ರಾಜಕಾರಣಿಗಳು ವೈದ್ಯರ ಮೇಲೆ ಹಲ್ಲೆ ಮಾಡಿದರೆ ತಡಮಾಡದೇ ಅರೆಸ್ಟ್ ಮಾಡಿ : ಸುಪ್ರೀಂ ಕೋರ್ಟ್

ಹೊಸದಿಲ್ಲಿ ಸೆ. 7 : ಮಹಾರಾಷ್ಟ್ರದಲ್ಲಿ ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ಮೇಲೆ ರಾಜಕೀಯ ಪಕ್ಷಗಳ ಕಾರ್ಯಕರ್ತರು ನಡೆಸುತ್ತಿರುವ ಹಲ್ಲೆ ಪ್ರಕರಣಗಳ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ತೀವ್ರ ಆತಂಕ ವ್ಯಕ್ತಪಡಿಸಿದೆ. ವೈದ್ಯರ ಮೇಲೆ ಹಲ್ಲೆ ನಡೆಸಿದ ರಾಜಕಾರಣಿಗಳನ್ನು ಯಾವುದೇ ಕಾರಣಕ್ಕೂ ಹೊರಗೆ ತಿರುಗಾಡಲು ಬಿಡಬಾರದು, ಅವರನ್ನು ಕೂಡಲೇ ವಶಕ್ಕೆ ಪಡೆಯಬೇಕು ಎಂದು ಸೂಚಿಸಿದೆ.

ಶಿವಸೇನಾ ಕೌನ್ಸಿಲರ್ ರಮೇಶ್ ಮಾಥ್ರೆ ಅವರಿಗೆ ಸಂಬಂಧಿಸಿದ ವೈದ್ಯರ ಮೇಲಿನ ಹಲ್ಲೆ ಪ್ರಕರಣದ ವಿಚಾರಣೆ ವೇಳೆ ನ್ಯಾಯಮೂರ್ತಿಗಳ ಪೀಠ ಈ ಕಠಿಣ ನಿಲುವು ವ್ಯಕ್ತಪಡಿಸಿದೆ. ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಮೇಲೆ ನಡೆಯುವ ದಾಳಿಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ನ್ಯಾಯಾಲಯ ಈ ಹಿಂದೆಯೂ ಹೇಳಿತ್ತು. ವೈದ್ಯರ ಮೇಲೆ ಹಲ್ಲೆ ನಡೆಸುವವರಿಗೆ ಜಾಮೀನು ನೀಡುವ ವಿಚಾರದಲ್ಲೂ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.

17 ಮಂದಿ ವಿರುದ್ಧ ಪ್ರಕರಣ

ಇತ್ತೀಚೆಗೆ ಮಹಾರಾಷ್ಟ್ರದ ಪಾಲ್ಘರ್‌ನ ಖಾಸಗಿ ಆಸ್ಪತ್ರೆಯಲ್ಲಿ ದಹಿಹಂಡಿ ಕಾರ್ಯಕ್ರಮದಲ್ಲಿ ಗಾಯಗೊಂಡಿದ್ದ ವ್ಯಕ್ತಿಯ ಚಿಕಿತ್ಸೆಗೆ ಸಂಬಂಧಿಸಿದ ವಿವಾದದ ವೇಳೆ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ ನಡೆದಿತ್ತು. ಈ ಪ್ರಕರಣದಲ್ಲಿ ಶಿವಸೇನೆಯ ಮುಖಂಡರು ಸೇರಿದಂತೆ 17 ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆಸ್ಪತ್ರೆಯ ಸಿಬ್ಬಂದಿಯನ್ನು ಥಳಿಸಿದ ಆರೋಪವೂ ಕೇಳಿಬಂದಿದೆ.

ಇದೇ ವೇಳೆ, ಡೊಂಬಿವ್ಲಿಯ ಶಾಸ್ತ್ರಿನಗರ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲೂ ಶಿವಸೇನಾ ಕೌನ್ಸಿಲರ್ ರಮೇಶ್ ಮಾತ್ರೆ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಜಾಮೀನು ವಿಚಾರವೇ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬಂದಿದೆ.

ರಮೇಶ್ ಮಾತ್ರೆ ಅವರ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರವೂ ಕ್ರಮ ಕೈಗೊಳ್ಳಲು ಮುಂದಾಗಿದೆ. ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ನೋಟಿಸ್ ಜಾರಿ ಮಾಡಿದ್ದು, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 28ಕ್ಕೆ ನಿಗದಿಪಡಿಸಿದೆ.

More articles

Latest article

Most read