ಬಿ. ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ, ಅಧಿಕೃತ ಘೋಷಣೆಯೊಂದೇ ಬಾಕಿ

ಬೆಂಗಳೂರು : ನಿರೀಕ್ಷೆಯಂತೆ ಸಚಿವ ಸ್ಥಾನಕ್ಕೆ  ಬಿ. ನಾಗೇಂದ್ರ  ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ಬಿ.ನಾಗೇಂದ್ರ ನೀಡಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿಗಳು ಈ ರಾಜೀನಾಮೆಯನ್ನು ಅಂಗೀಕರಿಸತ್ತಾರೋ ಇಲ್ಲವೋ ಎಂಬುದನ್ನು ನೋಡಬೇಕಾಗಿದೆ. ಅಲ್ಲದೇ ಈ ಬಗ್ಗೆ ಹೈಕಮಾಂಡ್‌ನಿಂದ ಸ್ಪಷ್ಟ ಸಂದೇಶ ಬಂದಿಲ್ಲ ಎನ್ನಲಾಗಿದೆ.  

ತಮ್ಮನ್ನು ಅನಗತ್ಯವಾಗಿ ಟಾರ್ಗೆಟ್ ಮಾಡಲಾಗುತ್ತಿದೆ. ತಮ್ಮಿಂದಾಗಿ ಪಕ್ಷಕ್ಕೆ ಮುಜುಗರವಾಗುವುದು ಬೇಡ. ಹೀಗಾಗಿ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ನಾಗೇಂದ್ರ ಅವರು ಸಿಎಂಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಸದ್ಯ ನಾಗೇಂದ್ರ ಅವರ ರಾಜೀನಾಮೆ ಕುರಿತ ಚರ್ಚೆ ಕಾಂಗ್ರೆಸ್ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದು, ಸಿಎಂ ಮುಂದಿನ ನಡೆ ಏನು ಎಂಬುದರ ಮೇಲೆ ಎಲ್ಲರ ಗಮನ ನೆಟ್ಟಿದೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸೆ.1 ರಿಂದ 10 ದಿನಗಳ ಕಾಲ ಬಳ್ಳಾರಿ ಚಲೋ ಪಾದಯಾತ್ರೆ ಘೋಷಣೆ ಮಾಡಿದೆ. ಬಿಜೆಪಿ ಪಾದಯಾತ್ರೆಗೆ ಮುನ್ನವೇ ನಾಗೇಂದ್ರ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಮತ್ತು ಕಾಂಗ್ರೆಸ್‌ ಹೈಕಮಾಂಡ್‌ ನಾಯಕರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ಕುತೂಹಲ ಹೆಚ್ಚಾಗಿದೆ

More articles

Latest article

Most read