ತಮ್ಮದೇ ಪೋಸ್ಟರ್‌ ಅಂಟಿಸಿದ್ದಕ್ಕೆ 3 ಎಫ್‌ಐಆರ್: ಕಾನೂನು ಎಲ್ಲರಿಗೂ ಒಂದೇ ಎಂದ ಕೃಷ್ಣ ಬೈರೇಗೌಡ

ಬೆಂಗಳೂರು: ತಮ್ಮ ಭಾವಚಿತ್ರವಿರುವ ಪೋಸ್ಟರ್‌ಗಳನ್ನು ಗೋಡೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಎಫ್‌ಐಆರ್‌ಗಳು ದಾಖಲಿಸಲಾಗಿದೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, ಕರ್ನಾಟಕ ಬಹಿರಂಗ ಸ್ಥಳಗಳ ವಿರೂಪಗೊಳಿಸುವಿಕೆ ಕಾಯ್ದೆಯಡಿ GBA ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ ಎಂದು ಹೇಳಿದ್ದಾರೆ. ತಮ್ಮ ಭಾವಚಿತ್ರವಿರುವ ಪೋಸ್ಟರ್‌ಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸಿ ಅವುಗಳ ಸೌಂದರ್ಯಕ್ಕೆ ಧಕ್ಕೆ ಉಂಟುಮಾಡಿದವರ ವಿರುದ್ಧ ಈ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಜತೆಗೆ, ಸಾರ್ವಜನಿಕ ಸ್ಥಳಗಳ ಗೋಡೆಗಳಿಗೆ ಅಂಟಿಸಲಾಗಿರುವ ಪೋಸ್ಟರ್‌ಗಳನ್ನು ತೆರವುಗೊಳಿಸುವ ಕಾರ್ಯವನ್ನೂ ಅಧಿಕಾರಿಗಳು ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

“ಪೋಸ್ಟರ್‌ಗಳು ನನ್ನದೇ ಆಗಿದ್ದರೂ, ನಿಯಮ ಉಲ್ಲಂಘನೆಗೆ ಯಾವುದೇ ವಿನಾಯಿತಿ ಇಲ್ಲ. ಕಾನೂನು ಎಲ್ಲರಿಗೂ ಒಂದೇ” ಎಂದು ಕೃಷ್ಣ ಬೈರೇಗೌಡರು ತಮ್ಮ ಪೋಸ್ಟ್‌ನಲ್ಲಿ ಸ್ಪಷ್ಟಪಡಿಸಿದ್ದಾರೆ.

More articles

Latest article

Most read