ಬೆಂಗಳೂರು ; ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಗೌತಮ್ ಅದಾನಿ ಅವರು ಇಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದ ಮನೆಗೆ ಭೇಟಿ ಮಾಡಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.
ರಾಜ್ಯದಲ್ಲಿ ಉದ್ಯಮ ಸ್ಥಾಪನೆಗೆ ಅವಕಾಶಗಳು, ಹಾಗೂ ಬೆಂಗಳೂರಿನ ಬಹುನಿರೀಕ್ಷಿತ ಸುರಂಗ ರಸ್ತೆ ಯೋಜನೆಯ ಗುತ್ತಿಗೆ ಹಂಚಿಕೆಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗಿದ್ದು ಇದೊಂದು ಸೌಹಾರ್ದಯುತ ಭೇಟಿ ಅಂತ ಇಬ್ಬರು ತಿಳಿಸಿದ್ದಾರೆ.

