ರಾಜ್ಯಸಭೆ ಚುನಾವಣೆ: ಬಿಜೆಪಿ ಶಾಸಕ ಎಸ್​​ಟಿ ಸೋಮಶೇಖರ್​ ಅಡ್ಡ ಮತದಾನ

Most read

ಕರ್ನಾಟಕದ ರಾಜ್ಯಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಯಶವಂತಪುರ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ‘ಆತ್ಮಸಾಕ್ಷಿಯಂತೆ ಮತ ಹಾಕಿದ್ದೇನೆ’ ಎಂದು ಹೇಳಿ ನೀಡಿದ್ದು ಕಾಂಗ್ರೆಸ್ (Congress) ಪರ ಅಡ್ಡ ಮತದಾನ ಮಾಡಿದ್ದಾರೆ ಎಂದು ಕುತೂಹಲ ಕೆರಳಿಸಿದ್ದಾರೆ.

ಬಿಜೆಪಿ ಮೂಲಗಳ ಪ್ರಕಾರ ಅವರು ಅಡ್ಡ ಮತದಾನ ಮಾಡಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಪರವಾಗಿ ಮತ ಹಾಕಿದ್ದಾರೆ. ಇದೇ ವೇಳೆ ಇನ್ನೋರ್ವ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ನಡೆ ಏನು ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಈವರೆಗೆ ಅವರು ಮತದಾನ ಮಾಡಲು ಆಗಮಿಸಿಲ್ಲ.

ಕಾಂಗ್ರೆಸ್ ರಾಜ್ಯದಿಂದ ಅಜಯ್ ಮಕೇನ್, ಸಯ್ಯದ್ ನಸೀರ್ ಹುಸೇನ್ ಮತ್ತು ಜಿ.ಸಿ.ಚಂದ್ರಶೇಖರ್ ರನ್ನು ಕಣಕ್ಕಿಳಿಸಿದೆ. ಇತ್ತ ಬಿಜೆಪಿ ನಾರಾಯಣಸಾ ಬಾಂಡಗೆಯನ್ನು ಕಣಕ್ಕಿಳಿಸಿದೆ. ಇನ್ನು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಸಿದೆ. ಐದನೇ ಅಭ್ಯರ್ಥಿ ಕಣಕ್ಕಿಳಿಸಿರುವುದರಿಂದ ರಾಜ್ಯಸಭೆ ಚುನಾವಣಾ ಅಖಾಡ ಕಳೆಗಟ್ಟುವಂತೆ ಮಾಡಿದೆ.

ಅಭ್ಯರ್ಥಿಯ ಗೆಲುವಿಗೆ 45 ಮೊದಲ ಪ್ರಾಶಸ್ತ್ಯದ ಮತಗಳ ಅಗತ್ಯವಿದೆ. ಕಾಂಗ್ರೆಸ್ ಶಾಸಕರ ಬಲ ಸದ್ಯಕ್ಕೆ 134 ಇದೆ. ಬಿಜೆಪಿ 66 ಶಾಸಕರ ಬಲ ಹೊಂದಿದೆ. ಇತ್ತ ಜೆಡಿಎಸ್ 19 ಶಾಸಕರ ಬಲ ಹೊಂದಿದೆ. ಸರ್ವೋದಯ ಕರ್ನಾಟಕ‌ ಪಕ್ಷದ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ, ಪಕ್ಷೇತರ ಅಭ್ಯರ್ಥಿಗಳಾದ ಲತಾ ಮಲ್ಲಿಕಾರ್ಜುನ, ಗೌರಿಬಿದನೂರು ಶಾಸಕ ಪುಟ್ಟ ಸ್ವಾಮಿಗೌಡ ಮತಗಳು ಈಗ ನಿರ್ಣಾಯಕವಾಗಿವೆ.

More articles

Latest article