ಬೆಳಗಾವಿಯಲ್ಲಿ ಫ್ರಿಡ್ಜ್‌ ಸ್ಫೋಟ : ಒಂದೇ ಕುಟುಂಬದ ನಾಲ್ವರು ದುರ್ಮರಣ

ಬೆಳಗಾವಿ: ಸೋಮವಾರ ತಡರಾತ್ರಿ ನಗರದ ಕೇಂದ್ರ ಬಸ್ ನಿಲ್ದಾಣದ ಸಮೀಪವಿರುವ ಚವಟ ಗಲ್ಲಿಯಲ್ಲಿನ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ, ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಗಜಾನನ ದಾಮೋನೆ (65), ಶಾರದಾ ದಾಮೋನೆ (45), ಭಾರತಿ ದಾಮೋನೆ (50) ಮತ್ತು ರೋಷನ್ ದಾಮೋನೆ (21) ಎಂದು ಗುರುತಿಸಲಾಗಿದೆ. ಪ್ರಿಯಾ ದಾಮೋನೆ (28) ಮತ್ತು ಗಂಗಾ ದಾಮೋನೆ (25) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಕಿ ಕ್ಷಣಾರ್ಧದಲ್ಲೇ ಇಡೀ ಮನೆಯನ್ನು ಆವರಿಸಿಕೊಂಡಿದ್ದರಿಂದ, ಮನೆಯಲ್ಲಿದ್ದವರು ಹೊರಬರಲು ಸಾಧ್ಯವಾಗದೆ ಸಿಕ್ಕಿಹಾಕಿಕೊಂಡ ಪರಿಣಾಮ ಈ ಘಟನೆ ನಡೆದಿದೆ. ಗಣೇಶ ಚತುರ್ಥಿ ಆಚರಣೆಯಲ್ಲಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಸ್ಥಳೀಯರಲ್ಲಿ ಆಘಾತವನ್ನುಂಟುಮಾಡಿದೆ. ಹಬ್ಬದ ಸಂಭ್ರಮದ ನಡುವೆಯೇ ಈ ಘಟನೆ ಸಂಭವಿಸಿರುವುದು ಕುಟುಂಬದವರನ್ನು ತೀವ್ರ ದುಃಖದಲ್ಲಿ ಮುಳುಗುವಂತೆ ಮಾಡಿದೆ. ಈ ಅಗ್ನಿ ಅವಘಡವು ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

ರೆಫ್ರಿಜರೇಟರ್ ಸ್ಫೋಟ ಮತ್ತು ಬೆಂಕಿ ಕಾಣಿಸಿಕೊಳ್ಳಲು ನಿಖರವಾದ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ. 

More articles

Latest article

Most read