ಸನ್ನಡತೆ ಆಧಾರದಲ್ಲಿ 28 ಜೀವಾವಧಿ ಶಿಕ್ಷಾ ಬಂಧಿಗಳ ಬಿಡುಗಡೆಗೆ ಅನುಮೋದನೆ

ಬೆಂಗಳೂರು : ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 28 ಮಂದಿಯನ್ನು ಅವಧಿಪೂರ್ವ ಬಿಡುಗಡೆ ಮಾಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಒಟ್ಟು 45 ಪ್ರಕರಣಗಳ ಪೈಕಿ 28 ಜೀವಾವಧಿ ಶಿಕ್ಷಾ ಬಂಧಿಗಳನ್ನು ಸನ್ನಡತೆ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಮತ್ತೊಂದು ಒಂದು ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯದ ಸಹಮತಿ ಪಡೆದು ಅವಧಿಪೂರ್ವ ಬಿಡುಗಡೆ ಮಾಡಲು ಅನುಮೋದಿಸಲಾಗಿದೆ. ಹೀಗಾಗಿ ಒಟ್ಟು 29 ಜೀವಾವಧಿ ಶಿಕ್ಷಾ ಬಂಧಿಗಳು ಅವಧಿಪೂರ್ವ ಬಿಡುಗಡೆಗೆ ಅರ್ಹರಾಗಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿರುವ ಜೀವಾವಧಿ ಶಿಕ್ಷಾ ಬಂಧಿಗಳ ಅವಧಿಪೂರ್ವ ಬಿಡುಗಡೆಗೆ ಸಂಬಂಧಿಸಿದಂತೆ ಒಟ್ಟು 45 ಪ್ರಕರಣಗಳನ್ನು ಪರಿಶೀಲಿಸಲಾಗಿತ್ತು. ಸರ್ಕಾರದ ಮಾರ್ಗಸೂಚಿಗಳು, ಬಂಧಿಗಳ ಸನ್ನಡತೆ, ಜೈಲು ವಾಸದ ಅವಧಿ ಸೇರಿದಂತೆ ನಿಗದಿತ ಮಾನದಂಡಗಳ ಆಧಾರದ ಮೇಲೆ ಪ್ರಕರಣಗಳನ್ನು ಪರಿಶೀಲಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಸಂಪುಟದ ನಿರ್ಧಾರವನ್ನು ರಾಜ್ಯಪಾಲರ ಅನುಮೋದನೆಗಾಗಿ ಕಳುಹಿಸಲಾಗುವುದು ಎಂದೂ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಕಾರಾಗೃಹಗಳ ಆಧುನೀಕರಣಕ್ಕೆ ವೇಗ

ರಾಜ್ಯದ ಕಾರಾಗೃಹ ಇಲಾಖೆಯನ್ನು ಆಧುನಿಕ ತಂತ್ರಜ್ಞಾನ ಆಧಾರಿತವಾಗಿ ಬಲಪಡಿಸುವ ನಿಟ್ಟಿನಲ್ಲಿ ವಿವಿಧ ಅತ್ಯಾಧುನಿಕ ಉಪಕರಣಗಳ ಖರೀದಿ ಮತ್ತು ಅಳವಡಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಕಾರಾಗೃಹಗಳಲ್ಲಿ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಕ್ಯಾಮೆರಾಗಳು, ಪೋರ್ಟಬಲ್‌ ಸಿಗ್ನಲ್‌ ಜಾಮರ್‌ಗಳು ಹಾಗೂ ಕೈದಿಗಳ ದೂರವಾಣಿ ಕರೆ ವ್ಯವಸ್ಥೆ ಸೇರಿದಂತೆ ಹಲವು ಆಧುನಿಕ ಉಪಕರಣಗಳನ್ನು ಅಳವಡಿಸಲಾಗುವುದು. ಇದರಿಂದ ಅನಧಿಕೃತ ಚಟುವಟಿಕೆಗಳನ್ನು ತಡೆಗಟ್ಟಲು ಹಾಗೂ ಭದ್ರತಾ ಮೇಲ್ವಿಚಾರಣೆಯನ್ನು ಪರಿಣಾಮಕಾರಿಗೊಳಿಸಲು ನೆರವಾಗಲಿದೆ  ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

More articles

Latest article

Most read