ಬೆಂಗಳೂರಿನಲ್ಲಿ ನಕಲಿ ಮೆಡಿಸಿನ್ ಪ್ರಕರಣ: ಮತ್ತೊಬ್ಬ ಆರೋಪಿ ವೆಂಕಟೇಶ್ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ಬೆಳಕಿಗೆ ಬಂದಿರುವ ನಕಲಿ ಮೆಡಿಸಿನ್ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಪ್ರಕರಣದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೆಡಿಸಿನ್ ಡಿಸ್ಟ್ರಿಬ್ಯೂಟರ್ ವೆಂಕಟೇಶ್‌ನನ್ನು ಬಂಧಿಸಲಾಗಿದ್ದು, ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಈವರೆಗೆ ಪ್ರಭುದೇವ, ತೇಜಸ್, ನವೀನ್ ಹಾಗೂ ವೆಂಕಟೇಶ್ ಬಂಧನಕ್ಕೊಳಗಾಗಿದ್ದಾರೆ. ನಕಲಿ ಅಥವಾ ಕಳಪೆ ಗುಣಮಟ್ಟದ ಔಷಧಿಗಳ ತಯಾರಿಕೆ ಮತ್ತು ವಿತರಣೆಗೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ನಡೆಯುತ್ತಿದೆ.

ಪ್ರಕರಣದ ತನಿಖೆಯ ವೇಳೆ ಔಷಧಿಗಳ ವಿತರಣೆ ಜಾಲ ಹಾಗೂ ಆರೋಪಿಗಳ ನಡುವಿನ ಸಂಪರ್ಕದ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಡಿಸ್ಟ್ರಿಬ್ಯೂಟರ್ ಆಗಿದ್ದ ವೆಂಕಟೇಶ್ ಪಾತ್ರದ ಬಗ್ಗೆಯೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಶೀಘ್ರದಲ್ಲೇ ವಿಶೇಷ ತನಿಖಾ ತಂಡ (SIT) ರಚಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ. SIT ರಚನೆಯಾದ ಬಳಿಕ ನಕಲಿ ಮೆಡಿಸಿನ್ ದಂಧೆಯ ಹಿಂದೆ ಯಾರಿದ್ದಾರೆ, ಔಷಧಿಗಳ ಮೂಲವೇನು ಹಾಗೂ ವಿತರಣಾ ಜಾಲದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ಸಮಗ್ರ ತನಿಖೆ ನಡೆಯುವ ಸಾಧ್ಯತೆಯಿದೆ.

ಈ ನಡುವೆ ಪ್ರಕರಣದಲ್ಲಿ ಬಂಧಿತರಾಗಿರುವ ನಾಲ್ವರನ್ನು ವಿಚಾರಣೆಗೊಳಪಡಿಸಿ, ನಕಲಿ ಔಷಧಿಗಳ ಪೂರೈಕೆ, ಸಂಗ್ರಹಣೆ ಮತ್ತು ಮಾರಾಟಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಹಣಕಾಸು ವ್ಯವಹಾರಗಳ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಪ್ರಕರಣದ ತನಿಖೆ ಮುಂದುವರಿದಿದ್ದು, ಇನ್ನಷ್ಟು ಬಂಧನಗಳು ನಡೆಯುವ ಸಾಧ್ಯತೆ ಇದೆ.

More articles

Latest article

Most read