ಅಬಕಾರಿ ಪ್ರಕರಣದಲ್ಲಿ ಅಲ್ಲ, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಅಡಿ ಇ.ಡಿ ಶೋಧ

ಬೆಂಗಳೂರು : ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA)–1999ರ ಅಡಿಯಲ್ಲಿ ಸತೀಶ್ ಜಾರಕಿಹೊಳಿ ಅವರ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

ಸತೀಶ್‌ ಜಾರಕಿಹೊಳಿ ಅವರ  ಆಪ್ತರ ಮನೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ಇಡಿ ಮಾಹಿತಿ ನೀಡಿದೆ. ವಿದೇಶಗಳಲ್ಲಿ ನಡೆದಿರುವ ಎನ್ನಲಾದ ಅಕ್ರಮ ಹೂಡಿಕೆಗಳು ಹಾಗೂ ಹಣಕಾಸು ವಹಿವಾಟುಗಳ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಸತೀಶ್ ಜಾರಕಿಹೊಳಿ ಅವರ ಬೆಂಗಳೂರು ಡಾಲರ್ಸ್ ಕಾಲೋನಿ ನಿವಾಸದ ಮೇಲೆ ಬುಧವಾರ ಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಬೆಳವಣಿಗೆಗೆ ಮುನ್ನ ಜೂನ್‌ನಲ್ಲಿ ಮಂಜುನಾಥ್ ಅವರ ನಿವಾಸ ಸೇರಿದಂತೆ ಬೆಂಗಳೂರು, ಬೆಳಗಾವಿ, ಮೈಸೂರು ಹಾಗೂ ಅಥಣಿ ಭಾಗಗಳಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.

ಆಫ್ರಿಕಾದಲ್ಲಿ ಅಸ್ತಿತ್ವದಲ್ಲಿರುವ ಈ ಗಣಿಗಾರಿಕೆ ಕಂಪನಿಗೆ ಪುತ್ರ ರಾಹುಲ್ ಜಾರಕಿಹೊಳಿ ನಿರ್ದೇಶಕರಾಗಿದ್ದು, ಸತೀಶ್ ಜಾರಕಿಹೊಳಿ ಅವರ ಸಹೋದರಿ ಲಕ್ಷ್ಮಿ ಕೂಡ ನಿರ್ದೇಶಕಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವಿದೇಶಗಳಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಹಣ ಹೂಡಿಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸತೀಶ್ ಜಾರಕಿಹೊಳಿ ಆಫ್ರಿಕಾದಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆ ವ್ಯವಹಾರದಲ್ಲಿ ಭಾರಿ ಮೊತ್ತದ ಹಣ ಹೂಡಿಕೆ ಮಾಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.

More articles

Latest article

Most read