ಬೆಂಗಳೂರಲ್ಲಿ ₹9 ಕೋಟಿ ಅಕ್ರಮ ಹಣ ಸಾಗಾಟ: ಕಾರು ಅಡ್ಡಗಟ್ಟಿ ಹಣ ಜಪ್ತಿ

ಬೆಂಗಳೂರು: ನಗರದಲ್ಲಿ ಭಾರಿ ಪ್ರಮಾಣದ ಅಕ್ರಮ ಹಣ ಸಾಗಾಟ ಪತ್ತೆಯಾಗಿದೆ. ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಸಿಗ್ನಲ್ ಬಳಿ ಕ್ರೇಟಾ ಕಾರನ್ನು ಅಡ್ಡಗಟ್ಟಿ ಪರಿಶೀಲಿಸಿದಾಗ ಬರೋಬ್ಬರಿ ₹9 ಕೋಟಿ ನಗದು ಪತ್ತೆಯಾಗಿದೆ.

ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಕಾರನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ನೋಟುಗಳ ಕಂತೆಗಳು ಪತ್ತೆಯಾಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಹಣ ತಮಿಳುನಾಡಿನ ಜ್ಯುವೆಲ್ಲರಿ ಶಾಪ್ ಮಾಲೀಕರೊಬ್ಬರಿಗೆ ಸೇರಿದ್ದು ಎಂದು ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದುಬಂದಿದೆ. ಹಣವನ್ನು ಸೂಕ್ತ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿತ್ತೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

₹9 ಕೋಟಿ ನಗದನ್ನು ಪೊಲೀಸರು ಜಪ್ತಿ ಮಾಡಿದ್ದು, ಹಣದ ಮೂಲ, ಸಾಗಾಟದ ಉದ್ದೇಶ ಹಾಗೂ ದಾಖಲೆಗಳ ಕುರಿತು ತನಿಖೆ ಮುಂದುವರಿದಿದೆ.

More articles

Latest article

Most read