಂಥೀಯ ಗುಂಪುಗಳು ಆ ಜಾಗದಲ್ಲಿ ‘ಶುದ್ಧೀಕರಣ ವಿಧಿ’ ನಡೆಸಿರುವ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಮೆಯಾಚಿಸಬೇಕೆಂದು ಸಿಡಬ್ಲ್ಯೂಸಿ ಆಗ್ರಹಿಸಿದೆ.

ಈ ಕೃತ್ಯವು ಸಂಘ ಪರಿವಾರದ ಮೇಲ್ಜಾತಿ ಮತ್ತು ತಾರತಮ್ಯದ ಮನಸ್ಥಿತಿಯ ಪ್ರತಿಬಿಂಬ. ಖರ್ಗೆ ಅವರ ವಿರುದ್ಧ ಮೋದಿ ಅವರೇ ಹಿಂದೆ ಮಾಡಿದ್ದ ಅವಮಾನಗಳಿಂದ ಅವರ ಬೆಂಬಲಿಗರಿಗೆ ಈ ರೀತಿಯ ಕೃತ್ಯ ನಡೆಸುವುದಕ್ಕೆ ಪ್ರೇರಣೆಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಲಾಗಿದೆ.

ಲೋಕಸಭೆ ಕ್ಷೇತ್ರಗಳ ಪುನರ್‌ವಿಂಗಣೆಯನ್ನು ವಿರೋಧಿಸಿರುವ ಸಿಡಬ್ಲ್ಯೂಸಿ, ಸದಸ್ಯ ಬಲವನ್ನು ಈಗಿರುವ 543ಕ್ಕೆ ಸೀಮಿತಗೊಳಿಸಬೇಕು ಮತ್ತು ಆ ಸಂಖ್ಯೆಯೊಳಗೆ ಮಹಿಳೆಯರಿಗೆ ಮೂರನೇ ಒಂದರಷ್ಟು ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತರಬೇಕು ಎಂದು ನಿರ್ಣಯಿಸಿದೆ.

ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ಸೋನಿಯಾಗಾಂಧಿ, ರಾಹುಲ್‌ಗಾಂಧಿ, ಪ್ರಿಯಾಂಕಾ ಗಾಂಧಿ, ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿ ಹಲವು ನಾಯಕರು ಭಾಗಿಯಾಗಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ನೇಮಕ ಆದ ಬಳಿಕ ಸಹ ಇದೇ ಮೊದಲ ಬಾರಿಗೆ ಸಿಡಬ್ಲ್ಯೂಸಿ ಸಭೆಯಲ್ಲಿ ಉಪಸ್ಥಿತರಿದ್ದರು.

More articles

Latest article

Most read