RSS ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಜಾಮೀನು

ಬೆಂಗಳೂರು : RSS ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಯುವ ನಾಯಕ ಮೊಹಮ್ಮದ್ ನಲಪಾಡ್ ಹ್ಯಾರಿಸ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಹಿಂದುತ್ವ ಕಾರ್ಯಕರ್ತ ತೇಜಸ್ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಪ್ರಿಯಾಂಕ್ ಖರ್ಗೆ ಹಾಗೂ ನಲಪಾಡ್ ಹ್ಯಾರಿಸ್ ಅವರಿಗೆ ಸೂಚಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರೂ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾದರು.

ಇಬ್ಬರ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಪ್ರಿಯಾಂಕ್ ಖರ್ಗೆ ಹಾಗೂ ನಲಪಾಡ್ ಹ್ಯಾರಿಸ್ ಅವರಿಗೆ ತಲಾ 10 ಸಾವಿರ ರೂಪಾಯಿ ವೈಯಕ್ತಿಕ ಬಾಂಡ್ ಹಾಗೂ ಷರತ್ತುಗಳೊಂದಿಗೆ ಜಾಮೀನು ಮಂಜೂರು ಮಾಡಿದೆ.

RSS ಕುರಿತು ನೀಡಿದ ಹೇಳಿಕೆಗಳಿಗೆ ಸಂಬಂಧಿಸಿದಂತೆ ತೇಜಸ್ ಗೌಡ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಪ್ರಕರಣದ ಮುಂದಿನ ವಿಚಾರಣೆಯಲ್ಲಿ ನ್ಯಾಯಾಲಯದ ಸೂಚನೆಗಳು ಹಾಗೂ ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆ ನಿರ್ಧಾರವಾಗಲಿದೆ.

More articles

Latest article

Most read