ನಾಲ್ಕು ತಿಂಗಳು, ಹತ್ತು ಪ್ರಕರಣಗಳು, 22 ಮಂದಿಗೆ ಮರಣದಂಡನೆ ವಿಧಿಸಿದ ನ್ಯಾಯಾಧೀಶ! 100 ಕೊಲೆ ಕೇಸ್‌ ಎತ್ತಂಗಡಿ!

ಮುಜಫ್ಫರ್‌ನಗರ, ಆ.20: ನಾಲ್ಕು ತಿಂಗಳ ಅವಧಿಯಲ್ಲಿ 10 ಪ್ರತ್ಯೇಕ ಕೊಲೆ ಪ್ರಕರಣಗಳಲ್ಲಿ ಒಟ್ಟು 22 ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ್ದ ಮುಜಫ್ಫರ್‌ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರ ನ್ಯಾಯಾಲಯದಿಂದ ಸುಮಾರು 100 ಕೊಲೆ ಹಾಗೂ ಇತರೆ ಗಂಭೀರ ಅಪರಾಧ ಪ್ರಕರಣಗಳನ್ನು ವರ್ಗಾಯಿಸಲಾಗಿದೆ.

ಆಡಳಿತಾತ್ಮಕ ಆದೇಶದ ಮೇರೆಗೆ ಈ ಪ್ರಕರಣಗಳನ್ನು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ವೀರೇಂದ್ರ ಕುಮಾರ್ ಸಿಂಗ್ ಅವರ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ ಎಂದು ಸರ್ಕಾರಿ ವಕೀಲ ಕುಲದೀಪ್ ಕುಮಾರ್ ತಿಳಿಸಿದ್ದಾರೆ.

ಅಪರೂಪದಲ್ಲಿ ಅಪರೂಪದ ಅಪರಾಧ ಪ್ರಕರಣಗಳಿಗೆ ವಿಧಿಸಬಹುದಾದ ಮರಣದಂಡನೆಯನ್ನು ಕೇವಲ ನಾಲ್ಕು ತಿಂಗಳಲ್ಲಿ ಇಷ್ಟೊಂದು ಪ್ರಕರಣಗಳಲ್ಲಿ, ಇಷ್ಟೊಂದು ಜನರಿಗೆ ವಿಧಿಸಿರುವುದಾದರೂ ಏಕೆ ಎಂಬ ಪ್ರಶ್ನೆ ಈಗ ಉದ್ಭವಿಸಿದೆ.

ರವಿಕುಮಾರ್ ದಿವಾಕರ್ ಅವರು ಮುಜಫ್ಫರ್‌ನಗರದ ಫಾಸ್ಟ್‌ಟ್ರ್ಯಾಕ್ ಕೋರ್ಟ್ ನಂ.3ರಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಏಪ್ರಿಲ್‌ನಿಂದ ಆಗಸ್ಟ್‌ವರೆಗೆ ಅವರು 10 ಪ್ರತ್ಯೇಕ ಕೊಲೆ ಪ್ರಕರಣಗಳಲ್ಲಿ 22 ಮಂದಿಗೆ ಮರಣದಂಡನೆ ವಿಧಿಸಿರುವುದು ಗಮನ ಸೆಳೆದಿತ್ತು.

ಏಪ್ರಿಲ್ 6ರಂದು ವಕೀಲ ಸಮೀರ್ ಸೈಫಿ ಹತ್ಯೆ ಪ್ರಕರಣದಲ್ಲಿ ಮೂವರಿಗೆ ಮರಣದಂಡನೆ ವಿಧಿಸಲಾಗಿತ್ತು. ಏಪ್ರಿಲ್ 28ರಂದು ಒಂದೇ ಕುಟುಂಬದ ನಾಲ್ವರು ಸದಸ್ಯರ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಜುಲೈ 17ರಂದು ರೈತರೊಬ್ಬರ ಕೊಲೆ ಪ್ರಕರಣದಲ್ಲಿ ನಾಲ್ವರಿಗೆ ಮರಣದಂಡನೆ ವಿಧಿಸಲಾಗಿತ್ತು. ಆಗಸ್ಟ್ 12 ಮತ್ತು 13ರಂದು ನಡೆದ ವಿಚಾರಣೆಗಳಲ್ಲೂ ಅಪಹರಣ ಹಾಗೂ ಕೊಲೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಮರಣದಂಡನೆ ಶಿಕ್ಷೆ ಪ್ರಕಟಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಬಾಕಿ ಇದ್ದ ಕೊಲೆ ಹಾಗೂ ಗಂಭೀರ ಅಪರಾಧ ಪ್ರಕರಣಗಳನ್ನು ಆಡಳಿತಾತ್ಮಕವಾಗಿ ವರ್ಗಾಯಿಸಲಾಗಿದೆ. ಪ್ರಕರಣಗಳ ವರ್ಗಾವಣೆಗೆ ನಿರ್ದಿಷ್ಟ ಕಾರಣವನ್ನು ಆಡಳಿತಾತ್ಮಕ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆಯೇ ಎಂಬುದು ಪ್ರತ್ಯೇಕವಾಗಿ ಪರಿಶೀಲಿಸಬೇಕಿದೆ.

ರವಿಕುಮಾರ್ ದಿವಾಕರ್ ಅವರು 2022ರಲ್ಲಿ ವಾರಾಣಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ವೀಡಿಯೊ ಸಮೀಕ್ಷೆಗೆ ಆದೇಶ ನೀಡುವ ಮೂಲಕ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದ್ದರು.

More articles

Latest article

Most read