ಬಿ.ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಬೃಹತ್‌ ಪ್ರತಿಭಟನೆ

ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ  ಎರಡು ತಂಡಗಳಾಗಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸುತ್ತಿವೆ.

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಮುತ್ತಿಗೆ ಹಾಕಲು ಪ್ರಯತ್ನಿಸುವಾಗ ಬಿಜೆಪಿ ನಾಯಕ ಸಿ.ಟಿ.ರವಿ, ಎನ್. ರವಿಕುಮಾರ್, ಮತ್ತು ಪ್ರೀತಂ ಗೌಡ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.
ಆರ್‌.ಅಶೋಕ್‌, ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವು ಮುಖಂಡರು ಸರ್ಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕಳೆದ ಒಂದು ವಾರದಿಂದ ಸದನದ ಒಳಗೆ ಮತ್ತು ಹೊರಗೆ ಈ ವಿಚಾರದಲ್ಲಿ ಗದ್ದಲ ಸೃಷ್ಟಿಸಿರುವ ಬಿಜೆಪಿ, ತನ್ನ ಹೋರಾಟವನ್ನು ನಿರ್ಣಾಯಕ ಹಂತಕ್ಕೆ ಕೊಂಡೊಯ್ಯಲು ಮುಂದಾಗಿದೆ. ಇಂದು ಸಾವಿರಾರು ಕಾರ್ಯಕರ್ತರೊಂದಿಗೆ ಬಿಜೆಪಿ ನಾಯಕರು ವಿಧಾನಸೌಧಕ್ಕೆ ಮುತ್ತಿಗೆ  ಹಾಕಲು ಬೆಂಗಳೂರು ನಗರದ ಪ್ರತಿ ವಿಧಾನಸಭಾ ಕ್ಷೇತ್ರದಿಂದ ತಲಾ 200 ಕಾರ್ಯಕರ್ತರು  ಆಗಮಿಸಿದ್ದಾರೆ. 

More articles

Latest article

Most read